POCSO case: ಸೋದರನಿಂದಲೇ ಗರ್ಭಿಣಿಯಾದ ಬಾಲಕಿ, ಹೆರಿಗೆಯ ಬಳಿಕ ಕೃತ್ಯ ಬಯಲು
Shivamogga news: ಬಾಲಕಿಗೆ ಹೆರಿಗೆಯಾದ ನಂತರ ಬಾಲಕಿಗೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬಾಲಕಿಯ ಪೋಷಕರು ದೂರು ನೀಡಿರುವ ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

-

ಶಿವಮೊಗ್ಗ: ಕೆಲ ದಿನಗಳ ಹಿಂದೆ ಯಾದಗಿರಿ ಜಿಲ್ಲೆಯಲ್ಲಿ ಶಾಲಾ ಬಾಲಕಿಯೊಬ್ಬಳು ಶಾಲೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ್ದ ಘಟನೆ ವರದಿಯಾಗಿತ್ತು. ಈ ಘಟನೆಯ ನೆನಪು ಮಾಸುವ ಮುನ್ನವೇ, ಮನೆಯಲ್ಲಿಯೇ 15 ವರ್ಷದ ಬಾಲಕಿಯೊಬ್ಬಳು ತನ್ನ ಸಹೋದರನಿಂದಲೇ ಅತ್ಯಾಚಾರಕ್ಕೊಳಗಾಗಿ (Physical abuse) ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಶಿವಮೊಗ್ಗ (Shivamogga crime news) ಜಿಲ್ಲೆಯಲ್ಲಿ ನಡೆದಿದೆ. ಸೋದರನ ಮೇಲೆ ಪೋಕ್ಸೋ ಕೇಸ್ (POCSO case) ಹಾಕಲಾಗಿದೆ.
ಬಾಲಕಿಗೆ ಹೆರಿಗೆಯಾದ ನಂತರ ಬಾಲಕಿಗೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬಾಲಕಿಯ ಪೋಷಕರು ದೂರು ನೀಡಿರುವ ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
15 ವರ್ಷದ ಬಾಲಕಿಯು ಗರ್ಭ ಧರಿಸಲು ಆಕೆಯ 16 ವರ್ಷದ ಅಣ್ಣನೇ ಕಾರಣ ಎಂದು ಪೋಷಕರು ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲಾಗಿದೆ. ಬಾಲಕಿಯು 9ನೇ ತರಗತಿ ಓದಿದ್ದು, ಶಾಲೆ ಬಿಟ್ಟು ಮನೆಯಲ್ಲಿಯೇ ಇರುತ್ತಿದ್ದಳು. ಪೋಷಕರು ಕೆಲಸಕ್ಕೆ ಹೋದಾಗ ಸಹೋದರ ದುಷ್ಕೃತ್ಯ ಎಸಗಿದ್ದಾನೆ.
ಬಾಲಕಿಯು ಏಳೂವರೆ ತಿಂಗಳಿಗೇ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಮಗುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೋಷಕರು ನೀಡಿದ ದೂರಿನಂತೆ, 16 ವರ್ಷದ ಬಾಲಕನನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ.
ದಲಿತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿ ಮಾಡಿದ್ದ ಆರೋಪಿ ಸಫ್ವಾನ್ ಆರೆಸ್ಟ್
ಪುತ್ತೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರಿನಲ್ಲಿ ಅನ್ಯಕೋಮಿನ ಯುವಕನೊಬ್ಬ, ಅಪ್ರಾಪ್ತ ದಲಿತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ (Harassment) ನೀಡಿ ಗರ್ಭವತಿಯಾಗುವಂತೆ ಮಾಡಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯಾದ ಪುತ್ತೂರಿನ ಮುರಾ ಗ್ರಾಮದ ನಿವಾಸಿ ಸಫ್ವಾನ್ ಯಾನೆ ಅಫ್ವಾನ್ (Safwan) ಎಂಬಾತನನ್ನು ಪೋಕ್ಸೋ ಕಾಯ್ದೆ (POCSO case) ಅಡಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರಿನ ಸಮೀಪದ ಮುರಾ ಗ್ರಾಮದ ನಿವಾಸಿಯಾದ ಸಫ್ವಾನ್ ಯಾನೆ ಅಫ್ವಾನ್ ವಿರುದ್ಧ, ಅಪ್ರಾಪ್ತ ದಲಿತ ಬಾಲಕಿಯನ್ನು ಪುಸಲಾಯಿಸಿ ದೈಹಿಕ ಸಂಪರ್ಕದಲ್ಲಿ ತೊಡಗಿದ್ದ ಎಂದು ಆರೋಪಿಸಲಾಗಿದೆ. ಈ ಕೃತ್ಯದಿಂದ ಬಾಲಕಿ ಗರ್ಭವತಿಯಾಗಿದ್ದಾಳೆ ಎಂದು ಹೇಳಲಾಗಿದೆ. ಈ ಘಟನೆಯು ಸ್ಥಳೀಯ ಸಮುದಾಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಯ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ಕೇಳಿಬಂದಿತ್ತು.
ಈ ಗಂಭೀರ ಆರೋಪದ ಕುರಿತು ಮಾಹಿತಿ ತಿಳಿದ ಕೂಡಲೇ, ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು ತನಿಖೆ ಆರಂಭಿಸಿದ್ದರು. ಬಾಲಕಿಯ ಕುಟುಂಬದಿಂದ ದೂರು ದಾಖಲಾದ ನಂತರ ಪೊಲೀಸರು ಆರೋಪಿ ಸಫ್ವಾನ್ ಯಾನೆ ಅಫ್ವಾನ್‌ನನ್ನು ಪತ್ತೆ ಹಚ್ಚಿ ತಕ್ಷಣವೇ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಇದನ್ನೂ ಓದಿ: Murder case: ಲಿವ್ ಇನ್ ಗೆಳತಿಯ ಮೇಲೆ ಪೆಟ್ರೋಲ್ ಸುರಿದು ಸುಟ್ಟು ಕೊಂದ ಸಂಶಯಪಿಶಾಚಿ!