ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Murder Case: ಕುಡಿದ ಅಮಲಿನಲ್ಲಿ ಕಲ್ಲು ಎತ್ತಿಹಾಕಿ ಗೆಳೆಯನನ್ನೇ ಕೊಂದರು!

ಗಲಾಟೆ ವಿಕೋಪಕ್ಕೆ ಹೋದಾಗ ಸ್ನೇಹಿತರಿಬ್ಬರು ಸೇರಿ ಶ್ರೀನಿವಾಸ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಆತನ ಕಾಲು ಟ್ವಿಸ್ಟ್ ಮಾಡಿ, ಪ್ಯಾಂಟ್ ಬಿಚ್ಚಿ ಅರೆನಗ್ನಗೊಳಿಸಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ವಿಕೃತವಾಗಿ ಕೊಲೆ ಮಾಡಿದ್ದಾರೆ. ಕೃತ್ಯದ ಬಳಿಕ ಹಂತಕರಿಬ್ಬರು ಸ್ಥಳದಿಂದ ಪರಾರಿಯಾಗಿದ್ದರು.

ಕುಡಿದ ಅಮಲಿನಲ್ಲಿ ಕಲ್ಲು ಎತ್ತಿಹಾಕಿ ಗೆಳೆಯನನ್ನೇ ಕೊಂದರು!

ಕೊಲೆ ಆರೋಪಿಗಳು -

ಹರೀಶ್‌ ಕೇರ
ಹರೀಶ್‌ ಕೇರ Feb 14, 2026 9:21 AM

ಶಿವಮೊಗ್ಗ, ಫೆ.14: ಶಿವಮೊಗ್ಗದಲ್ಲಿ (Shivamogga crime news) ಭೀಕರ ಕೊಲೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೇ ಸೇರಿ ತಮ್ಮ ಗೆಳೆಯನನ್ನೇ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ (Murder Case) ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿ ನಡೆದಿದೆ. ಶ್ರೀನಿವಾಸ (36) ಎಂಬುವವರೇ ಕೊಲೆಯಾದ ದುರ್ದೈವಿ. ಶಿವಮೊಗ್ಗ ನಗರದ ಹೊಸಮನೆ ನಿವಾಸಿಯಾಗಿದ್ದ ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಗಾಜನೂರಿನಲ್ಲಿ ನೆಲೆಸಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದರು.

ನಿನ್ನೆ ರಾತ್ರಿ ಸ್ನೇಹ ಬಾರ್ ಎದುರಿಗಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಂಗಳದಲ್ಲಿ ಶ್ರೀನಿವಾಸ್ ಮತ್ತು ಅವರ ಇಬ್ಬರು ಸ್ನೇಹಿತರು ಸೇರಿ ಮದ್ಯದ ಪಾರ್ಟಿ ಆಯೋಜಿಸಿದ್ದರು. ಈ ವೇಳೆ ಅಮಲಿನಲ್ಲಿದ್ದ ಸ್ನೇಹಿತರ ನಡುವೆ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯ ಶುರುವಾಗಿದೆ.

ಗಲಾಟೆ ವಿಕೋಪಕ್ಕೆ ಹೋದಾಗ ಸ್ನೇಹಿತರಿಬ್ಬರು ಸೇರಿ ಶ್ರೀನಿವಾಸ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಆತನ ಕಾಲು ಟ್ವಿಸ್ಟ್ ಮಾಡಿ, ಪ್ಯಾಂಟ್ ಬಿಚ್ಚಿ ಅರೆನಗ್ನಗೊಳಿಸಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ವಿಕೃತವಾಗಿ ಕೊಲೆ ಮಾಡಿದ್ದಾರೆ. ಕೃತ್ಯದ ಬಳಿಕ ಹಂತಕರಿಬ್ಬರು ಸ್ಥಳದಿಂದ ಪರಾರಿಯಾಗಿದ್ದರು. ಇಂದು ಬೆಳಿಗ್ಗೆ ಶ್ರೀನಿವಾಸ್ ಹೆಣವಾಗಿ ಬಿದ್ದಿರುವುದನ್ನು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಶಿವಮೊಗ್ಗ ಎಸ್ಪಿ ನಿಖಿಲ್ ಬಿ. ಹಾಗೂ ತುಂಗಾ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

Double Murder: ಬೆಂಗಳೂರಿನಲ್ಲಿ ಟೆಕ್ಕಿಯಿಂದ ಹಣಕಾಸಿಗಾಗಿ ತಂದೆ- ತಾಯಿಯ ಹತ್ಯೆ

ನನ್ನ ತಮ್ಮನನ್ನು ಅವನ ಸ್ನೇಹಿತರೇ ಕೊಂದಿದ್ದಾರೆ, ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮೃತನ ಸಹೋದರಿ ಸುಮಾ ಕಣ್ಣೀರಿಡುತ್ತಾ ಆಗ್ರಹಿಸಿದ್ದಾರೆ. ಶ್ರೀನಿವಾಸ್‌ನನ್ನು ವಿವಸ್ತ್ರಗೊಳಿಸಿ ಹತ್ಯೆ ಮಾಡಿರುವುದು ಪ್ರಕರಣಕ್ಕೆ ಬೇರೆಯದೇ ಆಯಾಮ ನೀಡಿದ್ದು, ಹಂತಕರ ಪತ್ತೆಗಾಗಿ ಪೊಲೀಸರು ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿ, ಇದೀಗ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.