ಆಸ್ತಿಗಾಗಿ ವಾಯುಪಡೆ ಮಾಜಿ ಅಧಿಕಾರಿಯನ್ನೇ ಹತ್ಯೆ ಮಾಡಿದ ಪುತ್ರರು; ಕೊಲೆ ಬಯಲಾಗಿದ್ದು ಹೇಗೆ?
Crime News: ಮನೆ ಖಾಲಿ ಮಾಡುವಂತೆ ಹೇಳಿದ್ದಕ್ಕೆ ವಾಯುಪಡೆಯ ಮಾಜಿ ಅಧಿಕಾರಿಯೊಬ್ಬರನ್ನು ಅವರದೇ ಪುತ್ರರು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್‍ನಲ್ಲಿ ನಡೆದಿದೆ. ಆಸ್ತಿ ವಿವಾದ ಹಾಗೂ ಕುಟುಂಬದ ಒಳಜಗಳ ಈ ಭೀಕರ ಕೃತ್ಯಕ್ಕೆ ಕಾರಣವಾಗಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಪುತ್ರರಿಂದಲೇ ಹತ್ಯೆಯಾದ ವಾಯುಪಡೆಯ ಮಾಜಿ ಅಧಿಕಾರಿ (ಸಂಗ್ರಹ ಚಿತ್ರ) -
ಘಾಜಿಯಾಬಾದ್: ಮನೆ ಖಾಲಿ ಮಾಡುವಂತೆ ಹೇಳಿದ್ದ ಭಾರತೀಯ ವಾಯುಪಡೆಯ (IAF) ನಿವೃತ್ತ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ ಘಟನೆ ಉತ್ತರ ಪ್ರದೇಶದ (Uttar Pradesh) ಘಾಜಿಯಾಬಾದ್‍ನಲ್ಲಿ ನಡೆದಿದೆ. ಕೊಲೆಯನ್ನು ಅವರ ಪುತ್ರರೇ ಮಾಡಿದ್ದಾರೆ (Murder Case) ಎಂದು ತಿಳಿದುಬಂದಿದೆ. ಹತ್ಯೆ ಮಾಡಿದ ಐದು ದಿನಗಳ ಬಳಿಕ ಈ ವಿಚಾರ ತಿಳಿದುಬಂದಿದ್ದು, ಪುತ್ರರು ತಮ್ಮ ತಂದೆಯ ಕೊಲೆಗೆ ಸುಪಾರಿ ನೀಡಿದ್ದರು ಎಂದು ಪೊಲೀಸ್ ತನಿಖೆಯಿಂದ ಗೊತ್ತಾಗಿದೆ. ಕೊಲೆಯಲ್ಲಿ ಪೊಲೀಸ್ ಪೇದೆಯೊಬ್ಬರು ಕೂಡ ಭಾಗಿಯಾಗಿದ್ದಾರೆ
ಬಾಗ್‌ಪತ್ ಜಿಲ್ಲೆಯ ನಿವೃತ್ತ ಐಎಎಫ್ ಉದ್ಯೋಗಿ ಯೋಗೇಶ್ (58) ಕೊಲೆಯಾದ ದುರ್ದೈವಿ. ಯೋಗೇಶ್ ಅವರನ್ನು ಡಿಸೆಂಬರ್ 26 ರಂದು ಲೋನಿ ಪ್ರದೇಶದ ಅಶೋಕ್ ವಿಹಾರ್ ಕಾಲೋನಿಯಲ್ಲಿರುವ ತಮ್ಮ ನಿವಾಸಕ್ಕೆ ಹಿಂತಿರುಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಲೋನಿ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಸಿದ್ಧಾರ್ಥ ಗೌತಮ್ ತಿಳಿಸಿದ್ದಾರೆ.
ಮಹಿಳೆ ಮೇಲೆ ಗ್ಯಾಂಗ್ ರೇಪ್; ಚಲಿಸುತ್ತಿದ್ದ ವಾಹನದಿಂದ ಎಸೆದ ದುಷ್ಟರು
ಯೋಗೇಶ್ ತನ್ನ ಪುತ್ರರನ್ನು ಮನೆಯಿಂದ ಹೋಗುವಂತೆ ಹೇಳಿದ್ದರು. ಹೀಗಾಗಿ ಆಸ್ತಿಯ ದುರಾಸೆಯಿಂದ ಅವರ ಕೊಲೆಗೆ ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪುತ್ರರು ನೆರೆಮನೆಯವರಾದ ಅರವಿಂದ್ (32) ಎಂಬಾತನಿಗೆ ತಂದೆಯನ್ನು ಕೊಲ್ಲಲು ಸುಪಾರಿ ಕೊಟ್ಟಿದ್ದರು ಎಂದು ಹೇಳಲಾಗಿದೆ. ಕೌಶಂಬಿ ಜಿಲ್ಲೆಯಲ್ಲಿ ನಿಯೋಜಿತರಾಗಿರುವ ಕಾನ್‌ಸ್ಟೇಬಲ್ ನವೀನ್ ಜೊತೆ ಸೇರಿ ಅರವಿಂದ್, ಯೋಗೇಶ್ ಅವರಿಗೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಚಾರಣೆಯ ಸಮಯದಲ್ಲಿ ಅರವಿಂದ್ ಮತ್ತು ನವೀನ್, ಯೋಗೇಶ್ ಮೇಲೆ ಎರಡು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡರು ಎಂದು ಎಸಿಪಿ ಹೇಳಿದರು. ಬುಧವಾರ ಸಂಜೆ (ಡಿ.31) ಅರವಿಂದ್ ಅವರನ್ನು ಬಂಧಿಸಿ ಗುರುವಾರ ಗಾಜಿಯಾಬಾದ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನಿಂದ 315 ಬೋರ್ ಕಂಟ್ರಿ ನಿರ್ಮಿತ ಪಿಸ್ತೂಲ್, ಎರಡು ಲೈವ್ ಕಾರ್ಟ್ರಿಡ್ಜ್‌ಗಳು ಮತ್ತು ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾನ್‌ಸ್ಟೇಬಲ್ ನವೀನ್ ಮತ್ತು ಮೃತರ ಇಬ್ಬರು ಪುತ್ರರು ಪರಾರಿಯಾಗಿದ್ದು, ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಬೆಂಗಳೂರಿನ ಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಒಬ್ಬ ಸಾವು, ಮೂವರಿಗೆ ಗಾಯ
ಸಂತ್ರಸ್ತೆಯ ಪತಿಗೆ ಬೆಂಕಿ ಹಚ್ಚಿದ ಲೈಂಗಿಕ ದೌರ್ಜನ್ಯದ ಆರೋಪಿ
ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ವ್ಯಕ್ತಿಯೊಬ್ಬ ಜಾಮೀನಿನ ಮೇಲೆ ಬಿಡುಗಡೆಯಾಗಿ ತನ್ನ ಕುಟುಂಬ ಸದಸ್ಯರೊಂದಿಗೆ ಸೇರಿ ಸಂತ್ರಸ್ತೆಯ ಪತಿಗೆ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಸಂತ್ರಸ್ತೆಯ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಗಾಯಾಳು ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.