ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shocking news: ನಾಯಿಯನ್ನೂ ಬಿಡದ ಕಾಮುಕ, ಬೆಂಗಳೂರಿನಲ್ಲಿ ಲೈಂಗಿಕ ವಿಕೃತಿ

ನಾಯಿಯನ್ನು ಗಾಯಗೊಳಿಸಿ ಅದರ ಮೇಲೆ ಲೈಂಗಿಕ ವಿಕೃತಿ ತೋರಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನ ಜಯನಗರದ ನಿವಾಸಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈತ ಮಾನಸಿಕ ಅಸ್ವಸ್ಥನೇ ಅಥವಾ ಲೈಂಗಿಕ ವಿಕಾರಿಯೇ ಎಂಬುದರ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಾಯಿಯನ್ನೂ ಬಿಡದ ಕಾಮುಕ, ಬೆಂಗಳೂರಿನಲ್ಲಿ ಲೈಂಗಿಕ ವಿಕೃತಿ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Mar 15, 2025 8:53 AM

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಹೇಯ ಕೃತ್ಯ (Shocking news) ನಡೆದಿದೆ. ಕಾಮುಕನೊಬ್ಬ ನಾಯಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಅದನ್ನು ಗಾಯಗೊಳಿಸಿ (animal cruelty) ವಿಕೃತಿ ಮೆರೆದಿದ್ದಾನೆ. ಬೆಂಗಳೂರಿನ (Bengaluru Crime News) ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಿನಿ ಗ್ರೌಂಡ್ ಸಮೀಪ ಈ ಘಟನೆ ನಡೆದಿದೆ. ಕಾಮುಕನೊಬ್ಬ ನಾಯಿಯ ಮರ್ಮಾಂಗ ಕೊಯ್ದು ಲೈಂಗಿಕ ಕ್ರಿಯೆ ನಡೆಸಿದ ಆರೋಪ ಕೇಳಿ ಬಂದಿದೆ. ಸಾರ್ವಜನಿಕರು ಇದನ್ನು ಗಮನಿಸಿ ವ್ಯಕ್ತಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಜಯನಗರದ ಸುತ್ತಮುತ್ತ ಒಬ್ಬರು ಮಹಿಳೆ ನಾಯಿಗಳಿಗೆ ಪ್ರತಿದಿನ ಊಟ ಹಾಕುತ್ತಾರೆ. ಮಾರ್ಚ್ 13ರಂದು ರಾತ್ರಿ ನಾಯಿಗೆ ಊಟ ಹಾಕಲು ಹೋಗಿದ್ದ ವೇಳೆ ವ್ಯಕ್ತಿಯೊಬ್ಬ ನಾಯಿಯನ್ನು ವಿಕೃತವಾಗಿ ಬಳಸಿಕೊಳ್ಳುತ್ತಿರುವುದನ್ನು ಗಮನಿಸಿ ಕೂಡಲೇ ನಾಯಿಯನ್ನು ರಕ್ಷಣೆ ಮಾಡಿದ್ದಾರೆ. ನಂತರ ಅದೇ ದಿನ ಶಾಲಿನಿ ಮೈದಾನದ ಬಳಿ ವಿದ್ಯಾ ಹೋಗಿದ್ದಾಗ ಅದೇ ವ್ಯಕ್ತಿ ಕಂಡಿದ್ದಾನೆ. ಆತನನ್ನು ಸ್ಥಳಿಯರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈತ ಮಾನಸಿಕ ಅಸ್ವಸ್ಥನೇ ಅಥವಾ ಲೈಂಗಿಕ ವಿಕಾರಿಯೇ ಎಂಬುದರ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಐಸ್‌ ಕ್ರೀಂ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ

ಚಿತ್ರದುರ್ಗ: ರಾಜ್ಯದಲ್ಲಿ ಅಪ್ರಾಪ್ತೆಯ ಮೇಲಿನ ಅತ್ಯಾಚಾರ (Physical Abuse) ಘಟನೆಗಳು ಮುಂದುವರಿಯುತ್ತಿದ್ದು, ಮತ್ತೊಂದುಘಟನೆ ವರದಿಯಾಗಿದೆ. ಐಸ್ ಕ್ರೀಂ ಆಸೆ ತೋರಿಸಿ 9 ವರ್ಷದ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ (Pocso case) ಎಸಗಿರುವ ಘಟನೆ ನಡೆದಿದೆ. ಚಿತ್ರದುರ್ಗದ (chitradurga news) ಅಗಸನಹಳ್ಳಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮನೆ ಬಳಿ ಆಟವಾಡುತ್ತಿದ್ದ 9 ವರ್ಷದ ಬಾಲಕಿಗೆ ವೃದ್ಧನೊಬ್ಬ ಐಸ್‌ಕ್ರೀಂ ಕೊಡಿಸುತ್ತೇನೆಂದು ಹೇಳಿ ಗುಡ್ಡಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.

ಅಗಸನಹಳ್ಳಿ ಬಡಾವಣೆಯ ಸಾಧಿಕ್ (56) ಎಂಬಾತ ಬಾಲಕಿ ಮೇಲೆ ಅತ್ಯಚಾರ ಎಸಗಿದ ಆರೋಪಿಯಾಗಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಬಾಲಕಿ 3ನೇ ತರಗತಿಯಲ್ಲಿ ಓದುತ್ತಿದ್ದಳು. ಸಂತ್ರಸ್ತ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.

ಇದನ್ನೂ ಓದಿ: Physical Abuse: ವಿದೇಶಿ ಮಹಿಳೆ ಮೇಲೆ ಬರ್ಬರ ಅತ್ಯಾಚಾರ; ಹಂಪಿ ಕೇಸ್‌ ಬೆನ್ನಲ್ಲೇ ದೇಶವನ್ನೇ ಬೆಚ್ಚಿ ಬೀಳಿಸುವ ಮತ್ತೊಂದು ಹೀನ ಕೃತ್ಯ!