ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೀದಿ ನಾಯಿಗಳ ದಾಳಿಗೆ ಸೇಡಂ ಜನ ತತ್ತರ: ಒಂದೇ ದಿನ ನಾಲ್ವರ ಮೇಲೆ ದಾಳಿ; ಗಾಯಾಳುಗಳು ಸರ್ಕಾರಿ ಆಸ್ಪತ್ರೆಗೆ ದಾಖಲು

ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರಗೊಂಡಿದ್ದು, ಒಂದೇ ದಿನ ನಾಲ್ವರು ಪಾದಚಾರಿಗಳ ಮೇಲೆ ನಾಯಿ ದಾಳಿ ನಡೆಸಿದ ಘಟನೆ ಪಟ್ಟಣದ ವೆಂಕಟೇಶ ನಗರದಲ್ಲಿ ನಡೆದಿದೆ. ರಸ್ತೆಯಲ್ಲಿ ತೆರಳುತ್ತಿದ್ದ ನಾಲ್ವರು ಪಾದಚಾರಿಗಳ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ಕಣ್ಣು, ಕೈ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಸೇಡಂ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೀದಿ ನಾಯಿಗಳ ದಾಳಿಗೆ ಸೇಡಂ ಜನ ತತ್ತರ

-

Profile
Ashok Nayak Oct 28, 2026 11:08 AM

ಕಲಬುರಗಿ: ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರಗೊಂಡಿದ್ದು, ಒಂದೇ ದಿನ ನಾಲ್ವರು ಪಾದಚಾರಿಗಳ ಮೇಲೆ ನಾಯಿ ದಾಳಿ ನಡೆಸಿದ ಘಟನೆ ಪಟ್ಟಣದ ವೆಂಕಟೇಶ ನಗರದಲ್ಲಿ ನಡೆದಿದೆ.

ರಸ್ತೆಯಲ್ಲಿ ತೆರಳುತ್ತಿದ್ದ ನಾಲ್ವರು ಪಾದಚಾರಿಗಳ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ಕಣ್ಣು, ಕೈ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಸೇಡಂ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Sedam News: ಸೇಡಂನಲ್ಲಿ ಪಥ ಸಂಚಲನಕ್ಕೆ ಮುಂದಾದ ಆರ್‌ಎಸ್‌ಎಸ್‌ ಗಣವೇಷಧಾರಿಗಳು ವಶಕ್ಕೆ

ಪಟ್ಟಣದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಆತಂಕಕ್ಕೊಳ ಗಾಗಿದ್ದಾರೆ. ಪ್ರಮುಖ ರಸ್ತೆಗಳು ಹಾಗೂ ವಸತಿ ಪ್ರದೇಶಗಳಲ್ಲಿ ನಾಯಿಗಳ ಹಾವಳಿ ಹೆಚ್ಚಿದ್ದು, ಮಕ್ಕಳು, ವೃದ್ಧರು ಹಾಗೂ ಪಾದಚಾರಿಗಳು ಹೊರಗೆ ಸಂಚರಿಸಲು ಹಿಂದೇಟು ಹಾಕುವಂತಾಗಿದೆ.

ಬೀದಿ ನಾಯಿಗಳ ನಿಯಂತ್ರಣಕ್ಕೆ ಪುರಸಭೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ನಾಯಿಗಳ ಹಾವಳಿ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.