ಶ್ರೀನಗರ, ಅ. 22: ವ್ಯಕ್ತಿಯೊಬ್ಬ ತನ್ನ ಮಲತಾಯಿ ಮೇಲೆಯೇ ಡೀಸೆಲ್ ಸುರಿದು ಬೆಂಕಿ ಹಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾನೆ. ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿದ್ದ 40 ವರ್ಷದ ಮಹಿಳೆಯನ್ನು ಕೂಡಲೇ ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಆದರೆ ಗಂಭೀರ ಗಾಯಗೊಂಡಿದ್ದರಿಂದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ (Crime News). ಉಧಂಪುರದ ಹೌಸಿಂಗ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಉಧಂಪುರದ ಹೌಸಿಂಗ್ ಕಾಲೋನಿ ನಿವಾಸಿ ಕೇಶವ್ ವರ್ಮಾ ಅವರ ಪತ್ನಿ ಸುಷ್ಮಾ ದೇವಿ ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಮೋಕ್ಷ ವರ್ಮಾ ಎಂದು ಗುರುತಿಸಲಾಗಿದೆ. ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪರಿಣಾಮ ಅವರ ದೇಹದಲ್ಲಿ ಸುಮಾರು ಶೇ. 70ರಷ್ಟು ಸುಟ್ಟ ಗಾಯಗಳಾಗಿದ್ದವು. ಇಡೀ ಘಟನೆಯ ಆಘಾತಕಾರಿ ದೃಶ್ಯದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಮಹಿಳೆ ಬೆಂಕಿಯ ಜ್ವಾಲೆಗಳಲ್ಲಿ ಸಿಲುಕಿ, ಸಹಾಯಕ್ಕಾಗಿ ಕಿರುಚುತ್ತಾ ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಈ ವೇಳೆ ನೆರೆಹೊರೆಯವರು ಆಕೆಯ ರಕ್ಷಣೆಗೆ ಧಾವಿಸಿ, ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ.
ವೈರಲ್ ವಿಡಿಯೊ:
ಕುಟುಂಬ ಸದಸ್ಯರು ತಕ್ಷಣ ಆಕೆಯನ್ನು ಉಧಂಪುರದ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಿದರು. ಪ್ರಾಥಮಿಕ ಚಿಕಿತ್ಸೆಯ ನಂತರ, ಆಕೆಯ ಸ್ಥಿತಿ ಗಂಭೀರವಾಗಿದ್ದ ಕಾರಣ ವೈದ್ಯರು ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲು ಸೂಚಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಉಧಂಪುರ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.
ಮೊಬೈಲ್ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ: ಮಂಗಳೂರಿನಲ್ಲಿ ಸ್ನೇಹಿತನ ಸ್ಕೂಟರ್ಗೆ ಪಿಕಪ್ ವಾಹನ ಡಿಕ್ಕಿ ಹೊಡೆಸಿ ಹತ್ಯೆ
ಡೆತ್ನೋಟ್ ಬರೆದಿಟ್ಟು ನದಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ
ಕೊಪ್ಪಳ: ಖಾಸಗಿ ಶಾಲಾ ಶಿಕ್ಷಕಿಯೊಬ್ಬರು ತುಂಗಭದ್ರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ ಖಾಸಗಿ ಶಾಲಾ ಶಿಕ್ಷಕಿ ಸಂಗೀತಾ ಮೇಟಿ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಅ.19ರಂದು ಕೊಪ್ಪಳಕ್ಕೆ ಹೋಗಿಬರುವುದಾಗಿ ಹೇಳಿ ಸಂಗೀತಾ ಹೋಗಿದ್ದರು. ಅಕ್ಟೋಬರ್ 20ರ ಬೆಳಗ್ಗೆ ವಿಜಯನಗರ ಜಿಲ್ಲೆಯ ಗಡಿ ಭಾಗದಲ್ಲಿ ಅವರ ಮೃತದೇಹ ಪತ್ತೆಯಾಗಿದೆ.