Suhas Shetty Murder Case: ಹಿಂದುತ್ವ ಕಾರ್ಯಕರ್ತ ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟ್ ಓಪನ್ ಮಾಡಿದ್ದು ಬಿಜೆಪಿ ಸರಕಾರ!
Suhas Shetty Murder Case: ಸಚಿವ ದಿನೇಶ್ ಗುಂಡೂರಾವ್ ಬಹಿರಂಗಡಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಪೊಲೀಸ್ ಠಾಣೆಯ ದಾಖಲೆಗಳಲ್ಲಿ, ಸುಹಾಸ್ ಶೆಟ್ಟಿ ಮೇಲಿರುವ ಹಲವಾರು ಗೂಂಡಾಗಿರಿ ಪ್ರಕರಣಗಳು ಬಯಲಾಗಿವೆ. 2020ರಲ್ಲಿ ಈತನ ಮೇಲೆ ಬಜಪೆ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿತ್ತು.


ಬೆಂಗಳೂರು: ಮಂಗಳೂರಿನಲ್ಲಿ ಕೊಲೆಯಾದ ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮೇಲೆ ರೌಡಿ ಶೀಟ್ (rowdy sheet) ಅನ್ನು ತೆರೆಯಲಾಗಿದ್ದುದು ರಾಜ್ಯದಲ್ಲಿ ಬಿಜೆಪಿ ಸರಕಾರ (BJP Government) ಆಡಳಿತದಲ್ಲಿದ್ದಾಗಲೇ ಎಂಬುದನ್ನು ಆರೋಗ್ಯ ಸಚಿವ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Health minister Dinesh Gundu Rao) ಬಹಿರಂಗಪಡಿಸಿದ್ದಾರೆ. ಸುಹಾಸ್ ಶೆಟ್ಟಿ ಕೊಲೆ (Suhas Shetty Murder Case) ಪ್ರಕರಣದಲ್ಲಿ ಕಾಂಗ್ರೆಸ್, ಮುಸ್ಲಿಮರ ತುಷ್ಟೀಕರಣ ನಡೆ ಕೈಗೊಂಡಿದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಅವರು ಈ ಮೂಲಕ ಉತ್ತರ ನೀಡಿದ್ದಾರೆ.
ದಿನೇಶ್ ಗುಂಡೂರಾವ್ ಬಹಿರಂಗಡಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಪೊಲೀಸ್ ಠಾಣೆಯ ದಾಖಲೆಗಳಲ್ಲಿ, ಸುಹಾಸ್ ಶೆಟ್ಟಿ ಮೇಲಿರುವ ಹಲವಾರು ಗೂಂಡಾಗಿರಿ ಪ್ರಕರಣಗಳು ಬಯಲಾಗಿವೆ. ಈತನ ಮೇಲೆ ಕೊಲೆ, ಕೊಲೆಯತ್ನ, ಹಲ್ಲೆ, ಬೆದರಿಕೆ, ಬ್ಲ್ಯಾಕ್‌ಮೇಲ್, ಅಪಹರಣ ಮೊದಲಾದ ಪ್ರಕರಣಗಳು ಬಜಪೆ, ಬೆಳ್ತಂಗಡಿ ಮೊದಲಾದ ಕಡೆಗಳಲ್ಲಿ ದಾಖಲಾಗಿವೆ. ಈ ಕಾರಣದಿಂದ ಬಜಪೆ ಠಾಣಾಧಿಕಾರಿಗಳು ಈತನ ಮೇಲೆ ರೌಡಿಶೀಟ್ ತೆರೆಯಲು ಅನುಮತಿ ಕೇಳಿದ್ದು, ಪೊಲೀಸ್ ನಿರೀಕ್ಷಕರು ಅದಕ್ಕೆ ಅನುಮತಿ ನೀಡಿದ್ದರು. ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಅವರು ಗೃಹ ಮಂತ್ರಿ ಆಗಿದ್ದರು. ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದರು.
ಇದನ್ನು ಸೋಶಿಯಲ್ ಮೀಡಿಯಾದಲ್ಲಿ ದಿನೇಶ್ ಗುಂಡೂರಾವ್ ಪ್ರಕಟಿಸಿದ್ದಾರೆ. ಅವರು ಹೀಗೆ ಬರೆದಿದ್ದಾರೆ:
ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ.#SuhasShetty ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು @BJP4India… pic.twitter.com/mIc4GVEEcD
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 6, 2025
"ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ.
#SuhasShetty ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು @BJP4India ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ @BSBommai. ಇಂದು ಸುಹಾಸ್‌ನನ್ನು ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು?
ಕರಾವಳಿಯನ್ನು ಕೋಮು ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು. ಇವರು ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್‌ಗಳನ್ನು ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ ಮಾಡುತ್ತಾರೆ.
ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ @BJP4Karnataka ನಾಯಕರ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ? ಬಿಜೆಪಿ ನಾಯಕರ ಧರ್ಮಾಂಧತೆಗೆ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೆ?
ಬಿಜೆಪಿಯವರ ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ ಬಲಿಯಾಗಿದೆ. ಎಷ್ಟೋ ಮನೆಗಳ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ದುಷ್ಟ ರಾಜಕಾರಣ ಮಾಡುತ್ತಿದ್ದಾರೆ. ದಕ್ಷಿಣ ಕನ್ನಡದ ಜನ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ ಬಿಜೆಪಿಯವರ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ ನೆಮ್ಮದಿಯೇ ಹಾಳಾಗಲಿದೆ."
ಇದನ್ನೂ ಓದಿ: Suhas Shetty Murder Case: ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಗೆ 5 ದಿನ ನ್ಯಾಯಾಂಗ ಬಂಧನ