Self Harming: ವಿಜಯಪುರದಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ
Self Harming: ತಲೆಗೆ ಗುಂಡು ಹಾರಿಸಿಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ನಗರದ ಶಿಕಾರಿ ಖಾನ ಪ್ರದೇಶದಲ್ಲಿ ಜರುಗಿದೆ. ಅಶನಾಮ್ ಪ್ರಕಾಶ ಮಿರ್ಜಿ (22) ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಬಸವರಾಜ್ ಯಲಿಗಾರ್, ಸಿಪಿಐ ಮಲ್ಲಯ್ಯ ಮಠಪತಿ ಹಾಗೂ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ವಿಜಯಪುರ: ತಲೆಗೆ ಗುಂಡು ಹಾರಿಸಿಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Self Harming) ವಿಜಯಪುರ ನಗರದ ಶಿಕಾರಿ ಖಾನ ಪ್ರದೇಶದಲ್ಲಿ ಜರುಗಿದೆ. ಅಶನಾಮ್ ಪ್ರಕಾಶ ಮಿರ್ಜಿ (22) ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ. ಈತನು ತನ್ನ ತಂದೆ ಹಾಗೂ ಮಾಜಿ ಪಾಲಿಕೆ ಸದಸ್ಯ ಪ್ರಕಾಶ್ ಮಿರ್ಜಿ ಅವರ ಹೆಸರಿನಲ್ಲಿದ್ದ ಪರವಾನಿಗೆ ಹೊಂದಿದ ಪಿಸ್ತೂಲ್ ಅನ್ನು ತೆಗೆದುಕೊಂಡು ಬೆಡ್ ರೂಂಗೆ ಹೋಗಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ತಂದೆ-ತಾಯಿ ಹಾಗೂ ಇತರರು ಮನೆಯಲ್ಲಿ ಇದ್ದ ವೇಳೆಯೇ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಗುಂಡಿನ ಶಬ್ದ ಕೇಳುತ್ತಲೇ ಪೋಷಕರು ಬಾಗಿಲು ತೆರೆದು ಆತನನ್ನು ಬಿಎಲ್‌ಡಿಇ ಆಸ್ಪತ್ರೆಗೆ ಸೇರಿಸಿದ್ದು, ಅದಾಗಲೇ ಯುವಕ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಬಸವರಾಜ್ ಯಲಿಗಾರ್, ಸಿಪಿಐ ಮಲ್ಲಯ್ಯ ಮಠಪತಿ ಹಾಗೂ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕನ ಆತ್ಮಹತ್ಯೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.
ಈ ಸುದ್ದಿಯನ್ನೂ ಓದಿ | Aishwarya Gowda: ವಂಚನೆ ಪ್ರಕರಣದಲ್ಲಿ ಐಶ್ವರ್ಯ ಗೌಡ 14 ದಿನ ಇಡಿ ಕಸ್ಟಡಿಗೆ
Self Harming: ತೋಟದ ಮನೆಯಲ್ಲಿ ಯುವ ವಕೀಲೆ, ಯುವಕ ಅನುಮಾನಾಸ್ಪದ ಸಾವು
ಬೆಂಗಳೂರು: ಯುವ ವಕೀಲೆ (Young advocate) ಹಾಗೂ ಆಕೆಯ ಮನೆಯಲ್ಲಿದ್ದ ಇನ್ನೊಬ್ಬ ವ್ಯಕ್ತಿ ಸಹ ಶವವಾಗಿ (found dead) ಪತ್ತೆಯಾಗಿರುವ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದಲ್ಲಿ ನಡೆದಿದೆ. ನೆಲಮಂಗಲ (Nelamangala) ತಾಲೂಕಿನ ಶ್ರೀನಿವಾಸಪುರದ ತೋಟದ ಮನೆಯಲ್ಲಿ (farm house) ಯುವ ವಕೀಲೆ ರಮ್ಯಾ (27) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಕೆಯ ಮನೆಯಲ್ಲಿ ಇದ್ದಂತಹ ಪುನೀತ್ ಎನ್ನುವ ವ್ಯಕ್ತಿ ಕೂಡ ಶವವಾಗಿ ಪತ್ತೆಯಾಗಿದ್ದಾನೆ. ಮೇಲ್ನೋಟಕ್ಕೆ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಂತೆ ಕಂಡುಬರುತ್ತಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಇಬ್ಬರ ಸಾವೂ ಅನುಮಾನಾಸ್ಪದವಾಗಿದ್ದು, ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಪರಾಧ ಕೃತ್ಯದ ಸಾಧ್ಯತೆಗಳನ್ನು ಪೊಲೀಸರು ತಳ್ಳಿಹಾಕಿಲ್ಲ. ಇಬ್ಬರ ಸಾವಿನ ಹಿಂದೆ ಪ್ರೇಮ ಪ್ರಕರಣದ ಆಯಾಮ ಇರುವ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ವಿವರಗಳು ತನಿಖೆಯಿಂದ ತಿಳಿದುಬರಬೇಕಿದೆ.
ಈ ಸುದ್ದಿಯನ್ನೂ ಓದಿ | Road Accident: ಟ್ರ್ಯಾಕ್ಟರ್ ಕಾಲುವೆಗೆ ಪಲ್ಟಿ, ಮಹಿಳೆ ಸಾವು, 6 ಜನರಿಗೆ ಗಾಯ