Murder Case: ಕುಡಿಯಬೇಡ ಎಂದು ಬುದ್ಧಿ ಹೇಳಿದ ತಂದೆಗೆ ಚಾಕುವಿನಿಂದ ಇರಿದು ಕೊಂದ ಮಗ
ಮಗನಿಗೆ ಈ ಚಟದಿಂದ ಮುಕ್ತಿಹೊಂದಿ ಚೆನ್ನಾಗಿ ದುಡಿ ಎಂದು ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡ ಮಗ ಅಮಿತ್ ತಂದೆ ಚನ್ನಬಸವಯ್ಯ ಎದೆಗೆ ಚಾಕುವಿನಿಂದ ಇರಿದಿದ್ದಾನೆ. ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆಯೇ ಚನ್ನಬಸವಯ್ಯ ಸಾವನ್ನಪ್ಪಿದ್ದಾರೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಕುಡಿತದ ಚಟಕ್ಕೆ (Drinking) ದಾಸನಾದ ಮಗನಿಗೆ ಬುದ್ಧಿ ಹೇಳಿದ ತಂದೆಯೇ ಮಗನಿಂದ (son killed father) ಕೊಲೆಯಾಗಿದ್ದಾನೆ. ಕುಡಿಯಬೇಡ ಎಂದು ಬೈದು ಬುದ್ಧಿ ಹೇಳಿದ ತಂದೆಯ ಎದೆಗೆ ಮಗನೇ ಚಾಕುವಿನಿಂದ ಇರಿದು ಕೊಲೆ (Murder Case) ಮಾಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದ ಕೆರೆ ಮುನೇಶ್ವರ ದೇವಸ್ಥಾನದ ಬಳಿ ಸೋಮವಾರ (Bengaluru Crime news) ಸಂಜೆ ನಡೆದಿದೆ.
ಹತ್ಯೆಯಾದ ವ್ಯಕ್ತಿ ನೈಸ್ ರಸ್ತೆಯಲ್ಲಿ ಸೆಕ್ಯೂರಿಟಿ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ ಚನ್ನಬಸವಯ್ಯ (61) ಎಂದು ತಿಳಿದುಬಂದಿದೆ. ಕೊಲೆ ಮಾಡಿದ ಪಾಪಿ ಮಗನನ್ನು ಅಮಿತ್ (21) ಎಂದು ಗುರುತಿಸಲಾಗಿದೆ. ಪ್ರತಿ ದಿನ ಇದೇ ವಿಚಾರಕ್ಕೆ ಅಪ್ಪ – ಮಗನ ನಡುವೆ ಗಲಾಟೆ ನಡೆಯುತ್ತಿತ್ತು. ಸೋಮವಾರ ಸಹ ಇದೇ ವಿಚಾರಕ್ಕೆ ಗಲಾಟೆ ನಡೆದಿದೆ.
ಮಗನಿಗೆ ಈ ಚಟದಿಂದ ಮುಕ್ತಿಹೊಂದಿ ಚೆನ್ನಾಗಿ ದುಡಿ ಎಂದು ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡ ಮಗ ಅಮಿತ್ ತಂದೆ ಚನ್ನಬಸವಯ್ಯ ಎದೆಗೆ ಚಾಕುವಿನಿಂದ ಇರಿದಿದ್ದಾನೆ. ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆಯೇ ಚನ್ನಬಸವಯ್ಯ ಸಾವನ್ನಪ್ಪಿದ್ದಾರೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆ ಬ್ಯಾಡರಹಳ್ಳಿ ಪೊಲೀಸರು ಅಮಿತ್‌ನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಪತಿಯ ಅನೈತಿಕ ಸಂಬಂಧಕ್ಕೆ ರೋಸಿ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ
ಬೆಂಗಳೂರು: ಪತಿಯ ಅನೈತಿಕ ಸಂಬಂಧದಿಂದ ಜೀವನದಲ್ಲಿ ಬೇಸತ್ತ 34 ವರ್ಷದ ಮಹಿಳೆಯೊಬ್ಬರು ತಮ್ಮ ನಾಲ್ಕು ವರ್ಷದ ಮಗಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸೋಮವಾರ ಬೆಂಗಳೂರಿನ ರಾಮಯ್ಯ ಲೇಔಟ್ ನಡೆದಿದೆ.
ಪಾವಗಡ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿರುವ ಶ್ರುತಿ, ಮೊದಲು ತಮ್ಮ ಮಗಳು ರೋಶಿನಿಯನ್ನು ದುಪ್ಪಟ್ಟಾ ಬಳಸಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದು ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಗಸಂದ್ರದ ರಾಮಯ್ಯ ಲೇಔಟ್‌ನಲ್ಲಿ ಭಾನುವಾರ ಸಂಜೆ ಶ್ರುತಿಯ ಪತಿ ಮನೆಯಲ್ಲಿ ಇಲ್ಲದಿದ್ದಾಗ ಈ ಘಟನೆ ನಡೆದಿದೆ.
ಸ್ಥಳದಿಂದ ವಶಪಡಿಸಿಕೊಳ್ಳಲಾದ ಆತ್ಮಹತ್ಯೆ ಪತ್ರದಲ್ಲಿ ಆಕೆಯ ಪತಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು ಮತ್ತು ಅವರಿಗೆ ಇನ್ನೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧವಿದೆ ಎಂದು ಬರೆದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಶೃತಿ 2014ರಲ್ಲಿ ಗೋಪಾಲಕೃಷ್ಣ ಅವರನ್ನು ವಿವಾಹವಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ದಂಪತಿಗಳ ನಡುವಿನ ಸಂಬಂಧ ಹದಗೆಟ್ಟಿದ್ದು, ಅವರ ಕುಟುಂಬ ನೀಡಿದ ದೂರಿನ ಪ್ರಕಾರ, ಆಡಿಟರ್ ಆಗಿ ಕೆಲಸ ಮಾಡುತ್ತಿರುವ ಗೋಪಾಲಕೃಷ್ಣ ಇನ್ನೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ಗೋಪಾಲಕೃಷ್ಣ ಅವರ ಅಕ್ರಮ ಸಂಬಂಧವು ದಾಂಪತ್ಯದಲ್ಲಿ ಬಿರುಕು ಉಂಟುಮಾಡಿತ್ತು ಮತ್ತು ಇದು ಆಗಾಗ್ಗೆ ಜಗಳಗಳಿಗೆ ಕಾರಣವಾಗಿತ್ತು ಎಂದು ದೂರುದಾರರು ಆರೋಪಿಸಿದ್ದಾರೆ.
ಘಟನೆಯ ನಂತರ, ಮಹಿಳೆಯ ಪತಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Goa Murder Case: ವಿದೇಶಿ ಯುವತಿ ಮೇಲೆ ಅತ್ಯಾಚಾರ-ಕೊಲೆ; ವ್ಯಕ್ತಿಗೆ ಜೀವಾವಧಿ ಶಿಕ್ಷೆ