ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shine Tom Chacko: ಡೆಡ್ಲಿ ಆಕ್ಸಿಡೆಂಟ್‌; ಖ್ಯಾತ ನಟ, ಆತನ ತಾಯಿ ಸ್ಥಿತಿ ಗಂಭೀರ, ತಂದೆ ಸ್ಥಳದಲ್ಲಿಯೇ ಸಾವು

ಮಲಯಾಳಂ ನಟ ಶೈನ್ ಟಾಮ್ ಚಾಕೊ ಹಾಗೂ ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರು (Car Accident) ಶುಕ್ರವಾರ ಬೆಳಿಗ್ಗೆ ತಮಿಳುನಾಡು ಬಳಿ ಅಪಘಾತಕ್ಕೀಡಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಚಾಕೊ ತಂದೆ ಸಿಪಿ ಚಾಕೊ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಲಯಾಳಂನ ಖ್ಯಾತ ನಟನ ಕಾರು ಅಪಘಾತ

-

Vishakha Bhat Heggar
Vishakha Bhat Heggar Jun 6, 2025 10:33 AM

ಚೆನ್ನೈ: ಮಲಯಾಳಂ ನಟ ಶೈನ್ ಟಾಮ್ ಚಾಕೊ (Shine Tom Chacko) ಹಾಗೂ ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಬೆಳಿಗ್ಗೆ ತಮಿಳುನಾಡು ಬಳಿ ಅಪಘಾತಕ್ಕೀಡಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಚಾಕೊ ತಂದೆ ಸಿಪಿ ಚಾಕೊ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಯಿಗೆ ಗಂಭೀರಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಅಪಘಾತದ ಸಮಯದಲ್ಲಿ, ಶೈನ್, ಹಾಗೂ ಅವರ ತಾಯಿ, ಸಹೋದರ, ತಂದೆ ಮತ್ತು ಚಾಲಕನೊಂದಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಶೈನ್‌ ಮತ್ತು ಅವರ ತಾಯಿಯನ್ನು ಧರ್ಮಪುರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅವರ ಗಾಯಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ವರದಿಗಳ ಪ್ರಕಾರ, ಅವರ ಸಹೋದರ ಮತ್ತು ಕಾರು ಚಾಲಕ ಕೂಡ ಗಾಯಗೊಂಡಿದ್ದಾರೆ. ತಮಿಳುನಾಡಿನ ಧರ್ಮಪುರಿಯ ಪಾಲಕೊಟ್ಟೈ ಬಳಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅವರ ಕಾರು ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಈ ಸುದ್ದಿಯನ್ನೂ ಓದಿ:Sirsi News: ಶಿರಸಿ ತಾಲೂಕಿನ ಗಡಿಭಾಗಕ್ಕೆ ಹೊಂದಿಕೊಂಡಿರುವ ಮುಷ್ಕಿ ಸಮೀಪದ ಶಿರಗಣಿ ಗ್ರಾಮದ ರಸ್ತೆಯ ಕಣ್ಣೀರ ಕಥೆ

ಶೈನ್ ಟಾಮ್ ಚಾಕೊ ಇತ್ತೀಚೆಗೆ ಮಾದಕ ದ್ರವ್ಯ ಸೇವನೆಯ ಆರೋಪದ ಮೇರೆಗೆ ಸುದ್ದಿಯಲ್ಲಿದ್ದರು. ಬಂಧನದ ನಂತರ ನಟ ಪ್ರಸ್ತುತ ಪೊಲೀಸ್ ತನಿಖೆಯಲ್ಲಿದ್ದಾರೆ. ಅಲ್ಲದೆ, ಅವರ ಸಹನಟಿ ವಿನ್ಸಿ ಅಲೋಶಿಯಸ್ ಅವರು 'ಸೂತ್ರವಾಸ್ಯಂ' ಸೆಟ್‌ಗಳಲ್ಲಿ ಮಾದಕ ದ್ರವ್ಯಗಳನ್ನು ಬಳಸಿದ್ದಾರೆ ಮತ್ತು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.