ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Police Firing: ಶಿವಮೊಗ್ಗದಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡಿಟ್ಟು ಬಂಧನ

ಮೇ 9ರಂದು ಹೇಮಣ್ಣ ಎಂಬವರನ್ನು ಹತ್ಯೆ ಮಾಡಲಾಗಿತ್ತು. ಚಳಿ ಮಂಜ ಸೇರಿದಂತೆ ಮೂವರು ಹೇಮಣ್ಣರನ್ನು ಕೊಲೆ ಮಾಡಿದ್ದರು. ಆರೋಪಿ ಚಳಿ ಮಂಜಣ್ಣನ್ನು ಬಂಧಿಸಲು ಹೋದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಮಂಜನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

Police Firing: ಶಿವಮೊಗ್ಗದಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡಿಟ್ಟು ಬಂಧನ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ May 19, 2025 3:46 PM

ಶಿವಮೊಗ್ಗ: ಕೊಲೆ ಆರೋಪಿಯನ್ನು (Murder Case culprit) ಬಂಧಿಸಲು ತೆರಳಿದಾಗ ಆತ ಪೊಲೀಸರ ಮೇಲೆ ಹಲ್ಲೆ (Assault) ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಮೇಲೆ ಗುಂಡಿನ ದಾಳಿ (Police Firing) ನಡೆಸಿ ಸೆರೆಹಿಡಿದಿರುವ ಘಟನೆ ಶಿವಮೊಗ್ಗ (Shivamogga News) ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕೊಲೆ ಆರೋಪಿ ಮಂಜುನಾಥ್ ಅಲಿಯಾಸ್ ಚಳಿ ಮಂಜ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಮೇ 9ರಂದು ಹೇಮಣ್ಣ ಎಂಬವರನ್ನು ಹತ್ಯೆ ಮಾಡಲಾಗಿತ್ತು. ಚಳಿ ಮಂಜ ಸೇರಿದಂತೆ ಮೂವರು ಹೇಮಣ್ಣರನ್ನು ಕೊಲೆ ಮಾಡಿದ್ದರು. ಆರೋಪಿ ಚಳಿ ಮಂಜಣ್ಣನ್ನು ಬಂಧಿಸಲು ಹೋದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಮಂಜನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಹೊಳೆಹೊನ್ನೂರು ಪಿಐ ಲಕ್ಷ್ಮಿಪತಿ ಆರೋಪಿ ಮಂಜನ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಈ ಘಟನೆಯಲ್ಲಿ ಕಾನ್‌ಸ್ಟೇಬಲ್ ಪಿಸಿ ಪ್ರಕಾಶ್ ಅವರಿಗೆ ಗಾಯಗಳಾಗಿದೆ. ಆರೋಪಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಆತನ ಕಾಲಿಗೆ ಫೈರಿಂಗ್ ನಡೆಸಿ ಬಂಧಿಸಲಾಗಿದೆ.

ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ, ಎಸ್‌ಐ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಒಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರ ಪೊಲೀಸ್ ಠಾಣೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ಪಲ್ಟಿಯಾಗಿದೆ. ಬೈಕ್‌ನಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ನಾಗರಾಜು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಗ್ಗಲೀಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Bengaluru Rain: ಧಾರಾಕಾರ ಮಳೆಗೆ ರಾಜಧಾನಿಯಲ್ಲಿ ಮೊದಲ ಬಲಿ, ಗೋಡೆ ಕುಸಿದು ಮಹಿಳೆ ಸಾವು