Self Harming: ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿ 14ನೇ ಮಹಡಿಯಿಂದ ಹಾರಿ ಆತ್ಮಹತ್ಯೆ
ಮೃತ ನಯನಾ ದೊಡ್ಡಬಳ್ಳಾಪುರ ಹೊರವಲಯದ ನಾಗದೇವನಹಳ್ಳಿ ಬಳಿ ಇರುವ ಗೀತಂ ವಿಶ್ವವಿದ್ಯಾಲಯ (Gitam University) ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಪದವಿ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಹಾಸ್ಟೆಲ್‌ನ 14ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಕಾರಣ ಶೋಧಿಸಲಾಗುತ್ತಿದೆ.
ಪ್ರಾತಿನಿಧಿಕ ಚಿತ್ರ -
ಚಿಕ್ಕಬಳ್ಳಾಪುರ, ಫೆ.17: ನಗರದ ಪ್ರತಿಷ್ಟಿತ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ (Student sef harming) ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ (Doddaballapura) ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು (Bengaluru) ಸರ್ಜಾಪುರ ಮೂಲದ ನಯನಾ (20) ಮೃತಪಟ್ಟಿರುವ ದುರ್ದೈವಿ.
ಕಾಲೇಜು ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಮೃತ ನಯನಾ ದೊಡ್ಡಬಳ್ಳಾಪುರ ಹೊರವಲಯದ ನಾಗದೇವನಹಳ್ಳಿ ಬಳಿ ಇರುವ ಗೀತಂ ವಿಶ್ವವಿದ್ಯಾಲಯ (Gitam University) ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಪದವಿ ವ್ಯಾಸಂಗ ಮಾಡುತ್ತಿದ್ದಳು. 14ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಶೋಧಿಸಲಾಗುತ್ತಿದೆ.
ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್‌ಗಾಗಿ ಹುಚ್ಚಾಟ, ಬಂಧನ
ಬಳ್ಳಾರಿ : ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದಕ್ಕೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸರಿಂದ ವಿಶ್ವನಾಥ್ (29) ಎಂಬಾತ ಬಂಧಿಸಲ್ಪಟ್ಟಿದ್ದಾನೆ. ದುರ್ಗಮ್ಮ ದೇಗುಲ ಬಳಿ ರೈಲು ಸೇತುವೆ ಮೇಲೆ ನಿಂತು ಡ್ಯಾನ್ಸ್ ಮಾಡಿ, ರೀಲ್ಸ್ ಮಾಡುತ್ತಾ ವಿಶ್ವನಾಥ್ ಹುಚ್ಚಾಟ ಮೆರೆದಿದ್ದ.
ಪತ್ನಿ, ಮಗನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಾಜಿ ಯೋಧ
ಸಾರ್ವಜನಿಕ ಸ್ಥಳದಲ್ಲಿ ಅಪಾಯಕಾರಿ ರೀತಿಯಲ್ಲಿ ರೀಲ್ಸ್ ಮಾಡಿದ್ದಕ್ಕಾಗಿ ಸಾರ್ವಜನಿಕರು ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಶ್ವನಾಥ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕ ವಿಶ್ವನಾಥ್ ಉತ್ತರ ಪ್ರದೇಶದವನು ಎಂದು ಗೊತ್ತಾಗಿದೆ.