ಬೆಂಗಳೂರು, ಫೆ.21 : ಬಿಜೆಪಿ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommayi) ಅವರ ಪಿಎ ಚಂದ್ರು ಅವರ ಪುತ್ರ ಆತ್ಮಹತ್ಯೆಗೆ (Self harming) ಶರಣಾಗಿದ್ದಾನೆ. ಬೆಂಗಳೂರಲ್ಲಿರುವ (Bengaluru) ಮನೆಯಲ್ಲಿ ನೇಣು (hanged) ಬಿಗಿದುಕೊಂಡು ಚಂದ್ರು ಪುತ್ರ ಹೇಮಂತ್ (20) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಂಗಳೂರಿನ ಸಂಜಯನಗರದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಹೇಮಂತ್ ಆತ್ಮಹತ್ಯೆಗೆ ಕಾರಣ ನಿಗೂಢವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗೆ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಹೇಮಂತ್ ಶವ ರವಾನಿಸಲಾಗಿದೆ. ಹೇಮಂತ್ ಆತ್ಮಹತ್ಯೆಯ ನಿಖರ ಕಾರಣ ತಿಳಿಯಲು ಪೊಲೀಸರು ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಯಾವುದೇ ಡೆತ್‌ನೋಟ್ ಸಿಕ್ಕಿಲ್ಲ. ಹೇಮಂತ್‌ಗೆ ಸಂಬಂಧಿಸಿದ ಮೊಬೈಲ್ ಪೊಲೀಸರು ಪಡೆದು ಪರಿಶೀಲಿಸುತ್ತಿದ್ದಾರೆ.
ಹಾಸ್ಟೆಲ್ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ನಗರದ ಪ್ರತಿಷ್ಟಿತ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ (Student sef harming) ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ (Doddaballapura) ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು (Bengaluru) ಸರ್ಜಾಪುರ ಮೂಲದ ನಯನಾ (20) ಮೃತಪಟ್ಟಿರುವ ದುರ್ದೈವಿ.
ಗಂಡ ಮೃತಪಟ್ಟ ಒಂದೇ ವಾರಕ್ಕೆ ಪೊಲೀಸಪ್ಪನಿಂದ ಕಿರುಕುಳ; ಮನನೊಂದು ಮಹಿಳೆ ಆತ್ಮಹತ್ಯೆ
ಕಾಲೇಜು ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಮೃತ ನಯನಾ ದೊಡ್ಡಬಳ್ಳಾಪುರ ಹೊರವಲಯದ ನಾಗದೇವನಹಳ್ಳಿ ಬಳಿ ಇರುವ ಗೀತಂ ವಿಶ್ವವಿದ್ಯಾಲಯ (Gitam University) ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಪದವಿ ವ್ಯಾಸಂಗ ಮಾಡುತ್ತಿದ್ದಳು. 14ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಶೋಧಿಸಲಾಗುತ್ತಿದೆ.