ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Assault Case: ಖಮೇನಿ ಹತ್ಯೆ ಕುರಿತು ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹಲ್ಲೆ

ವ್ಯಾಪಾರ ಮಾಡುತ್ತಿದ್ದ ವೇಳೆ ಚಂದ್ರಶೇಖರ್‌ಗೆ ಯುವಕರು ಬಂದು ಹಲ್ಲೆ ನಡೆಸಿದ್ದಾರೆ. ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಕೂಡ ಚಂದ್ರಶೇಖರಗೆ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಭಯಭೀತನಾಗಿ ಚಂದ್ರಶೇಖರ, ಈ ಯುವಕರಿಂದ ಜೀವ ಭಯವಿದೆ ಎಂದು ತಡರಾತ್ರಿ ಗಂಗಾವತಿ ನಗರ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದು, ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ಹಲ್ಲೆಗೀಡಾದ ಚಂದ್ರಶೇಖರ್

ಕೊಪ್ಪಳ, ಮಾರ್ಚ್​ 04: ಅಮೆರಿಕ ಮತ್ತು ಇಸ್ರೇಲ್​ ಕ್ಷಿಪಣಿ ದಾಳಿಗೆ (iran- israel war) ಇರಾನ್ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಹತ್ಯೆಗೀಡಾದ ಬಳಿಕ ಈ ಹತ್ಯೆ ಖಂಡಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಈ ಮಧ್ಯೆ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಕುರಿತಾಗಿ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ ಹಿನ್ನಲೆಯಲ್ಲಿ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ (Assault Case) ಮಾಡಿರುವ ಆರೋಪ ಕೇಳಿಬಂದಿದೆ. ಕೊಪ್ಪಳ (Koppala news) ಜಿಲ್ಲೆಯ ಗಂಗಾವತಿ (Gangavathi) ನಗರದಲ್ಲಿ ಘಟನೆ ನಡೆದಿದೆ.

ಅಯತೊಲ್ಲಾ ಅಲಿ ಖಮೇನಿ ಹತ್ಯೆ ಕುರಿತು ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ ಹಿನ್ನಲೆ ಮುಸ್ಲಿಂ ಯುವಕರಿಂದ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಚಂದ್ರಶೇಖರ ಎಂಬಾತನಿಗೆ ಐದಾರು ಮುಸ್ಲಿಂ ಯುವಕರಿಂದ ಹಲ್ಲೆ ಮಾಡಿದ್ದಾರೆ. ಚಂದ್ರಶೇಖರ ಖರ್ಜೂರ ವ್ಯಾಪಾರಿಯಾಗಿದ್ದು, ವ್ಯಾಪಾರ ಮಾಡುತ್ತಿದ್ದ ವೇಳೆ ಏಕಾಏಕಿ‌ ಬಂದ ಮುಸ್ಲಿಂ ಯುವಕರು ಚಂದ್ರಶೇಖರ ಮೇಲೆ ಹಲ್ಲೆ ಮಾಡಿದ್ದಾರೆ. ನಮ್ಮ ಸಮಾಜದ ಬಗ್ಗೆ ಏಕೆ ಸ್ಟೋರಿ ಹಾಕಿದೆ. ನಮಗೆ ನೋವಾಗಿದೆ ಎಂದು ಚಂದ್ರಶೇಖರಗೆ ಬೈದು ಹಲ್ಲೆ ಮಾಡಿದ್ದಾರೆ.

ಅಷ್ಟೇ ಅಲ್ಲದೆ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಚಂದ್ರಶೇಖರಗೆ ಬೆದರಿಕೆ ಕೂಡ ಹಾಕಿದ್ದಾರೆ. ಹೀಗಾಗಿ ಭಯಭೀತನಾಗಿ ಚಂದ್ರಶೇಖರ, ಈ ಯುವಕರಿಂದ ಜೀವ ಭಯವಿದೆ ಎಂದು ತಡರಾತ್ರಿ ಗಂಗಾವತಿ ನಗರ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದು, ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ

ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಮಾಡುವ ಮೂಲಕ ವಿಶ್ವದ ದೊಡ್ಡಣ್ಣ ಅಮೆರಿಕ ತನ್ನ ಹಗೆ ತೀರಿಸಿಕೊಂಡಿದೆ. ಈ ಬಗ್ಗೆ ಜಾಗತಿಕ ಮಟ್ಟದಲ್ಲಿ ಪರ ವಿರೋಧ ಚರ್ಚೆಗಳು, ಪ್ರತಿಭಟನೆಗಳು ಶುರುವಾಗಿವೆ. ಖಮೇನಿ ಹತ್ಯೆ ಸುದ್ದಿ ಹೊರ ಬೀಳುತ್ತಿದ್ದಂತೆ ಭಾರತದ ಹಲವು ರಾಜ್ಯಗಳಲ್ಲಿ ಮುಸ್ಲಿಮರು ಪ್ರತಿಭಟನೆ ಮಾಡಿದ್ದಾರೆ.

Iran-Israel War: ಇಸ್ರೇಲ್‌-ಇರಾನ್‌ ಯುದ್ಧ; ಗಲ್ಫ್‌ ರಾಷ್ಟ್ರಗಳಿಗೆ ಬೆಂಗಳೂರು, ಮಂಗಳೂರಿನಿಂದ ವಿಮಾನಗಳ ಹಾರಾಟ ರದ್ದು

ಕರ್ನಾಟಕದಲ್ಲೂ ಪ್ರತಿಭಟಿಸಿದ್ದಾರೆ. ಚಿಕ್ಕಬಳ್ಳಾಪುರದ ಅಲಿಪುರ ಗ್ರಾಮದಲ್ಲೂ ಶೋಕ ಮಡುಗಟ್ಟಿತ್ತು. ಅಂಗಡಿ ಮುಂಗಟ್ಟು ಬಂದ್ ಮಾಡಿದ್ದ ಮುಸ್ಲಿಮರು, ಕಪ್ಪು ಬಾವುಟ ಪ್ರದರ್ಶಿಸಿ ಸಾವಿರಾರು ಸಂಖ್ಯೆಯಲ್ಲಿ ಖಮೇನಿ ಹತ್ಯೆ ಖಂಡಿಸಿ ಮೆರವಣಿಗೆ ಮಾಡಿದ್ದರು.

ಹರೀಶ್‌ ಕೇರ

View all posts by this author