ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self harming case: ಅಮೆರಿಕ ವೀಸಾ ರಿಜೆಕ್ಟ್‌- ಮನನೊಂದ ವೈದ್ಯೆಯಿಂದ ಆತುರದ ನಿರ್ಧಾರ

ಉದ್ಯೋಗಕ್ಕಾಗಿ ಅಮೆರಿಕ ಹೊರಟಿದ್ದ ವೈದ್ಯರೊಬ್ಬರು ವೀಸಾ ಸಿಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಹಲವು ಬಾರಿ ವೀಸಾಗಾಗಿ ಮನವಿ ಸಲ್ಲಿಸಿದ್ದರು. ಆದರೆ ಆಕೆಯ ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಹೈದರಾಬಾದ್‌ನಲ್ಲಿ ವೈದ್ಯೆ ಆತ್ಮಹತ್ಯೆಗೆ ಶರಣು(ಸಾಂಕೇತಿಕ ಚಿತ್ರ)

ಅಮರಾವತಿ: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ವೈದ್ಯೆಯೊಬ್ಬರು ತಮಗೆ ವೀಸಾ ಸಿಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೈದರಾಬಾದ್ ನಲ್ಲಿ ಮಹಿಳೆ ವಾಸವಾಗಿದ್ದ ಫ್ಲಾಟ್‌ನಲ್ಲೇ ಈ ಘಟನೆ ನಡೆದಿದೆ ಎಂದು ಅಲ್ಲಿನ ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ಮಾಹಿತಿ ಹಂಚಿಕೊಂಡಿದ್ದಾರೆ. ಇನ್ನು ಮೃತ ಮಹಿಳೆಯನ್ನು 38 ವರ್ಷದ ರೋಹಿಣಿ ಎಂದು ಗುರುತಿಸಲಾಗಿದೆ.

ಉದ್ಯೋಗಕ್ಕಾಗಿ ತನ್ನ ಕುಟುಂಬದಿಂದ ದೂರ ಉಳಿದು ವೈದ್ಯಕೀಯ ವೃತ್ತಿ ಮಾಡುತ್ತಿದ್ದ ಆಕೆ ಕೆಲಸಕ್ಕಾಗಿ ಅಮೆರಿಕಕ್ಕೆ ಹೋಗಲು ಸಿದ್ಧತೆ ನಡೆಸಿದ್ದರು. ಆದರೆ, ವೀಸಾ ದೊರಕದ ಕಾರಣ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಕುಟುಂಬ ಸದಸ್ಯರು ಆಕೆ ವಾಸವಿದ್ದ ನಿವಾಸಕ್ಕೆ ದಾವಿಸಿದ್ದಾರೆ. ಆ ವೇಳೆ ಬಾಗಿಲು ಬಡಿದರೂ, ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಬಾಗಿಲು ಒಡೆದು ನೋಡಿದಾಗ ಆಕೆ ಮೃತಪಟ್ಟಿರುವುದು ಶನಿವಾರ ಬೆಳಕಿಗೆ ಬಂದಿದೆ. ವೈದ್ಯೆಯ ಸಹಾಯಕಿಯೇ ಆಕೆಯ ಕುಟುಂಬ ಸದಸ್ಯರಿಗೆ ಘಟನೆಯ ಕುರಿತು ಮಾಹಿತಿ ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಳಗಿಯಲ್ಲಿ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಮರಣೋತ್ತರ ಪರೀಕ್ಷೆಯಲ್ಲಿ ಹೊರಬಿದ್ದ ಮಾಹಿತಿಯೇನು?

ಪ್ರಾಥಮಿಕ ಹಂತದ ವರದಿಯಲ್ಲಿ ಶುಕ್ರವಾರ ರಾತ್ರಿ ಆಕೆ ನಿದ್ರೆ ಮಾತ್ರೆಗಳನ್ನು ಸೇವಿಸಿರಬಹುದು ಅಥವಾ ಸ್ವತಃ ಚುಚ್ಚುಮದ್ದು ಚುಚ್ಚಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿರುವುದರಿಂದ ಸಾವಿಗೆ ಮುಖ್ಯ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಮೃತ ಮಹಿಳೆ ವಾಸವಿದ್ದ ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ಅವರು ವೀಸಾ ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆ ಖಿನ್ನತೆಗೆ ಒಳಗಾಗಿದ್ದೇನೆ ಎಂದು ಬರೆದಿದ್ದಾರೆ.

ಈ ಬಗ್ಗೆ ಆಕೆಯ ತಾಯಿ ಲಕ್ಷ್ಮಿ ಪ್ರತಿಕ್ರಿಯೆ ನೀಡಿದ್ದು, ತಮ್ಮ ಮಗಳು ಕೆಲಸಕ್ಕಾಗಿ ಅಮೆರಿಕಕ್ಕೆ ಹೋಗಲು ಕಾತುರದಿಂದ ಕಾಯುತ್ತಿದ್ದಳು ಆದರೆ ವೀಸಾ ಸಿಗದ ಕಾರಣ ಖಿನ್ನತೆಗೆ ಒಳಗಾಗಿದ್ದಳು ಎಂದಿದ್ದಾರೆ. ಮುಂದುವರೆದು ಮಾತನಾಡಿರುವ ಅವರು, "ಅವಳು ತುಂಬಾ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು ಮತ್ತು 2005 ಮತ್ತು 2010 ರ ನಡುವೆ ಕಿರ್ಗಿಸ್ತಾನ್‌ನಲ್ಲಿ ತನ್ನ ಎಂಬಿಬಿಎಸ್ ಪೂರ್ಣಗೊಳಿಸಿದ್ದಳು. ತನ್ನ ಭವಿಷ್ಯದ ಬಗ್ಗೆ ದೊಡ್ಡ ಕನಸುಗಳನ್ನು ಹೊಂದಿದ್ದಳು. ರೋಹಿಣಿಗೆ ಭಾರತದಲ್ಲಿಯೇ ಇದ್ದು ವೈದ್ಯಕೀಯ ವೃತ್ತಿ ಮುಂದುವರೆಸುವಂತೆ ಸಲಹೆ ನೀಡಿದ್ದೆ. ಆದರೆ ಅಮೆರಿಕದಲ್ಲಿ ವೈದ್ಯಕೀಯ ವೃತ್ತಿಗೆ ಆದಾಯ ಉತ್ತಮವಾಗಿದೆ ಎಂದು ಹೇಳಿದ್ದಳು. ಇತ್ತೀಚಿನ ದಿನಗಳಲ್ಲಿ ಅವಳು ವೀಸಾಗಾಗಿ ಕಾದು ನಿರಾಶೆ ಮತ್ತು ಖಿನ್ನತೆಗೊಳಗಾಗಿದ್ದಳು. ವೀಸಾ ಸಿಗದ ಹಿನ್ನೆಲೆ ಅವಳು ಮಾನಸಿಕವಾಗಿ ಕುಗ್ಗಿ ಹೋಗಿದ್ದಳು. ರೋಹಿಣಿ ಮದುವೆಯಾಗದೇ ತನ್ನ ವೈದ್ಯಕೀಯ ವೃತ್ತಿಜೀವನದಲ್ಲಿ ಸಂಪೂರ್ಣವಾಗಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಳು" ಎಂದು ಲಕ್ಷ್ಮಿ ಹೇಳಿದರು. ಪ್ರಕರಣದ ಕುರಿತು ಚಿಲ್ಕಲಗುಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.