4 ವರ್ಷಗಳ ಕಾಲ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಬಾಕ್ಸಿಂಗ್ ಕೋಚ್ ವಿರುದ್ಧ ದೂರು
ಕಂಠೀರವ ಕ್ರೀಡಾಂಗಣದಲ್ಲಿರುವ ಲಯನ್ಸ್ ಬಾಕ್ಸಿಂಗ್ ಕ್ಲಬ್‌ಗೆ ಸೇರಿದ ಬಾಕ್ಸಿಂಗ್ ತರಬೇತುದಾರನ ವಿರುದ್ಧ 17 ವರ್ಷದ ಬಾಕ್ಸರ್ ನೀಡಿದ ಆರೋಪದ ಮೇರೆಗೆ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ. ಮೇ 22 ರಂದು ಹದಿಹರೆಯದ ಬಾಲಕಿ ತನ್ನ ತಾಯಿಯ ಮೂಲಕ ದೂರು ದಾಖಲಿಸಿದ್ದಾಳೆ.
ಸಂಗ್ರಹ ಚಿತ್ರ -
ಬೆಂಗಳೂರು: ಕಂಠೀರವ ಕ್ರೀಡಾಂಗಣದಲ್ಲಿರುವ ಲಯನ್ಸ್ ಬಾಕ್ಸಿಂಗ್ ಕ್ಲಬ್‌ಗೆ ಸೇರಿದ ಬಾಕ್ಸಿಂಗ್ ತರಬೇತುದಾರನ ವಿರುದ್ಧ 17 ವರ್ಷದ ಬಾಕ್ಸರ್ ನೀಡಿದ ಆರೋಪದ ಮೇರೆಗೆ ಲೈಂಗಿಕ ಕಿರುಕುಳ ಪ್ರಕರಣ (Physical Assault) ದಾಖಲಾಗಿದೆ. ಮೇ 22 ರಂದು ಹದಿಹರೆಯದ ಬಾಲಕಿ ತನ್ನ ತಾಯಿಯ ಮೂಲಕ ದೂರು ದಾಖಲಿಸಿದ್ದಾಳೆ. ವಿದ್ಯಾರ್ಥಿನಿ ಕಳೆದ 10 ವರ್ಷಗಳಿಂದ ಲಯನ್ಸ್ ಬಾಕ್ಸಿಂಗ್ ಕ್ಲಬ್‌ನಲ್ಲಿ ತರಬೇತಿ ಪಡೆಯುತ್ತಿದ್ದಳು.
ಆರೋಪಿಯನ್ನು 50 ವರ್ಷದ ರಾಮಚಂದ್ರ ಎಂದು ಗುರುತಿಸಲಾಗಿದ್ದು, ಈತ ಬಾಲಕಿಯ ಬಾಕ್ಸಿಂಗ್ ತರಬೇತುದಾರನಾಗಿ ಸೇವೆ ಸಲ್ಲಿಸುತ್ತಿದ್ದ. ಕಳೆದ ನಾಲ್ಕು ವರ್ಷಗಳಿಂದ ತರಬೇತುದಾರ ತನ್ನ ಮಗಳಿಗೆ ಕಿರುಕುಳ ನೀಡುತ್ತಿದ್ದಾನೆ ಎಂದು ದೂರುದಾರರು ಆರೋಪಿಸಿದ್ದಾರೆ. ಕಳೆದ ಐದರಿಂದ ಆರು ತಿಂಗಳಿನಿಂದ ಈ ಘಟನೆಗಳು ತೀವ್ರಗೊಂಡಿವೆ. ರಾಮಚಂದ್ರ ಅವರು ಕಂಠೀರವ ಕ್ರೀಡಾಂಗಣದಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಹಲವು ಬಾರಿ ಆಕೆಯನ್ನು ಅನುಚಿತವಾಗಿ ಸ್ಪರ್ಶಿಸಿದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೇ 17 ರಂದು ಚೆನ್ನೈಗೆ ಬಾಕ್ಸಿಂಗ್ ಸ್ಪರ್ಧೆಯ ಪ್ರವಾಸದ ಸಮಯದಲ್ಲಿ, ತರಬೇತುದಾರ ಅಪ್ರಾಪ್ತ ಬಾಲಕಿಯನ್ನು ತನ್ನ ಖಾಸಗಿ ಕೋಣೆಗೆ ಕರೆದು, ಆಕೆಯ ಖಾಸಗಿ ಭಾಗಗಳನ್ನು ಮುಟ್ಟಿ, ಬಲವಂತವಾಗಿ ಮುತ್ತಿಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ಬಾಲಕಿ ಈ ಕುರಿತು ಯಾರಲ್ಲಿಯಾದರೂ ಹೇಳಿದ್ದರೆ ಜೀವಕ್ಕೆ ಅಪಾಯ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಆಪಾದಿತ ಕಿರುಕುಳಕ್ಕೆ ಸಂಬಂಧಿಸಿದಂತೆ ಮೊದಲೇ ಒಂದು ಸಮಿತಿಯ ಮುಂದೆ ದೂರನ್ನು ಸಲ್ಲಿಸಲಾಗಿತ್ತು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಪೊಲೀಸರು ಈಗ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (BNS), 2023 ರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದು, ತನಿಖೆಗಳು ನಡೆಯುತ್ತಿವೆ.
ಪ್ರತ್ಯೇಕ ಘಟನೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ನಿವೃತ್ತಿಯ ಅಂಚಿನಲ್ಲಿರುವ 59 ವರ್ಷದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರೊಬ್ಬರನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಅಡಿಯಲ್ಲಿ ಶುಕ್ರವಾರ ಬಂಧಿಸಲಾಗಿದೆ.
ಮಹಿಳೆಯ ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ; ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ಅರೆಸ್ಟ್
ಶನಿವಾರ ಮುಖ್ಯೋಪಾಧ್ಯಾಯ ಚಂದ್ರಯ್ಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿದ್ಯಾರ್ಥಿನಿ ಒಂದೂವರೆ ತಿಂಗಳ ಗರ್ಭಿಣಿಯಾಗಿದ್ದು, ಆಕೆ ಮುಖ್ಯೋಪಾಧ್ಯಾಯರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾರೆಂದು ತಿಳಿದು ಸಂತ್ರಸ್ತೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಶ್ರೀರಾಂಪುರ ಪೊಲೀಸರು ಪೋಕ್ಸೊ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮುಖ್ಯೋಪಾಧ್ಯಾಯರು ಸುಮಾರು ಒಂದು ವರ್ಷದಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ ಎನ್ನಲಾಗಿದೆ.