ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Darshan: ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ವಿಚಾರಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಸೇರಿದಂತೆ ಏಳು ಜನ ಆರೋಪಿಗಳಿಗೆ ಹೈಕೋರ್ಟ್‌ (High court) ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ಪೊಲೀಸರು ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದ್ದು, ಈ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕಿದೆ.

ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ವಿಚಾರಣೆ

ನಟ ದರ್ಶನ್

ಹರೀಶ್‌ ಕೇರ ಹರೀಶ್‌ ಕೇರ Apr 2, 2025 9:02 AM

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka swamy murder case) ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Actor Darshan) ಅವರಿಗೆ ನೀಡಿದ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ನಡೆಯಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಏಳು ಜನ ಆರೋಪಿಗಳಿಗೆ ಹೈಕೋರ್ಟ್‌ (High court) ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದ್ದು, ಈ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ. ನಟಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದಾರೆ. ಪ್ರಕರಣದಲ್ಲಿ ದರ್ಶನ್ ವೈದ್ಯಕೀಯ ಕಾರಣಗಳಿಗಾಗಿ ಜೈಲಿನಿಂದ ಜಾಮೀನು ಪಡೆದು ಹೊರಬಂದಿದ್ದಾರೆ. ಮೊದಲು ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಬಂದರು. ನಂತರ ಹೈಕೋರ್ಟ್ ದರ್ಶನ್‌ ಹಾಗೂ ಪವಿತ್ರಾ ಗೌಡ ಸೇರಿದಂತೆ ಸಂಪೂರ್ಣ ಅವರ ಗ್ಯಾಂಗ್‌ಗೆ ಜಾಮೀನು ಮಂಜೂರು ಮಾಡಿತ್ತು. ಇಂದಿನ ವಿಚಾರಣೆಯಲ್ಲಿ ದರ್ಶನ್ ಪವಿತ್ರಾ ಮತ್ತೆ ಮುಖಾಮುಖಿಯಾಗುವ ಸಾಧ್ಯತೆ ಇದೆ.

ನಟ ದರ್ಶನ್ ಜೈಲಿನಿಂದ ಹೊರ ಬಂದ ಬಳಿಕ ದೇವಸ್ಥಾನ, ಚಿಕಿತ್ಸೆ, ಶೂಟಿಂಗ್ ಎಂದು ಬ್ಯುಸಿ ಆಗಿದ್ದಾರೆ. ಹೈಕೋರ್ಟ್ ದರ್ಶನ್ ಆಂಡ್ ಗ್ಯಾಂಗ್‌ಗೆ ನೀಡಿದ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿ ಇದೀಗ ವಿಚಾರಣೆಗೆ ಬಂದಿದೆ. ಇದರಿಂದ ದರ್ಶನ್‌ಗೆ ಮತ್ತೆ ಸಂಕಷ್ಟ ಎದುರಾಗಲಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ದರ್ಶನ್ ಆಂಡ್ ಗ್ಯಾಂಗ್‌ಗೆ ನೋಟೀಸ್ ಜಾರಿ ಮಾಡಿತ್ತು. ಹೈಕೋರ್ಟ್‌ನಲ್ಲಿ ಜಾಮೀನು ಪಡೆದಂತೆ ಸುಪ್ರೀಂ ಕೋರ್ಟ್‌ನಲ್ಲೂ ಗೆಲ್ಲಲು ದರ್ಶನ್ ಖ್ಯಾತ ಹಿರಿಯ ವಕೀಲರಾದ ಕಪಿಲ್ ಸಿಬಲ್ ಅವರನ್ನು ನೇಮಿಸಿಕೊಂಡಿದ್ದಾರೆ. ಜೊತೆಗೆ ಅವರಿಗೆ ಹೈಕೋರ್ಟ್‌ನಲ್ಲಿ ನಡೆದ ಎಲ್ಲಾ ದಾಖಲೆಗಳನ್ನೂ ನೀಡಲಾಗಿದೆ ಎನ್ನಲಾಗುತ್ತಿದೆ.

ಹೈಕೋರ್ಟ್‌ ನೀಡಿರುವ ಜಾಮೀನು​ ಅವಸರದಿಂದ ಕೂಡಿದೆ. ದರ್ಶನ್ ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಸೆಷನ್ಸ್ ಕೋರ್ಟ್​ನಲ್ಲಿ ಕೇಸ್ ಚಾರ್ಜ್ ಫ್ರೇಮ್ ಇನ್ನೂ ಹಂತಕ್ಕೆ ಬಂದಿಲ್ಲ. ನಟ ದರ್ಶನ್​ಗೆ 6 ವಾರಗಳು ಮಧ್ಯಂತರ ಬೇಲ್ ನೀಡಿದ್ದಾಗಲೂ ಶಸ್ತ್ರಚಿಕಿತ್ಸೆ ಮಾಡಿಸಿಲ್ಲ. ನಟ ದರ್ಶನ್​ & ಗ್ಯಾಂಗ್ ಹೈಕೋರ್ಟ್​ ಜಾಮೀನಿಗೆ ಅರ್ಹರಾಗಿಲ್ಲ. ಕೇಸ್​​ನಲ್ಲಿ ಪ್ರಬಲ ಸಾಕ್ಷಿಗಳಿದ್ದರೂ, ಟೆಕ್ನಿಕಲ್ ಹಾಗೂ ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಲು ಹೈಕೋರ್ಟ್​ ವಿಫಲವಾಗಿದೆ. ಹೀಗಾಗಿ ಹೈಕೋರ್ಟ್ ಜಾಮೀನು ಆದೇಶಕ್ಕೆ ತಡೆ ನೀಡಬೇಕು ಎಂದು ವಾದಕ್ಕೆ ವಕೀಲರು ಸಿದ್ಧತೆ ಮಾಡಿಕೊಂಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಪಟ್ಟಣಗೆರೆ ಶೆಡ್‌ಗೆ ಕರೆಸಿ ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣದ ಆರೋಪದ ಮೇಲೆ ದರ್ಶನ್ ಹಾಗೂ ಪವಿತ್ರಾ ಸೇರಿದಂತೆ ಒಟ್ಟು 17 ಜನರನ್ನು ಪೊಲೀಸರು ಬಂಧಿಸಿದ್ದರು. ಇವರೆಲ್ಲರೂ ಬಿಡುಗಡೆಯಾಗಿದ್ದು ಈ ಪೈಕಿ 7 ಆರೋಪಿಗಳಿಗೆ ಸುಪ್ರೀಂ ನೋಟೀಸ್ ಜಾರಿ ಮಾಡಿದೆ. ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆಗೆ ದರ್ಶನ್ ಹಾಜರಾಗುತ್ತಾರಾ? ವಾದ ವಿವಾದಗಳು ಹೇಗಿರಲಿದೆ? ಸುಪ್ರೀಂ ಈ ಪ್ರಕರಣದಲ್ಲಿ ಯಾವ ತೀರ್ಪು ನೀಡುತ್ತದೆ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ: The Devil Movie: ರಾಜಸ್ಥಾನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ʼದಿ ಡೆವಿಲ್ʼ ಚಿತ್ರದ ಶೂಟಿಂಗ್