ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Darshan: ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗ್ತಾರಾ ದರ್ಶನ್?‌ ಇಂದು ಕೋರ್ಟ್‌ ತೀರ್ಮಾನ

ಕಳೆದ ಬಾರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ನಂತರ ದರ್ಶನ್‌ರನ್ನು ಬಳ್ಳಾರಿಗೆ ಶಿಫ್ಟ್‌ ಮಾಡಲಾಗಿತ್ತು. ಈ ಬಾರಿ ದರ್ಶನ್‌ ಅವರ ಜಾಮೀನು ರದ್ದುಪಡಿಸುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌, ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದ್ದ ಕುರಿತು ಕಟುವಾಗಿ ಟೀಕಿಸಿತ್ತು.

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ (Renukaswamy murder case) ಆರೋಪಿ ನಟ ದರ್ಶನ್ (Actor Darshan) ಅವರಿಗೆ ಸಂಬಂಧಿಸಿದ ಎರಡು ಪ್ರಮುಖ ಅರ್ಜಿಗಳ ವಿಚಾರಣೆ ಇಂದು ಕೋರ್ಟ್‌ನಲ್ಲಿ ನಡೆದು ತೀರ್ಮಾನ ದೊರೆಯಲಿದೆ. ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಂತೆ ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿದೆ. ಇನ್ನೊಂದು ಕಡೆ ನಟ ದರ್ಶನ್ ಪರ ವಕೀಲರು ಹಾಸಿಗೆ ದಿಂಬು ನೀಡುವಂತೆ ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ.

ಬಳ್ಳಾರಿ ಜಿಲ್ಲೆಗೆ ಶಿಫ್ಟ್ ಮಾಡುವಂತೆ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಹಾಸಿಗೆ ದಿಂಬು ಕೋರಿ ಇನ್ನೊಂದು ಅರ್ಜಿ ಸಲ್ಲಿಸಲಾಗಿದೆ. ದರ್ಶನ್, ಜಗದೀಶ್, ಲಕ್ಷ್ಮಣ್, ನಾಗರಾಜ್, ಪ್ರದೋಷ್ ಆರೋಪಿಗಳ ಶಿಫ್ಟ್ ಕುರಿತು ಅರ್ಜಿ ಸಲ್ಲಿಸಲಾಗಿದೆ. ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ಪ್ರಾಸಿಕ್ಯೂಷನ್ ಕೋರಿದ್ದು, ಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಲಿರುವ ಆರೋಪಿಗಳ ಪರ ವಕೀಲರು. ಇಂದು ನ್ಯಾಯಾಲಯ ವಿಚಾರಣೆ ನಡೆಸಿ ಆದೇಶ ನೀಡಲಿದೆ.

ಕಳೆದ ಬಾರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ನಂತರ ದರ್ಶನ್‌ರನ್ನು ಬಳ್ಳಾರಿಗೆ ಶಿಫ್ಟ್‌ ಮಾಡಲಾಗಿತ್ತು. ಈ ಬಾರಿ ದರ್ಶನ್‌ ಅವರ ಜಾಮೀನು ರದ್ದುಪಡಿಸುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌, ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದ್ದ ಕುರಿತು ಕಟುವಾಗಿ ಟೀಕಿಸಿತ್ತು. ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿತ್ತು. ಹೀಗಾಗಿ ಕೆಳಗಿನ ಕೋರ್ಟ್‌ ಕೂಡ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ದರ್ಶನ್‌ರನ್ನು ಸ್ಥಳಾಂತರಿಸುವ ಒಲವು ತೋರಿಸುವ ಸಾಧ್ಯತೆಯೇ ದಟ್ಟವಾಗಿದೆ.

ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಎಫ್‌ಐಆರ್‌

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ (Dharmasthala Case) ಸಂಬಂಧಿಸಿದಂತೆ ಈಗಾಗಲೇ ಗಿರೀಶ್ ಮಟ್ಟಣ್ಣವರ್ (Girish Mattannavar), ಮಹೇಶ್ ತಿಮರೋಡಿ (Mahesh Shetty Thimarodi) ಸೇರಿದಂತೆ ಹಲವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಇದೀಗ ಗಿರೀಶ್ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಧರ್ಮಸ್ಥಳದ ಕುರಿತು ಯೂಟ್ಯೂಬ್ ಚಾನೆಲ್ ಸಂದರ್ಶನ ಒಂದರಲ್ಲಿ ಅಶ್ಲೀಲವಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಗಿರೀಶ್ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಂದ್ರ ದಾಸ ಎಂಬವರ ದೂರಿನ ಮೇರೆಗೆ ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಬಗ್ಗೆ ಗಿರೀಶ್‌ ಅಪಪ್ರಚಾರ ನಡೆಸುತ್ತಿದ್ದಾರೆ. ಯೂಟ್ಯೂಬ್ ಚಾನೆಲ್‌ಗೆ ಸಂದರ್ಶನದ ವೇಳೆ ಅಶ್ಲೀಲವಾಗಿ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟಟಿದ್ದಾರೆ ಎಂದು ಆರೋಪಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 296ರ ಅಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Kichcha Sudeepa: ʼಡೆವಿಲ್‌ʼ ಚಿತ್ರಕ್ಕೆ ಒಳ್ಳೆಯದಾಗಲಿ; ನಟ ದರ್ಶನ್‌ ಬಗ್ಗೆ ಕಿಚ್ಚ ಸುದೀಪ್‌ ಹೇಳಿದ್ದಿಷ್ಟು

ಹರೀಶ್‌ ಕೇರ

View all posts by this author