Self Harming: ಆ್ಯಪಲ್ ಕಂಪನಿ ಉದ್ಯೋಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
ಮೃತ ಯುವತಿಯನ್ನು ಯಶಸ್ವಿನಿ (22) ಎಂದು ಗುರುತಿಸಲಾಗಿದೆ. ಯುವತಿ ಸ್ನಾನದ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಕಳೆದ ಐದು ತಿಂಗಳಿಂದ ದೊಡ್ಡಬಳ್ಳಾಪುರದಲ್ಲಿರುವ ಆ್ಯಪಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಮೃತ ಯಶಸ್ವಿನಿ -
ನೆಲಮಂಗಲ, ಮಾ.27: ಆ್ಯಪಲ್ ಕಂಪನಿಯಲ್ಲಿ ಕೆಲಸ ಮಾಡುವ ಯುವತಿಯೊಬ್ಬಳು (Apple emloyee) ತನ್ನ ಮನೆಯಲ್ಲಿ ಪೆಟ್ರೋಲ್ (Petrol) ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ (Self harming) ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ (Nelamangala) ತಾಲ್ಲೂಕಿನ ಕೆ.ಜಿ. ಶ್ರೀನಿವಾಸಪುರ ಗ್ರಾಮದ ಬಳಿ ಈ ಮನಕಲಕುವ ಘಟನೆ ನಡೆದಿದೆ.
ಮೃತ ಯುವತಿಯನ್ನು ಯಶಸ್ವಿನಿ (22) ಎಂದು ಗುರುತಿಸಲಾಗಿದೆ. ಯುವತಿ ಸ್ನಾನದ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಕಳೆದ ಐದು ತಿಂಗಳಿಂದ ದೊಡ್ಡಬಳ್ಳಾಪುರದಲ್ಲಿರುವ ಆ್ಯಪಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸಾಮಾನ್ಯ ಜೀವನ ನಡೆಸುತ್ತಿದ್ದ ಯುವತಿ ಇಂತಹ ಕಠಿಣ ನಿರ್ಧಾರಕ್ಕೆ ಏಕೆ ಮುಂದಾದರು ಎಂಬುದು ಇದೀಗ ಪ್ರಶ್ನೆಯಾಗಿದೆ.
ಮಾಹಿತಿ ಪ್ರಕಾರ, ಯಶಸ್ವಿನಿ ಮನೆಯಿಂದ ಹೊರಗೆ ಇರುವ ಸ್ನಾನದ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಗಂಭೀರವಾಗಿ ಸುಟ್ಟ ಗಾಯಗಳಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಯ ಮುನ್ನ ಯಶಸ್ವಿನಿ ದಾಬಸ್ ಪೇಟೆಯ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಖರೀದಿಸಿದ ದೃಶ್ಯ ಅಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
Self harming: ರಾಜ್ಯದಲ್ಲೊಂದು ಮನಕಲಕುವ ಘಟನೆ, ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ
ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ದಾಬಸ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಕುಟುಂಬದವರಿಂದ ಹಾಗೂ ಪರಿಚಿತರರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಯಶಸ್ವಿನಿ ಸಾವಿನಿಂದ ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ.