Self Harming: ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಮತ್ತೊಬ್ಬಳ ಸ್ಥಿತಿ ಗಂಭೀರ
Self Harming: ಬೆಳಗಾವಿ ನಗರದ ಜೋಶಿಮಾಳ್‌ನಲ್ಲಿ ದುರ್ಘಟನೆ ನಡೆದಿದೆ. ಮೃತ ದುರ್ದೈವಿಗಳನ್ನು ಸಂತೋಷ ಕುರುಡೇಕರ್ (44), ಸುವರ್ಣ ಹಾಗು ಮಂಗಳ ಎಂದು ಗುರುತಿಸಲಾಗಿದೆ. ವಿಷ ಸೇವಿಸಿದ ಸುನಂದ ಕುರುಡೇಕರ್ ಎಂಬವರ ಸ್ಥಿತಿ ಗಂಭೀರವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾಂದರ್ಭಿಕ ಚಿತ್ರ

ಬೆಳಗಾವಿ: ಬೆಳಗಾವಿಯಲ್ಲಿ (Belagavi news) ಘೋರವಾದ ದುರಂತ ಸಂಭವಿಸಿದೆ. ವಿಷ (Poison) ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ (Self harming) ಯತ್ನಿಸಿದ್ದು, ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮತ್ತೊಬ್ಬಳ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿ ನಗರದ ಜೋಶಿಮಾಳ್‌ನಲ್ಲಿ ಈ ದುರ್ಘಟನೆ ನಡೆದಿದೆ. ಮೃತ (death) ದುರ್ದೈವಿಗಳನ್ನು ಸಂತೋಷ ಕುರುಡೇಕರ್ (44), ಸುವರ್ಣ ಹಾಗು ಮಂಗಳ ಎಂದು ಗುರುತಿಸಲಾಗಿದೆ. ವಿಷ ಸೇವಿಸಿದ ಸುನಂದ ಕುರುಡೇಕರ್ ಎಂಬವರ ಸ್ಥಿತಿ ಗಂಭೀರವಾಗಿದೆ.
ಸುನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆತ್ಮಹತ್ಯೆಗೆ ಕಾರಣ ಏನು ಎಂಬುದನ್ನು ಪರಿಶೀಲನೆ ಮಾಡುತ್ತಿದ್ದಾರೆ. ಸಾಲದ ಹೊರೆ ಸಾಮೂಹಿಕ ಆತ್ಮಹತ್ಯೆಗೆ ಕಾರಣ ಇರಬಹುದು ಎಂದು ಶಂಕಿಸಲಾಗಿದೆ.
ಚೀಟಿ ಹೆಸರಿನಲ್ಲಿ 600ಕ್ಕೂ ಹೆಚ್ಚು ಮಂದಿಗೆ ವಂಚಿಸಿ ದಂಪತಿ ಪರಾರಿ
ಬೆಂಗಳೂರು: ಚೀಟಿ ಹೆಸರಲ್ಲಿ ಸುಮಾರು 600ಕ್ಕೂ ಹೆಚ್ಚು ಮಂದಿಗೆ ವಂಚಿಸಿ, 40 ಕೋಟಿ ರೂ.ಗಳೊಂದಿಗೆ ದಂಪತಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಜರಗನಹಳ್ಳಿಯಲ್ಲಿ ನಡೆದಿದೆ. ಸುಧಾ ಮತ್ತು ಸಿದ್ದಿಚಾರಿ ವಂಚನೆ ಮಾಡಿರುವ ದಂಪತಿ. ಇವರು ಚೀಟಿ ಹಣದೊಂದಿಗೆ ಪರಾರಿಯಾಗಿ ಒಂದು ತಿಂಗಳು ಕಳೆದಿದೆ. ಆದರೆ, ಈವರೆಗೂ ಪತ್ತೆಯಾಗಿಲ್ಲ. ಇವರ ಹುಡುಕಾಟಕ್ಕಾಗಿ ಪುಟ್ಟೇನಹಳ್ಳಿ ಠಾಣೆ ಪೊಲೀಸರಿಂದ ಮೂರು ತಂಡ ರಚನೆಯಾಗಿದೆ. ಈ ನಡುವೆ ವಂಚನೆಗೆ ಒಳಗಾದವರು ಗೃಹ ಸಚಿವ ಜಿ.ಪರಮೇಶ್ವರ್ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಮೊರೆ ಹೋಗಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಹಿಡಿದು ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ.
ಏನಿದು ಪ್ರಕರಣ?
ಜರಗನಹಳ್ಳಿಯಲ್ಲಿ ವಾಸವಾಗಿದ್ದ ಸುಧಾ ದಂಪತಿ ಕಳೆದ 20 ವರ್ಷದಿಂದ ಚೀಟಿ ಹಣ ನಡೆಸುತ್ತಿದ್ದರು. ಈ ಕುಟುಂಬ ಸುಮಾರು 600ಕ್ಕೂ ಹೆಚ್ಚು ಜನರಿಂದ ಚೀಟಿ ಹಣ ಕಟ್ಟಿಸಿಕೊಂಡಿದೆ. ಸಾರ್ವಜನಿಕರು 5 ರಿಂದ 10 ಲಕ್ಷ ರೂ.ವರೆಗೂ ಚೀಟಿ ಹಣ ಕಟ್ಟಿದ್ದಾರೆ. ಆದರೆ, ಸುಧಾ ಮತ್ತು ಆಕೆಯ ಪತಿ ಸಿದ್ದಾಚಾರಿ ಕಳೆದ ಒಂದು ವರ್ಷದಿಂದ ಚೀಟಿ ಹಣ ನೀಡದೆ ಸತಾಯಿಸುತ್ತಿದ್ದರು. ಈ ನಡುವೆ ಸುಧಾ ಮತ್ತು ಸಿದ್ದಾಚಾರಿ ದಂಪತಿ ತಮ್ಮ ಇಬ್ಬರು ಮಕ್ಕಳ ಸಮೇತ ಜೂನ್ 3ರ ಮಧ್ಯರಾತ್ರಿ ಇದ್ದಕ್ಕಿದ್ದಂತೆ ಮನೆ ಬಿಟ್ಟು ಹೋಗಿದ್ದಾರೆ.
ಮನೆ ಬಿಟ್ಟು ಹೋಗುವ ಮುನ್ನ, ದಂಪತಿ ಬ್ಯಾಂಕ್‌ನಲ್ಲಿದ್ದ ತಮ್ಮ ಚಿನ್ನವನ್ನೆಲ್ಲ ಬಿಡಿಸಿಕೊಂಡಿದ್ದಾರೆ. ಬಳಿಕ, ಮನೆಯಲ್ಲೇ ಮೊಬೈಲ್ ಬಿಟ್ಟು, ಬೇರೆಲ್ಲ ವಸ್ತುಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ದಂಪತಿ ಕಾಣೆಯಾದ ಮರುದಿನ ಸುಧಾ ತವರು ಮನೆಯವರು ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದಾರೆ.
ಚೀಟಿ ಹಣ ಕಟ್ಟಿದವರು ಕೂಡ ಪುಟ್ಟೇನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಆದರೆ, ಸುಧಾ ಕುಟುಂಬ ಕಳೆದ ಒಂದು ತಿಂಗಳಿಂದ ಪತ್ತೆಯಾಗಿಲ್ಲ. ಮೊಬೈಲ್ ಬಳಸುತ್ತಿಲ್ಲ, ಸಂಬಂಧಿಕರ ಸಂಪರ್ಕಕ್ಕೂ ಸಿಗದೆ ಸುಧಾ ಕುಟುಂಬ ಭೂಗತವಾಗಿದೆ. ಪುಟ್ಟೇನಹಳ್ಳಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಇದನ್ನೂ ಓದಿ: Heart Attack: ಹೃದಯಾಘಾತ: ಧಾರವಾಡದಲ್ಲಿ ಕೆಎಎಸ್ ವಿದ್ಯಾರ್ಥಿನಿ ಸಾವು, ದಾವಣಗೆರೆಯಲ್ಲಿ ಯುವಕ ಮೃತ್ಯು