ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಿಎ ಹತ್ಯೆ; ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು!

ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ವೈಯಕ್ತಿಕ ಸಹಾಯಕ (ಪಿಎ) ಅವರನ್ನು ಮಧ್ಯಗ್ರಾಮದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (ಪಿಎ) ಚಂದ್ರನಾಥ್ ರಥ್ ಎಂದು

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಬಿಜೆಪಿ ನಾಯಕ ಸುವೇಂದು ಅಧಿಕಾರಿ (Suvendhu Adhikari) ಅವರ ವೈಯಕ್ತಿಕ ಸಹಾಯಕ (ಪಿಎ) ಅವರನ್ನು ಮಧ್ಯಗ್ರಾಮದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (ಪಿಎ) ಚಂದ್ರನಾಥ್ ರಥ್ ಎಂದು ಗುರುತಿಸಲ್ಪಟ್ಟಿದ್ದು, ಅವರ ಮೇಲೆ ಹಾರಿದ ನಾಲ್ಕು ಗುಂಡುಗಳಲ್ಲಿ ಮೂರು ಗುಂಡುಗಳು ತಗುಲಿವೆ. ಶಂಕಿತರು ಅವರ ಕಾರನ್ನು ಹಿಂಬಾಲಿಸಿ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.

ಚಂದ್ರನಾಥ್ ರಥ ಹಲವು ವರ್ಷಗಳಿಂದ ಸುವೇಂದು ಅಧಿಕಾರಿ ಜೊತೆ ಕೆಲಸ ಮಾಡುತ್ತಿದ್ದರು. ರಾಜಕೀಯ ಸಮನ್ವಯ ಮತ್ತು ಇತರ ಕೆಲಸಗಳನ್ನು ನಿರ್ವಹಿಸುತ್ತಿದ್ದರು. ಚಂದ್ರನಾಥ್ ರಥ ಸಾವಿನ ಸುದ್ದಿ ತಿಳಿಯುತ್ತಲೇ ಸುವೇಂದು ಆಸ್ಪತ್ರೆಗೆ ಆಗಮಿಸಿದ್ದರು. ರಥ ಅವರ ಚಾಲಕ ಬುದ್ಧದೇಬ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. ದಾಳಿ ನಡೆದಾಗ ಸುವೇಂದು ಅಧಿಕಾರಿ ತಮ್ಮ ಪಿಎ ಜೊತೆ ಇರಲಿಲ್ಲ ಎಂದು ಬಿಜೆಪಿ ನಾಯಕನ ಸಹೋದರ ದಿಬ್ಯೇಂದು ಅಧಿಕಾರಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ ಮತ್ತು ದಾಳಿಯಲ್ಲಿ ತೃಣಮೂಲ ಕಾಂಗ್ರೆಸ್ ಕೈವಾಡವಿದೆ ಎಂದು ಆರೋಪಿಸಿದ್ದಾರೆ. "ಈ ಘಟನೆಯು ತೃಣಮೂಲ ಕಾಂಗ್ರೆಸ್ ವರ್ಷಗಳಿಂದ ಪ್ರಚಲಿತದಲ್ಲಿರುವ ಹಿಂಸಾಚಾರದ ಸಂಸ್ಕೃತಿಯ ಸಂಕೇತವಾಗಿದೆ. ಅವರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಇದನ್ನು ಕೂಲಂಕಷವಾಗಿ ತನಿಖೆ ಮಾಡಬೇಕು. ಹತ್ಯೆಯ ಹಿಂದೆ ಆಳವಾದ ಪಿತೂರಿ ಇದೆ" ಎಂದು ಬಿಜೆಪಿ ನಾಯಕ ನಿಖಿಲ್ ಪ್ರಸೂನ್ ತಿಳಿಸಿದ್ದಾರೆ.

ಇನ್ನು X ನಲ್ಲಿ ಪೋಸ್ಟ್ ಮಾಡಿರುವ ತೃಣಮೂಲ ಕಾಂಗ್ರೆಸ್, ಕೊಲೆಯನ್ನು ಖಂಡಿಸಿದ್ದು, "ಬಿಜೆಪಿ ಬೆಂಬಲಿತ ದುಷ್ಕರ್ಮಿಗಳು" ಕಳೆದ ಮೂರು ದಿನಗಳಿಂದ ಚುನಾವಣೋತ್ತರ ಹಿಂಸಾಚಾರ ನಡೆಸುತ್ತಿದ್ದಾರೆ ಎಂದು ಆರೋಪಿದೆ. ಬಿಜೆಪಿ ಬೆಂಬಲಿಗರಂತೆ ನಟಿಸುತ್ತಿರುವ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಿಂಸಾಚಾರವನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದ ದಿನದಂದೇ ಅಧಿಕಾರಿಯ ಪಿಎ ಹತ್ಯೆ ನಡೆದಿದೆ. ಸದ್ಯ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ಕನಿಷ್ಠ 80 ಜನರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

Vishakha Bhat Heggar

View all posts by this author