16 ಲಕ್ಷ ಫಾಲೋವರ್ಸ್ ಹೊಂದಿದ್ದ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆ
ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ನಲ್ಲಿ 16 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದ ಸಾಮಾಜಿಕ ಮಾಧ್ಯಮ ಪ್ರಭಾವಿ ನಿಧಿ ತಿವಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 2024ರಲ್ಲಿ 'ಮಿಸ್ ಪ್ರೆಟ್ಟಿ ಇಂಡಿಯಾ' ಪ್ರಶಸ್ತಿ ಗೆದ್ದಿದ್ದ ನಿಧಿ ಮಾಡೆಲಿಂಗ್ ಮತ್ತು ನಟನಾ ಕ್ಷೇತ್ರದಲ್ಲಿ ವೃತ್ತಿ ಜೀವನ ರೂಪಿಸಲು ಪ್ರಯತ್ನಿಸುತ್ತಿದ್ದರು. ಅವರ ಆತ್ಮಹತ್ಯೆಗೆ ನಿಖರ ಕಾರಣಗಳು ಏನು ಎಂಬುದು ತಿಳಿದು ಬಂದಿಲ್ಲ.
ಸಂಗ್ರಹ ಚಿತ್ರ -
ಭೋಪಾಲ್: ಸಾಮಾಜಿಕ ಮಾಧ್ಯಮ ( Social media influencer) ಪ್ರಭಾವಿ ನಿಧಿ ತಿವಾರಿ (30) (Nidhi Tiwari) ನೇಣು ಬಿಗಿದುಕೊಂಡು ಆತ್ಮಹತ್ಯೆ (self harm) ಮಾಡಿಕೊಂಡಿದ್ದಾರೆ. ಅವರಿಗೆ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ 16 ಲಕ್ಷಕ್ಕೂ ಹೆಚ್ಚು ಅನುಯಾಯಿಗಳಿದ್ದರು. 2024ರಲ್ಲಿ 'ಮಿಸ್ ಪ್ರೆಟ್ಟಿ ಇಂಡಿಯಾ' ಪ್ರಶಸ್ತಿ ಗೆದ್ದಿದ್ದ ಅವರು ಮಾಡೆಲಿಂಗ್ ಮತ್ತು ನಟನಾ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ರೂಪಿಸಲು ಪ್ರಯತ್ನಿಸುತ್ತಿದ್ದು, ಶನಿವಾರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮೊದಲು ಅವರು ಯಾರೊಂದಿಗೋ ಫೋನ್ ನಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದೆ.
ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯ ಭುಸಾ ಮೋಡ್‌ನಲ್ಲಿರುವ ಮನೆಯಲ್ಲಿ ನಿಧಿ ತಿವಾರಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣವೇ ಕುಟುಂಬದವರು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಸಿನಿಮಾಕ್ಕೂ ಮುನ್ನ 22 ನಿಮಿಷ ಜಾಹೀರಾತು ಪ್ರದರ್ಶನ: ಚಿತ್ರಮಂದಿರಕ್ಕೆ 75,000 ರೂ. ದಂಡ ವಿಧಿಸಿದ ಕೋರ್ಟ್!
ನಟನೆ ಮತ್ತು ಚಲನಚಿತ್ರೋದ್ಯಮದಲ್ಲಿ ವೃತ್ತಿಜೀವನವನ್ನು ರೂಪಿಸಲು ಪ್ರಯತ್ನಿಸುತ್ತಿದ್ದ ನಿಧಿ ಅವರು ಮಾಡೆಲಿಂಗ್, ಕಾರ್ಯಕ್ರಮ ಮತ್ತು ಡಿಜಿಟಲ್ ವಿಷಯ ರಚನೆಯಲ್ಲಿ ಸಕ್ರಿಯರಾಗಿದ್ದರು. ಅವರ ಪೋಸ್ಟ್ ಗಳು ಪ್ರತಿನಿತ್ಯ ಸಾವಿರಾರು ಪ್ರತಿಕ್ರಿಯೆಗಳನ್ನು ಪಡೆಯುತ್ತಿದ್ದವು. ಅವರ ವಿಡಿಯೋಗಳನ್ನು ಲಕ್ಷಾಂತರ ಮಂದಿ ನೋಡುತ್ತಿದ್ದರು.
ನಿಧಿ ಅವರ ಆತ್ಮಹತ್ಯೆಗೆ ಸಂಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಅವರ ಕರೆ ದಾಖಲೆಗಳು, ಡಿಜಿಟಲ್ ಚಟುವಟಿಕೆಗಳು ಮತ್ತು ಇತರ ಸಾಕ್ಷ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಸಾವಿಗೂ ಮುನ್ನ ಫೋನ್ ನಲ್ಲಿ ಅವರು ನಡೆಸಿರುವ ಸಂಭಾಷಣೆಗಳನ್ನು ಪರಿಶೀಲಿಸಲಾಗುತ್ತಿದೆ. ತನಿಖೆ ಪೂರ್ಣಗೊಳ್ಳುವ ಮುನ್ನವೇ ಆತ್ಮಹತ್ಯೆಗೆ ಕಾರಣದ ಬಗ್ಗೆ ಯಾವುದೇ ಅಂತಿಮ ತೀರ್ಮಾನಕ್ಕೆ ಬರಲಾಗುವುದಿಲ್ಲ ಎಂದು ಮೊರ್ವಾ ಪೊಲೀಸ್ ಠಾಣೆಯ ಉಸ್ತುವಾರಿ ಡಾ. ಜ್ಞಾನೇಂದ್ರ ಸಿಂಗ್ ತಿಳಿಸಿದ್ದಾರೆ.
ಸೋನಿಪತ್ ಸತ್ಲೋಕ್ ಆಶ್ರಮದಲ್ಲಿ 11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಸ್ವಯಂಸೇವಕನ ಬಂಧನ
ನಿಧಿ ಅವರಿಗೆ ಫೇಸ್‌ಬುಕ್‌ನಲ್ಲಿ ಸುಮಾರು 9 ಲಕ್ಷ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ಸುಮಾರು 7 ಲಕ್ಷ ಫಾಲೋವರ್ಸ್ ಇದ್ದರು. ಅವರ ಸಾವಿನ ಸುದ್ದಿ ಕೇಳಿ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಶೋಕವನ್ನು ವ್ಯಕ್ತಪಡಿಸಿದ್ದಾರೆ.