ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Doctor Self harming: ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹಿರಿಯ ವೈದ್ಯ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಡಾ.ದಿನೇಶ್ ಲಕ್ಷ್ಮಣ ಭಟ್ಕಳ (79) ಆತ್ಮಹತ್ಯೆ ಮಾಡಿಕೊಂಡ ವೈದ್ಯರು. ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾಗಿದ್ದು, ಹಲವು ವರ್ಷಗಳಿಂದ ವೈದ್ಯಕೀಯ ಸೇವೆ ಸಲ್ಲಿಸಿ ನಂತರ ಬೆಳಗಾವಿಯಲ್ಲಿ ನೆಲೆಸಿದ್ದರು. ಸಮಾಜದಲ್ಲಿ ಸರಳ ಹಾಗೂ ಸ್ನೇಹಪರ ವ್ಯಕ್ತಿತ್ವ ದಿಂದ ಪರಿಚಿತರಾಗಿದ್ದ ಅವರು, ವೈದ್ಯ ವಲಯದಲ್ಲಿಯೂ ಗೌರವ ಪಡೆದಿದ್ದರು.

ಬೆಳಗಾವಿ: ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹಿರಿಯ ವೈದ್ಯ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಹಿರಿಯ ವೈದ್ಯರನ್ನು ಡಾ.ದಿನೇಶ್ ಲಕ್ಷ್ಮಣ ಭಟ್ಕಳ (79) ಎಂದು ಗುರುತಿಸ ಲಾಗಿದೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾಗಿದ್ದು, ಹಲವು ವರ್ಷಗಳಿಂದ ವೈದ್ಯಕೀಯ ಸೇವೆ ಸಲ್ಲಿಸಿ ನಂತರ ಬೆಳಗಾವಿಯಲ್ಲಿ ನೆಲೆಸಿದ್ದರು. ಸಮಾಜದಲ್ಲಿ ಸರಳ ಹಾಗೂ ಸ್ನೇಹಪರ ವ್ಯಕ್ತಿತ್ವ ದಿಂದ ಪರಿಚಿತರಾಗಿದ್ದ ಅವರು, ವೈದ್ಯ ವಲಯದಲ್ಲಿಯೂ ಗೌರವ ಪಡೆದಿದ್ದರು.

ಇದನ್ನೂ ಓದಿ: Belagavi News: ಜನ್ಮದಿನದಂದೇ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಡಾ.ಭಟ್ಕಳ ಅವರು ತಮ್ಮ ಮನೆಯ ಬಾಲ್ಕನಿಯಲ್ಲಿ ತಾವೇ ತಮ್ಮ ಮೇಲೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಿನ ಸದ್ದು ಕೇಳಿ ಮನೆಯವರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ಸ್ಥಳಕ್ಕೆ ಧಾವಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಆದರೆ ಅಷ್ಟರಲ್ಲಾಗಲೇ ಅವರು ಮೃತ ಪಟ್ಟಿದ್ದರು ಎಂದು ತಿಳಿದು ಬಂದಿದೆ.

ಅನಾರೋಗ್ಯ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಹಿನ್ನೆಲೆ ಈ ಕೃತ್ಯ ಎಸಗಿರುವ ಶಂಕೆ ಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತನಿಖೆಯ ನಂತರವೇ ಸ್ಪಷ್ಟವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಟಿಳಕವಾಡಿ ಠಾಣೆಯ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.