ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Self harming: ರಾಜ್ಯದಲ್ಲೊಂದು ಮನಕಲಕುವ ಘಟನೆ, ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ

ಶನಿವಾರ ಸಂಜೆ ಗ್ರಾಮದ ಸಮೀಪವಿರುವ ಬಾವಿಯಲ್ಲಿ ಇಬ್ಬರು ಮಕ್ಕಳ ಶವಗಳು ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣವೇ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಇಂಡಿ ಗ್ರಾಮೀಣ ಪೊಲೀಸರು, ಪರಿಶೀಲನೆ ನಡೆಸಿದಾಗ ತಾಯಿ ಮತ್ತು ಮೂವರು ಮಕ್ಕಳ ಸಾವಿನ ಸುದ್ದಿ ದೃಢಪಟ್ಟಿದೆ.

ಸಾಂದರ್ಭಿಕ ಚಿತ್ರ

ವಿಜಯಪುರ, ಮಾ.27: ಜಿಲ್ಲೆಯ (Vijayapuara) ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ಸಂಭವಿಸಿದೆ. ತಾಯಿಯೊಬ್ಬಳು (mother) ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಕೂಡ ಬಾವಿಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ.

ಮಿರಗಿ ಗ್ರಾಮದ ನಿವಾಸಿ ರಾಜಶ್ರೀ ಶಂಕರ ಹಳ್ಳೂರ (31) ಮೃತ ದುರ್ದೈವಿ. ಇವರು ತಮ್ಮ ಮಕ್ಕಳಾದ ತನುಶ್ರೀ (7 ವರ್ಷ), ಅನುಶ್ರೀ (5 ವರ್ಷ) ಹಾಗೂ ಕೇವಲ 10 ತಿಂಗಳ ಹಸುಳೆ ಸಂತೋಷ್‌ರನ್ನು ಬಾವಿಗೆ ಎಸೆದು ಕ್ರೂರ ಅಂತ್ಯ ಕಂಡಿದ್ದಾರೆ.

ರಾಜಶ್ರೀ ಅವರ ಪತಿ ಶಂಕರ್ ಅವರು ಖಾಸಗಿ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಘಟನೆ ನಡೆದ ಸಮಯದಲ್ಲಿ ಅವರು ಊರಿನಲ್ಲಿ ಇರಲಿಲ್ಲ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ರಾಜಶ್ರೀ ಈ ತೀವ್ರ ನಿರ್ಧಾರ ತೆಗೆದುಕೊಂಡಿದ್ದಾರೆ.

ಬೆಳಕಿಗೆ ಬಂದಿದ್ದು ಹೇಗೆ?

ಶನಿವಾರ ಸಂಜೆ ಗ್ರಾಮದ ಸಮೀಪವಿರುವ ಬಾವಿಯಲ್ಲಿ ಇಬ್ಬರು ಮಕ್ಕಳ ಶವಗಳು ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣವೇ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಇಂಡಿ ಗ್ರಾಮೀಣ ಪೊಲೀಸರು, ಪರಿಶೀಲನೆ ನಡೆಸಿದಾಗ ತಾಯಿ ಮತ್ತು ಮೂವರು ಮಕ್ಕಳ ಸಾವಿನ ಸುದ್ದಿ ದೃಢಪಟ್ಟಿದೆ.

Self Harming: ಯುವ ವೈದ್ಯೆ ಆತ್ಮಹತ್ಯೆ, ಅಂಗೈಯ ಡೆತ್‌ನೋಟ್‌ನಲ್ಲಿತ್ತು ಆತ್ಮಹತ್ಯೆಯ ರಹಸ್ಯ

ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. “ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಕುಟುಂಬದ ಸದಸ್ಯರ ವಿಚಾರಣೆ ನಡೆಸಲಾಗುತ್ತಿದೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವುದು ಮಿರಗಿ ಗ್ರಾಮದಲ್ಲಿ ಶೋಕ ಸಾಗರವನ್ನುಂಟು ಮಾಡಿದೆ.

ಹರೀಶ್‌ ಕೇರ

View all posts by this author