ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅನ್ಯಕೋಮಿನ ಯುವಕನಿಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಇಸ್ಮಾಯಿಲ್ ಪಟೇಲ್ ವಿರುದ್ಧ ಪೋಕ್ಸೋ ಪ್ರಕರಣ

ಯುಗಾದಿ ಸಂದರ್ಭದಲ್ಲಿ ಬಾಲಕಿ ಸಂಬಂಧಿಕರ ಊರಿಗೆ ಬಂದಿದ್ದಾಗ ಆರೋಪಿ ಆಕೆಯನ್ನು ಪರಿಚಯ ಮಾಡಿಕೊಂಡಿದ್ದ ಎನ್ನಲಾಗಿದೆ. ಬಳಿಕ ಪ್ರೀತಿಸುವಂತೆ ಒತ್ತಾಯಿಸಿ, ಮದುವೆ ಯಾಗುವುದಾಗಿ ಪುಸಲಾಯಿಸುತ್ತಿದ್ದ. ಬಾಲಕಿ ಅಪ್ರಾಪ್ತೆಯಾಗಿರುವುದರಿಂದ ಮದುವೆಗೆ ನಿರಾಕರಿಸಿದ್ದರೂ ಆರೋಪಿ ಒತ್ತಡ ಮುಂದುವರಿಸಿದ್ದ ಎನ್ನಲಾಗಿದೆ.

ಅನ್ಯಕೋಮಿನ ಯುವಕನಿಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

-

Profile
Ashok Nayak Nov 1, 2026 12:43 PM

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತೆಯ ಅಪಹರಣ ಆರೋಪ

ಇಸ್ಮಾಯಿಲ್ ಪಟೇಲ್ ವಿರುದ್ಧ ಪೋಕ್ಸೋ ಪ್ರಕರಣ

ಜೇವರ್ಗಿ: ಅನ್ಯಕೋಮಿನ ಯುವಕನೊಬ್ಬ ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಇಸ್ಮಾಯಿಲ್ ಪಟೇಲ್ ಎಂಬಾತನ ವಿರುದ್ಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಉಗಾದಿ ಸಂದರ್ಭದಲ್ಲಿ ಬಾಲಕಿ ಸಂಬಂಧಿಕರ ಊರಿಗೆ ಬಂದಿದ್ದಾಗ ಆರೋಪಿ ಆಕೆಯನ್ನು ಪರಿಚಯ ಮಾಡಿಕೊಂಡಿದ್ದ ಎನ್ನಲಾಗಿದೆ. ಬಳಿಕ ಪ್ರೀತಿಸುವಂತೆ ಒತ್ತಾಯಿಸಿ, ಮದುವೆ ಯಾಗುವುದಾಗಿ ಪುಸಲಾಯಿಸುತ್ತಿದ್ದ. ಬಾಲಕಿ ಅಪ್ರಾಪ್ತೆಯಾಗಿರುವುದರಿಂದ ಮದುವೆಗೆ ನಿರಾಕರಿಸಿದ್ದರೂ ಆರೋಪಿ ಒತ್ತಡ ಮುಂದುವರಿಸಿದ್ದ ಎನ್ನಲಾಗಿದೆ.

ಇದನ್ನೂ ಓದಿ: POCSO: ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣಿ; ಪೋಕ್ಸೋ ಅಡಿ ಪ್ರಕರಣ ದಾಖಲು

ಈ ವಿಷಯ ಕುಟುಂಬದವರಿಗೆ ತಿಳಿದು ಹಿರಿಯರು ಆರೋಪಿಗೆ ಬುದ್ಧಿವಾದ ಹೇಳಿದ್ದರು. ಆದರೂ ಅ.29ರಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಜೇವರ್ಗಿ ಪೊಲೀಸರು ಬಿಎನ್‌ಎಸ್‌ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.