ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬಿಹಾರದಲ್ಲಿ ಹೆಣ್ಮಕ್ಕಳಿಗೆ ರಕ್ಷಣೆಯೇ ಇಲ್ಲ: ಯುವತಿ ಮೇಲೆ ಮತ್ತೆ ಯುವಕರ ಗುಂಪಿನಿಂದ ಹಲ್ಲೆ; ವಿಡಿಯೊ ವೈರಲ್

Six Men Assault Woman: ಯುವಕರ ಗುಂಪೊಂದು ಯುವತಿಯೊಬ್ಬಳ ಮೇಲೆ ಹಲ್ಲೆ ನಡೆಸಿರುವ ಘಟನೆ ಬಿಹಾರದ ಬಂಕಾದಲ್ಲಿರುವ ಪ್ರಮುಖ ಪ್ರವಾಸಿ ತಾಣ ಮಂದರ್ ಬೆಟ್ಟದಲ್ಲಿ ನಡೆದಿದೆ. ಪೊಲೀಸರು 6 ಮಂದಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಬೌನ್ಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಯುವತಿ ಮೇಲೆ ಆರು ಮಂದಿ ಯುವಕರ ಗುಂಪಿನಿಂದ ಹಲ್ಲೆ

ಪಾಟ್ನಾ, ಸೆ. 25: ಯುವಕರ ಗುಂಪೊಂದು ಯುವತಿಯೊಬ್ಬಳ ಮೇಲೆ ಹಲ್ಲೆ ನಡೆಸಿರುವ ಘಟನೆ ಬಿಹಾರದ (Bihar) ಬಂಕಾದಲ್ಲಿರುವ ಪ್ರಮುಖ ಪ್ರವಾಸಿ ತಾಣ ಮಂದರ್ ಬೆಟ್ಟದಲ್ಲಿ ನಡೆದಿದೆ. ಪೊಲೀಸರು 6 ಮಂದಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸೆಪ್ಟೆಂಬರ್ 3ರಂದು ನಡೆದ ಈ ಘಟನೆಯ ವಿಡಿಯೊ ಇತ್ತೀಚೆಗೆ ವೈರಲ್ ಆಗಿದ್ದು, ಕೆಲವು ಪುರುಷರು ಯುವತಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದು ಮತ್ತು ಆಕೆಯ ಮೇಲೆ ಕೋಲು ಹಾಗೂ ಚಪ್ಪಲಿಯಿಂದ ಹಲ್ಲೆ ಮಾಡಿರುವುದು ಕಂಡು ಬಂದಿದೆ (crime news). ಈ ವಿಡಿಯೊ ಸೆಪ್ಟೆಂಬರ್ 22ರಂದು ಪೊಲೀಸರ ಕಣ್ಣಿಗೆ ಬಿದ್ದಿದೆ. ಈ ಸಂಬಂಧ ಬೌನ್ಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಎಫ್‌ಐಆರ್‌ ಪ್ರಕಾರ, ವೈರಲ್ ಆಗಿರುವ ವಿಡಿಯೊವನ್ನು ಬೌನ್ಸಿ ಪೊಲೀಸ್ ಠಾಣೆಯ ಠಾಣಾಧಿಕಾರಿ (SHO) ಪಂಕಜ್ ಕುಮಾರ್ ಝಾ ಅವರ ವಾಟ್ಸ್ಆ್ಯಪ್‌ ಸಂಖ್ಯೆಗೆ ಕಳುಹಿಸಲಾಗಿತ್ತು. ಘಟನೆ ನಡೆದ ಸ್ಥಳವನ್ನು ಪರಿಶೀಲಿಸಲು ಅವರು ಭೇಟಿ ನೀಡಿದರು. ಈ ಪ್ರಕರಣದಲ್ಲಿ ಒಟ್ಟು ಆರು ಮಂದಿ ಯುವತಿಯೊಂದಿಗೆ ಅಸಭ್ಯ ವರ್ತನೆ ತೋರಿದ್ದಾರೆ ಮತ್ತು ಅಶ್ಲೀಲ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ವಿಡಿಯೊದಲ್ಲಿರುವ ಯುವಕರು ಮತ್ತು ಯುವತಿಯನ್ನು ಗುರುತಿಸಲು ಪೊಲೀಸರು ಪ್ರಯತ್ನ ಆರಂಭಿಸಿದ್ದಾರೆ. ಈ ಸಂಬಂಧ ಮಂದಾರ್ ಬೆಟ್ಟದ ಸುತ್ತಮುತ್ತ ವಾಸಿಸುವ ಗ್ರಾಮಸ್ಥರನ್ನು ಪೊಲೀಸರು ವಿಚಾರಿಸಿದ್ದಾರೆ. ಅಂಗಡಿ ಇತ್ಯಾದಿ ಸ್ಥಳಗಳಲ್ಲಿ ವಿಚಾರಿಸಿದರೂ, ಅವರನ್ನು ಸ್ಪಷ್ಟವಾಗಿ ಗುರುತಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

ಇಲ್ಲಿದೆ ವಿಡಿಯೊ:



ಸದ್ಯ, ಆರು ಅಪರಿಚಿತ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತನಿಖೆಯಲ್ಲಿ ಪೊಲೀಸರು ವೈರಲ್ ವಿಡಿಯೊವನ್ನು ನಿರ್ಣಾಯಕ ಸಾಕ್ಷ್ಯವಾಗಿ ಸೇರಿಸಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಗುರುತಿಸಿದ ನಂತರ ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಸಿ ತಾಣವೊಂದರಲ್ಲಿ ನಡೆದ ಈ ಘಟನೆಯು ಭದ್ರತಾ ವ್ಯವಸ್ಥೆಗಳ ಬಗ್ಗೆಯೂ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಹುಟ್ಟುಹಬ್ಬದ ದಿನ ದೇವಸ್ಥಾನಕ್ಕೆ ಹೊರಟ್ಟಿದ್ದವಳ ಮೇಲೆ ಸಾಮೂಹಿಕ ಅತ್ಯಾಚಾರ

ಕೆಲವು ದಿನಗಳ ಹಿಂದೆ, ಬಿಹಾರದ ಜಮುಯಿಯಲ್ಲಿ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಿಗೆ (ಬಾಲಕ ಹಾಗೂ ಬಾಲಕಿ) ಕಿರುಕುಳ ಕೊಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿತ್ತು. ವಿಡಿಯೊದಲ್ಲಿ ಮಕ್ಕಳನ್ನು ಪುರುಷರ ಗುಂಪೊಂದು ಸುತ್ತುವರಿದಿದ್ದು, ಅವರಲ್ಲಿ ಒಬ್ಬ ಬಾಲಕನ ಶರ್ಟ್ ಕಾಲರ್ ಹಿಡಿದರೆ, ಬಾಲಕಿಯನ್ನು ಎಳೆದೊಯ್ಯಲಾಗಿತ್ತು. ಬಾಲಕಿ ಓಡಲು ಪ್ರಯತ್ನಿಸುತ್ತಿದ್ದಾಗ, ಮುಸುಕುಧಾರಿ ವ್ಯಕ್ತಿಯೊಬ್ಬ ಅವಳನ್ನು ಹಿಂದಿನಿಂದ ಹಿಡಿದಿದ್ದ. ಈ ವಿಡಿಯೊ ವೈರಲ್ ಆಗುತ್ತಲೇ ದೇಶಾದ್ಯಂತ ಆಕ್ರೋಶದ ಅಲೆ ಎಬ್ಬಿಸಿತ್ತು.