ಶಿವಮೊಗ್ಗ, ಫೆ.24: ಶಿವಮೊಗ್ಗದ (Shivamogga news) ಹೊರವಲಯದ ಸೂಳೆಬೈಲು ಸರಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ (SSLC student) ವಿದ್ಯಾರ್ಥಿಯೊಬ್ಬ, ಅನ್ಯಕೋಮಿನ ಬಾಲಕರಿಂದ ಹಲ್ಲೆಗೀಡಾಗುತ್ತಿದ್ದ ತನ್ನ ಸ್ನೇಹಿತನನ್ನು ಬಿಡಿಸಲು ಹೋಗಿ ತಾನೇ ಜೀವ (Student Murder) ತೆತ್ತಿದ್ದಾನೆ. ಘಟನೆಯಿಂದಾಗಿ, ಇರುವ ಒಬ್ಬ ಮಗನನ್ನು ಕಳೆದುಕೊಂಡ ಹೆತ್ತವರು ದೊಡ್ಡ ಆಘಾತಗೊಳಗಾಗಿದ್ದಾರೆ. ಅವರ ಅಕ್ರಂದನ ಮುಗಿಲು ಮುಟ್ಟಿದೆ. ಬಾಲಕನ ಸಾವಿನ ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಪರೀಕ್ಷೆಯ (SSLC Exam) ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಪೆಶಲ್ ಕ್ಲಾಸ್ ತೆಗೆದುಕೊಳ್ಳಲಾಗುತ್ತಿತ್ತು. ಸೂಳೆಬೈಲು ಬಡಾವಣೆಯ ಸಂಕೇತ್ ಕ್ಲಾಸ್ ಮುಗಿಸಿಕೊಂಡು ವಾಪಸ್ ಮನೆಯತ್ತ ಹೋಗುವಾಗ ಸ್ನೇಹಿತ ಗಿರೀಶ್ ಮೇಲೆ ಅದೇ ಬಡಾವಣೆಯ ಐವರು ಬಾಲಕರು ಹಲ್ಲೆ ಮಾಡುತ್ತಿದ್ದುದನ್ನು ಕಂಡಿದ್ದಾನೆ. ಗಿರೀಶ್ನನ್ನು ಬಚಾವ್ ಮಾಡಲು ಅಲ್ಲಿಗೆ ಸಂಕೇತ್ ಹೋಗಿದ್ದಾನೆ. ಆ ಐವರು ಬಾಲಕರು ಸಂಕೇತ್ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಸಂಕೇತ್ ಅಲ್ಲಿಯೇ ಕುಸಿದು ಬಿದ್ದಿದ್ದಾನೆ. ಗಿರೀಶ್ ತನ್ನ ಮನೆಯವರಿಗೆ ಮತ್ತು ಅಕ್ಕಪಕ್ಕದವರಿಗೆ ಗಲಾಟೆ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ. ಅಕ್ಕಪಕ್ಕದವರು ಅಲ್ಲಿಗೆ ಹೋಗಿ ನೋಡಿದಾಗ ಹಲ್ಲೆಗೊಳಗಾದ ಸಂಕೇತ್ ಸ್ಥಿತಿ ಗಂಭೀರವಾಗಿತ್ತು. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ಕೆರೆದುಕೊಂಡು ಹೋದರು. ಆದರೆ ಮಾರ್ಗ ಮಧ್ಯೆಯೇ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು.
ಸಂಕೇತ್ ಕುಸಿದು ಬೀಳುತ್ತಿದ್ದಂತೆಯೇ ಮೂವರು ಬಾಲಕರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ತುಂಗಾ ನಗರ ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಹಲ್ಲೆ ಮಾಡಿ ಕೊಲೆಗೆ ಕಾರಣವಾದ ಇಬ್ಬರು ಬಾಲಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಕುರಿತು ತನಿಖೆಯು ಚುರುಕುಗೊಂಡಿದೆ.
ಮಟನ್ ಕರಿಯಲ್ಲಿ ಮಾತ್ರೆ ಬೆರೆಸಿ ಪತಿ ಹತ್ಯೆ ಯತ್ನ; ಸಾಧ್ಯವಾಗದ್ದಕ್ಕೆ ಕತ್ತು ಹಿಸುಕಿ ಪತಿಯನ್ನೇ ಕೊಂದ ಪಾಪಿ ಪತ್ನಿ!
ಬಾಲಕನ ಕೊಲೆಯ ನಂತರ, ನಗರದಲ್ಲಿ ಕೋಮು ಗಲಭೆ ಆಗದಂತೆ ಜಿಲ್ಲಾ ಪೊಲೀಸರು ಎಲ್ಲ ರೀತಿಯ ಮುಂಜಾಗ್ರತೆ ವಹಿಸಿದ್ದಾರೆ. ಘಟನಾ ಸ್ಥಳ, ಮೆಗ್ಗಾನ್ ಜಿಲ್ಲಾಸ್ಪತ್ರೆ ಸೇರಿದಂತೆ ನಗರದಲ್ಲಿ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಗಿರೀಶ್ ಮತ್ತು ಸಂಕೇತ್ ಗೆಳೆಯರು
ಗಿರೀಶ್ ಮತ್ತು ಮೃತ ಸಂಕೇತ್ ಅತ್ಯುತ್ತಮ ಸ್ನೇಹಿತರಾಗಿದ್ದರು. ಈ ಹಿನ್ನಲೆಯಲ್ಲಿ ಗಿರೀಶ್ ಮೇಲೆ ಅನ್ಯಕೋಮಿನ ಬಾಲಕರು ಹಲ್ಲೆ ಮಾಡುವ ಸಂದರ್ಭದಲ್ಲಿ ಸ್ನೇಹಿತನ ಬಚಾವ್ ಮಾಡಲು ಸಂಕೇತ್ ಎಂಟ್ರಿಕೊಟ್ಟಿದ್ದ. ಗಿರೀಶ್ನನ್ನು ಬಚಾವ್ ಮಾಡುವ ಸಂದರ್ಭದಲ್ಲಿ ಬಾಲಕರು ಗಿರೀಶ್ನನ್ನು ಬಿಟ್ಟು ಸಂಕೇತ್ ಮೇಲೆ ಹಲ್ಲೆ ಮಾಡಿದ್ದಾರೆ. ಎದೆ, ಮುಖ, ಹೊಟ್ಟೆ ಮೇಲೆ ಹೊಡೆದಿದ್ದಾರೆ. ಇದರಿಂದ ಸಂಕೇತ್ ಅಸ್ವಸ್ಥಗೊಂಡು ಅಲ್ಲಿಯೇ ಕುಸಿದು ಬಿದ್ದಿದ್ದಾನೆ. ಆಸ್ಪತ್ರೆಗೆ ದಾಖಲಿಸುವ ಮೊದಲೇ ಅಸುನೀಗಿದ್ದಾನೆ.
Honour Killing: ರಾಜ್ಯದಲ್ಲಿ ಮತ್ತೊಂದು ಮರ್ಯಾದಾ ಹತ್ಯೆಗೆ ಯತ್ನ: ಗರ್ಭಿಣಿ ತಂಗಿಯನ್ನು ಕೊಡಲಿಯಿಂದ ಕೊಚ್ಚಿದ ಪಾಪಿ
ಆಸ್ಪತ್ರೆಗೆ ಶಾಸಕ ಚನ್ನಬಸಪ್ಪ ಭೇಟಿ
ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಗಿರೀಶ್ನ ಆರೋಗ್ಯ ವಿಚಾರಿಸಿ, ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ. ಏತನ್ಮಧ್ಯೆ, ಸಂಕೇತ್ ಸಾವಿನ ಕುರಿತು ಶಾಸಕರು ಸರಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಪೊಲೀಸ್ ಇಲಾಖೆ ಅಂದರೆ ಹಿಂದೂಗಳ ಹೆಣಹೊರುವ ಇಲಾಖೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ಹಿಂದೂಗಳ ಜೀವ ಹೋಗಿದೆ. ಇದಕ್ಕೆ ಹೊಣೆ ಯಾರು ಎಂದು ಪ್ರಶ್ನೆ ಮಾಡಿದ್ಧಾರೆ.