Self Harming: ತೋಟದ ಮನೆಯಲ್ಲಿ ಯುವ ವಕೀಲೆ, ಯುವಕ ಅನುಮಾನಾಸ್ಪದ ಸಾವು
ಇಬ್ಬರ ಸಾವೂ ಅನುಮಾನಾಸ್ಪದವಾಗಿದ್ದು, ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಪರಾಧ ಕೃತ್ಯದ ಸಾಧ್ಯತೆಗಳನ್ನು ಪೊಲೀಸರು ತಳ್ಳಿಹಾಕಿಲ್ಲ. ಇಬ್ಬರ ಸಾವಿನ ಹಿಂದೆ ಪ್ರೇಮ ಪ್ರಕರಣದ ಆಯಾಮ ಇರುವ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ವಿವರಗಳು ತನಿಖೆಯಿಂದ ತಿಳಿದುಬರಬೇಕಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಯುವ ವಕೀಲೆ (Young advocate) ಹಾಗೂ ಆಕೆಯ ಮನೆಯಲ್ಲಿದ್ದ ಇನ್ನೊಬ್ಬ ವ್ಯಕ್ತಿ ಸಹ ಶವವಾಗಿ (found dead) ಪತ್ತೆಯಾಗಿರುವ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದಲ್ಲಿ ನಡೆದಿದೆ. ನೆಲಮಂಗಲ (Nelamangala) ತಾಲೂಕಿನ ಶ್ರೀನಿವಾಸಪುರದ ತೋಟದ ಮನೆಯಲ್ಲಿ (farm house) ಯುವ ವಕೀಲೆ ರಮ್ಯಾ (27) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಕೆಯ ಮನೆಯಲ್ಲಿ ಇದ್ದಂತಹ ಪುನೀತ್ ಎನ್ನುವ ವ್ಯಕ್ತಿ ಕೂಡ ಶವವಾಗಿ ಪತ್ತೆಯಾಗಿದ್ದಾನೆ. ಮೇಲ್ನೋಟಕ್ಕೆ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಂತೆ ಕಂಡುಬರುತ್ತಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಇಬ್ಬರ ಸಾವೂ ಅನುಮಾನಾಸ್ಪದವಾಗಿದ್ದು, ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಪರಾಧ ಕೃತ್ಯದ ಸಾಧ್ಯತೆಗಳನ್ನು ಪೊಲೀಸರು ತಳ್ಳಿಹಾಕಿಲ್ಲ. ಇಬ್ಬರ ಸಾವಿನ ಹಿಂದೆ ಪ್ರೇಮ ಪ್ರಕರಣದ ಆಯಾಮ ಇರುವ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ವಿವರಗಳು ತನಿಖೆಯಿಂದ ತಿಳಿದುಬರಬೇಕಿದೆ.
ಕಾಲುವೆಗೆ ಟ್ರ್ಯಾಕ್ಟರ್ ಪಲ್ಟಿಯಾಗಿ ಮಹಿಳೆ ಸಾವು
ರಾಯಚೂರು: ಭತ್ತದ ರಾಶಿ ಮಾಡಲು ಕೂಲಿಕಾರರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಒಂದು ಚಾಲಕನ ನಿಯಂತ್ರಣ ತಪ್ಪಿ ತುಂಗಭದ್ರಾ ಎಡದಂಡೆ ಉಪ ಕಾಲುವೆಯಲ್ಲಿ (Road Accident) ಪಲ್ಟಿಯಾಗಿದೆ. ಘಟನೆಯಲ್ಲಿ ಓರ್ವ ಮಹಿಳೆ (woman death) ಸಾವನ್ನಪ್ಪಿದ್ದು, 6 ಜನರಿಗೆ ಗಾಯಗಳಾಗಿರುವ (injured) ಘಟನೆ ರಾಯಚೂರು (Raichur news) ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗಂಗಮ್ಮ (40) ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡ ಆರು ಜನರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ರಾಯಚೂರಿಗೆ ದಾಖಲಿಸಲಾಗಿದೆ.
ಭತ್ತದ ರಾಶಿ ಮಾಡಲು ಕೂಲಿಕಾರರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಘಟನೆ ತಿಳಿಯುತ್ತಲೇ ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿಗಳ ಜೊತೆ ದೂರವಾಣಿಯಲ್ಲಿ ಮಾತನಾಡಿ ರಾಯಚೂರಿಗೆ ಬಂದ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ: Om Prakash Murder Case: ಓಂ ಪ್ರಕಾಶ್ ಹತ್ಯೆ ಕೇಸ್, ಆರೋಪಿ ಪಲ್ಲವಿ 7 ದಿನ ಸಿಸಿಬಿ ಕಸ್ಟಡಿಗೆ