ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅನೈತಿಕ ಸಂಬಂಧಕ್ಕೆ ಬೇಸತ್ತು ಬಿಜೆಪಿ ಮುಖಂಡನ ಪತ್ನಿ ಆತ್ಮಹತ್ಯೆ!

ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ ಕಿರುಕುಳಕ್ಕೆ ಬೇಸತ್ತ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹೊಸವೀರಾಪುರ ಗ್ರಾಮದ ಮೂಲದ ಮಂಜುಳಾ (38) ಮೃತ ದುರ್ದೈವಿ.

ಅನೈತಿಕ ಸಂಬಂಧಕ್ಕೆ ಬೇಸತ್ತು ಬಿಜೆಪಿ ಮುಖಂಡನ ಪತ್ನಿ ಆತ್ಮಹತ್ಯೆ!

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Apr 29, 2026 9:33 AM

ಸೊರಬ: ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ ಕಿರುಕುಳಕ್ಕೆ ಬೇಸತ್ತ ಪತ್ನಿ ನೇಣಿಗೆ ಶರಣಾಗಿರುವ ಘಟನೆ (Self Harming) ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹೊಸವೀರಾಪುರ ಗ್ರಾಮದ ಮೂಲದ ಮಂಜುಳಾ (38) ಮೃತ ದುರ್ದೈವಿ. ಸೊರಬ ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ (BJP) ಮುಖಂಡ ಪ್ರಭು ಮೇಸ್ತ್ರಿ ಎಂಬಾತನ ಪತ್ನಿ ಮಂಜುಳಾ, ತನ್ನ ಗಂಡನ ಅನೈತಿಕ ಸಂಬಂಧಗಳ ಬಗ್ಗೆ ತಿಳಿದು ಮನನೊಂದಿದ್ದರು.

ಪ್ರಭು ಮೇಸ್ತ್ರಿ ತನ್ನ ಹಾರ್ಡ್‌ವೇರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಆರೋಪವಿದೆ. ಈ ಸಂಬಂಧವನ್ನು ಬಿಟ್ಟುಬಿಡುವಂತೆ ಹಿರಿಯರು ಮತ್ತು ಸಂಬಂಧಿಕರು ಹಲವು ಬಾರಿ ಬುದ್ಧಿಮಾತು ಹೇಳಿದ್ದರೂ, ಪ್ರಭು ಅದನ್ನು ಮುಂದುವರಿಸಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಇದೇ ವಿಚಾರವಾಗಿ ಪತ್ನಿ ಮಂಜುಳಾ ಅವರಿಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

ಇದೀಗ ಮೃತಳ ತಾಯಿ ಸೊರಬ ಪೋಲೀಸರಿಗೆ ದೂರು ನೀಡಿದ್ದು, ಇದರ ಆಧಾರದಲ್ಲಿ ಬಿಜೆಪಿ ಮುಖಂಡ ಪ್ರಭು ಮೇಸ್ತ್ರಿಯನ್ನು ಬಂಧಿಸಲಾಗಿದೆ. ಸದ್ಯ ವಿಚರಣೆ ನಡೆಸಲಾಗುತ್ತಿದ್ದು, ಇನ್ನಷ್ಟು ಮಾಹಿತಿ ತಿಳಿದು ಬರಬೇಕಾಗಿದೆ.

ಶಿಕ್ಷಕಿ ಆತ್ಮಹತ್ಯೆ

ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಸಾವಿಗೆ ಶರಣಾದ ಶಿಕ್ಷಕಿಯನ್ನು ಚೇರಂಬಾಣೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ. ರೋಹಿಣಿ(51) ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರೋಹಿಣಿ ಅವರು ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ತಮ್ಮ ಮನೆಯಲ್ಲಿದ್ದ ಕೋವಿಯಿಂದಲೇ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.