Student Self Harming: ಪರೀಕ್ಷೆ ಭಯದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ
ಚಿತ್ರದುರ್ಗ ನಗರದ ತಮಟಕಲ್ಲು ರಸ್ತೆ ಈಶ್ವರ ಬಡಾವಣೆ ನಿವಾಸಿ ರಾಕೇಶ್ (16) ಪರೀಕ್ಷೆಯಲ್ಲಿ ಅನುತ್ತೀರ್ಣನಾಗುವ ಆತಂಕದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರೀಕ್ಷೆಯ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಘಟನೆ ಸಂಬಂಧ ಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಾಂದರ್ಭಿಕ ಚಿತ್ರ

ಚಿತ್ರದುರ್ಗ: ಚಿತ್ರದುರ್ಗದಲ್ಲಿ (Chtradurga news) ಮನಕಲಕುವ ಘಟನೆಯೊಂದು ನಡೆದಿದೆ. ಪರೀಕ್ಷೆಯ ಭಯದಿಂದ ಎಸ್ಎಸ್ಎಲ್‌ಸಿ (SSLC) ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ (Student Self Harming) ಮಾಡಿಕೊಂಡಿದ್ದಾನೆ. ಚಿತ್ರದುರ್ಗ ನಗರದ ತಮಟಕಲ್ಲು ರಸ್ತೆ ಈಶ್ವರ ಬಡಾವಣೆ ನಿವಾಸಿ ರಾಕೇಶ್ (16) ಪರೀಕ್ಷೆಯಲ್ಲಿ ಅನುತ್ತೀರ್ಣನಾಗುವ ಆತಂಕದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪರೀಕ್ಷೆಯ ಭಯದಿಂದ ರಾಕೇಶ್ ಗುರುವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಘಟನೆ ಸಂಬಂಧ ಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರೇಯಸಿಯ ಸಾಕಲು ಕಳ್ಳತನ ಮಾಡುತ್ತಿದ್ದ ಯುವಕನ ಬಂಧನ
ಚಿಕ್ಕಬಳ್ಳಾಪುರ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸಿದ್ದ ಯವಕ ಆಕೆಯನ್ನು ಸಾಕುವುದಕ್ಕಾಗಿ ಭಾರಿ ಪ್ರಮಾಣದ ಕಳ್ಳತನ ಮಾಡಿ ಪೊಲೀಸರ ಕೈಸೆರೆಯಾಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕು, ಕೋರೇನಹಳ್ಳಿ ನಿವಾಸಿಯಾದ ಕೆಎಚ್ ನಾಗೇಂದ್ರ (21) ಬಂಧಿತ ಆರೋಪಿ.
ಗುಡಿಬಂಡೆ ನಗರದ 16 ವರ್ಷದ ಬಾಲಕಿಯನ್ನು ಪ್ರೀತಿಸಿದ್ದ ನಾಗೇಂದ್ರ, ಆಕೆಯ ಸಮೇತ ಮಂಡ್ಯದಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದ. ಕೊನೆಗೆ ಪ್ರಿಯತಮೆಯನ್ನು ಸಾಕಲು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮನೆಗಳ ಕಳ್ಳತನಕ್ಕೆ ಇಳಿದಿದ್ದ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ, ಪೆರೇಸಂದ್ರ, ಚೇಳೂರು ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 8ಕ್ಕೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾಗಿದ್ದಾನೆ. ಪೊಲೀಸರು ಆರೋಪಿ ನಾಗೇಂದ್ರನನ್ನು ಬಂಧಿಸಿ, ಆತನಿಂದ 12 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.
ಆರೋಪಿ ಕೆಎಸ್ ನಾಗೇಂದ್ರನಿಂದ 152 ಗ್ರಾಂ ಚಿನ್ನ, 496 ಗ್ರಾಂ ಬೆಳ್ಳಿ, 12 ಬೈಕ್ ಸೇರಿ 12,41,200 ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಆರು ಮನೆಗಳ್ಳತನ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆತನ ಅಪ್ರಾಪ್ತ ಪ್ರಿಯತಮೆಯನ್ನು ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೆ ಕಳುಹಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ತಿಳಿಸಿದ್ದಾರೆ.
ಇದನ್ನೂ ಓದಿ: Engineer Self Harming: ಸರಣಿ ಆತ್ಮಹತ್ಯೆಗೆ ಮತ್ತೊಂದು ಸೇರ್ಪಡೆ; ಗದಗದಲ್ಲಿ ಇಂಜಿನಿಯರ್ ಆತ್ಮಹತ್ಯೆ