ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Spying Case: ಪಾಕ್‌ ಪರ ಬೇಹುಗಾರಿಕೆ, ಉಡುಪಿಯಲ್ಲಿ ಮೂರನೇ ವ್ಯಕ್ತಿ ಬಂಧನ

ಎರಡು ವಾರಗಳ ಹಿಂದೆ ಮಲ್ಪೆಯ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಉತ್ತರಪ್ರದೇಶದ ರೋಹಿತ್‌ ಮತ್ತು ಸಂತ್ರಿ ಎಂಬವರು ಇಲ್ಲಿಗೆ ದುರಸ್ತಿಗೆ ಬರುತ್ತಿದ್ದ ಭಾರತೀಯ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್‌ ಮತ್ತಿತರ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು. ಇದೀಗ ಅವರಿಗೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಇನ್ನೊಬ್ಬ ಆರೋಪಿಯನ್ನು (Spying case) ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಉಡುಪಿಯಲ್ಲಿ ಬೇಹುಗಾರನ ಬಂಧನ

ಉಡುಪಿ, ಡಿ.22: ಕಳೆದ ಕೆಲವು ದಿನಗಳ ಹಿಂದೆ ಭಾರತ ನೌಕಾ ಪಡೆಯ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ (Pakistan) ರವಾನಿಸುತ್ತಿದ್ದ ಇಲ್ಲಿನ (Udupi) ಕೊಚ್ಚಿನ್ ಶಿಪ್‌ಯಾರ್ಡ್‌ನ (Kochin Shipyard) ಇಬ್ಬರು ನೌಕರರನ್ನು ಬಂಧಿಸಲಾಗಿತ್ತು. ಇದೀಗ ಅವರಿಗೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಇನ್ನೊಬ್ಬ ಆರೋಪಿಯನ್ನು (Spying case) ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುಜರಾತ್‌ನ ಆನಂದ್ ತಾಲೂಕಿನ ಕೈಲಾಸ್ ನಗರಿ ನಿವಾಸಿ ಹೀರೇಂದ್ರ ಕುಮಾರ್ ಖಡಯಾತ್ (34) ಎಂದು ಗುರುತಿಸಲಾಗಿದೆ.

ಈತ ಕೂಡ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಉದ್ಯೋಗಿಯಾಗಿದ್ದಾನೆ. ಎರಡು ವಾರಗಳ ಹಿಂದೆ ಮಲ್ಪೆಯ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಉತ್ತರಪ್ರದೇಶದ ರೋಹಿತ್‌ ಮತ್ತು ಸಂತ್ರಿ ಎಂಬವರು ಇಲ್ಲಿಗೆ ದುರಸ್ತಿಗೆ ಬರುತ್ತಿದ್ದ ಭಾರತೀಯ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್‌ ಮತ್ತಿತರ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು. ಆರೋಪಿ ರೋಹಿತ್ ಯುಪಿಯ ಸುಲ್ತಾನ್​ಪುರ ಜಿಲ್ಲೆಯನಾಗಿದ್ರೆ ಮತ್ತೋರ್ವ ಸಂತ್ರಿ ಸುಲ್ತಾನ್​ಪುರದ ಹಂಜಾಬಾದ್ ಮೈದಾನ್ ನಿವಾಸಿ. ಇಬ್ಬರೂ ಮಲ್ಪೆಯ ಸುಷ್ಮಾ ಮರೈನ್ ಪ್ರೈವೇಟ್ ಲಿಮಿಟೆಡ್ ಮೂಲಕ ಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದ ಉದ್ಯೋಗಿಗಳು. ಮಲ್ಪೆಯ ಶಿಪ್ ಯಾರ್ಡ್​​ನಲ್ಲಿ ರೋಹಿತ್ ಇನ್ಸುಲೇಟರ್ ಆಗಿ ಕೆಲಸ ಮಾಡ್ತಿದ್ರೆ, ಮತ್ತೋರ್ವ ಆರೋಪಿ ಕೇರಳದಲ್ಲಿ ಕೆಲಸ ಮಾಡ್ತಿದ್ದ.

ವಾಟ್ಸ್‌ಆ್ಯಪ್ ಮೂಲಕ ಪಾಕಿಸ್ತಾನಕ್ಕೆ ರವಾನಿಸಿ ಹಣ ಪಡೆಯುತ್ತಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದರು. ವಿಚಾರಣೆ ವೇಳೆ ಈ ಆರೋಪಿಗಳಿಗೆ ನೀಡಿದ ಮಾಹಿತಿಯಂತೆ ಅವರಿಗೆ ಸಿಮ್‌ಗಳನ್ನು ಒದಗಿಸುತ್ತಿದ್ದ ಹೀರೇಂದ್ರನನ್ನು ಬಂಧಿಸಿ ತನಿಖೆ ಮುಂದುವರಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಅನೇಕ ಮಂದಿ ಶಾಮೀಲಾಗಿರುವ ಸಂಶಯಗಳಿದ್ದು, ಪೊಲೀಸರು ತಲಾಶ್‌ ಮುಂದುವರಿಸಿದ್ದಾರೆ.

ಬಲೂನ್‌ ಮೂಲಕ ಪಾಕಿಸ್ತಾನ ಬೇಹುಗಾರಿಕೆ; ಹಿಮಾಚಲದಲ್ಲಿ ಪತ್ತೆಯಾಯ್ತು ಸ್ಫೋಟಕ ಮಾಹಿತಿ

ಹರೀಶ್‌ ಕೇರ

View all posts by this author