Sirsi News: ಶಿರಸಿ ನಗರ ಠಾಣೆ ಪೊಲೀಸರಿಂದ ಕಾರ್ಯಾಚರಣೆ; 41 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ
ಹಲವಾರು ವರ್ಷಗಳ ಹಿಂದೆ ಪ್ರಕರಣಗಳು ದಾಖಲಾಗಿ ನಂತರ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ನ್ಯಾಯಾಲಯಗಳಿಗೆ ಹಾಜರಾಗದೇ ತಲೆಮರೆಸಿಕೊಂಡಿರುವ ಆರೋಪಿಗಳ ಹೆಡೆಮುರಿಕಟ್ಟುತ್ತಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಮೂರು ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಕಳೆದ 41 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತನನ್ನು ಶಿರಸಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಶಿರಸಿ: ಹಲವಾರು ವರ್ಷಗಳ ಹಿಂದೆ ಪ್ರಕರಣಗಳು ದಾಖಲಾಗಿ ನಂತರ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ನ್ಯಾಯಾಲಯಗಳಿಗೆ ಹಾಜರಾಗದೇ ತಲೆಮರೆಸಿಕೊಂಡಿರುವ ಆರೋಪಿಗಳ ಹೆಡೆಮುರಿಕಟ್ಟುತ್ತಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಮೂರು ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಕಳೆದ 41 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತನನ್ನು (Sirsi News) ಶಿರಸಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಂಡೂರ ನಿವಾಸಿ ಫಾಸ್ಕಲ್ ಮಾರ್ಟಿನ್ ರೊಡ್ರಿಗಸ್ ಬಂಧಿತ ವ್ಯಕ್ತಿ. ಈತನ ವಿರುದ್ಧ ಕಳೆದ 41 ವರ್ಷಗಳ ಹಿಂದೆ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಶಿರಸಿ ನಗರ ಪೊಲೀಸರು ಈತನ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಈತ ಬೇರೆ ಜಿಲ್ಲೆಯವನಾಗಿದ್ದರಿಂದ ಶಿಕ್ಷೆಯಿಂದ ಬಚಾವ್ ಆಗಲು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಶಿರಸಿ ನ್ಯಾಯಾಲಯವು ಇತನ ವಿರುದ್ದ ವಾರೆಂಟ್ ಹೊರಡಿಸಿತ್ತು. ಶಿರಸಿ ನಗರ ಪೊಲೀಸರು ಆರೋಪಿತನ ಪತ್ತೆಗಾಗಿ ಬೆಳ್ತಂಗಡಿ, ಮಂಗಳೂರು, ಉಡುಪಿ, ಪುತ್ತೂರು ಮುಂತಾದ ಕಡೆಗಳಲ್ಲಿ ಮಾಹಿತಿ ಸಂಗ್ರಹಿಸಿದ್ದರು. ಆರೋಪಿತ ಫಾಸ್ಕಲ್ ಮಾರ್ಟಿನ್ ರೊಡ್ರಿಗಸ್ ನೀಡಿದ್ದ ವಿಳಾಸವನ್ನೇ ಬದಲಾಯಿಸಿ ಬೆಂಗಳೂರಿನ ಬಗಲಗುಂಟೆಯಲ್ಲಿ ತಲೆಮರೆಸಿಕೊಂಡಿದ್ದು, ನಂತರ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ ಆರೋಪಿತನ ಪತ್ತೆಗೆ ಕ್ರಮ ವಿಶೇಷ ಕ್ರಮ ತೆಗೆದುಕೊಂಡ ಶಿರಸಿ ನಗರ ಠಾಣೆ ಪೊಲೀಸರು ಕೊನೆಗೂ ಆತನನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮುಂದಿನ ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಗಳು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಪೊಲೀಸರು ಅವರನ್ನು ಬೀಡುವುದಿಲ್ಲ ಎನ್ನುವುದಕ್ಕೆ ಕಳೆದ 41 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಮಾಡಿರುವುದು ಉತ್ತಮ ನಿದರ್ಶನವಾಗಿದೆ.
ಈ ಸುದ್ದಿಯನ್ನೂ ಓದಿ: UP Crime: ಕತ್ತು ಸೀಳಿದ ಸ್ಥಿತಿಯಲ್ಲಿ ಸಿಕ್ತು ಯುವತಿಯ ಶವ; ಪಾಗಲ್ ಪ್ರೇಮಿ ಕಥೆ ಕೇಳಿದ್ರೆ ಶಾಕ್ ಆಗ್ತೀರಾ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿ.ಕೃಷ್ಣಮೂರ್ತಿ, ಜಗದೀಶ್ ನಾಯ್ಕ, ಶಿರಸಿ ಡಿಎಸ್ಪಿ ಗೀತಾ ಪಾಟೀಲ್, ವೃತ್ತ ನಿರೀಕ್ಷಕ ಶಶಿಕಾಂತ ವರ್ಮಾ ಮಾರ್ಗದರ್ಶನದಲ್ಲಿ ಶಿರಸಿ ನಗರ ಠಾಣೆಯ ಪಿಎಸ್ಐ ನಾಗಪ್ಪ.ಬಿ ನೇತೃತ್ವದಲ್ಲಿ ತನಿಖಾ ವಿಭಾಗದ ಪಿಎಸ್ಐ ನಾರಾಯಣ ರಾಠೋಡ, ಎಎಸ್ಐ ನೆಲ್ಸನ್ ಮೆಂಥಾರೋ, ಹೊನ್ನಪ್ಪ ಆಗೇರ, ವಿಶ್ವನಾಥ ಭಂಡಾರಿ ಮತ್ತಿತರ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.