ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸರ್ಕಾರಿ ಶಾಲೆ ಶಿಕ್ಷಕ
Crime News: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕನನ್ನು ಬಂಧಿಸಲಾಗಿದೆ. ಗುಜರಾತ್ನ ಅಮ್ರೇಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೂವರು ಅಪ್ರಾಪ್ತೆಯರಿಗೆ ಈ ಕಾಮುಕ ಶಿಕ್ಷಕ ಲೈಂಗಿಕ ಕಿರುಕುಳವನ್ನೂ ನೀಡಿದ್ದ. ಜಾಗೃತಿ ಕಾರ್ಯಕ್ರಮ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ಸಾಂದರ್ಭಿಕ ಚಿತ್ರ -
ಗಾಂಧಿನಗರ, ಅ. 17: ನಾಲ್ವರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಮತ್ತು ಅವರಲ್ಲಿ ಒಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಕಾಮುಕ ಶಿಕ್ಷಕನನ್ನು ಬಂಧಿಸಲಾಗಿದೆ. ಗುಜರಾತ್ನ ಅಮ್ರೇಲಿ ಜಿಲ್ಲೆಯಲ್ಲಿ ಘಟನೆ ನಡೆದಿದೆ (Crime News). ಈ ಸಂಬಂಧ ಜಾಫ್ರಾಬಾದ್ ಟೌನ್ ಪೊಲೀಸ್ ಠಾಣೆಯಲ್ಲಿ ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ (ಪೋಕ್ಸೋ) ಕಾಯ್ದೆಯಡಿ ದೂರು ದಾಖಲಿಸಲಾಗಿದ್ದು, ಅತ್ಯಾಚಾರದ ಆರೋಪಗಳನ್ನೂ ಹೊರಿಸಲಾಗಿದೆ ಎಂದು ರಾಜುಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ನಯನಾ ಗೋರಾಡಿಯಾ ಹೇಳಿದ್ದಾರೆ.
ಘಟನೆ ಬೆಳಕಿಗೆ ಬಂದಿದ್ದು ಹೇಗೆ ಎಂಬುದನ್ನು ವಿವರಿಸಿದ ಗೋರಾಡಿಯಾ, ಅಮ್ರೇಲಿ ಜಿಲ್ಲೆಯ ಮಿಷನ್ ಸ್ಮೈಲ್ ಎಂಬ ಜಾಗೃತಿ ಕಾರ್ಯಕ್ರಮದ ಅಡಿಯಲ್ಲಿ ಜಾಫ್ರಾಬಾದ್ ಪೊಲೀಸ್ ಠಾಣೆಯ ತಂಡವು ಶಾಲೆಯಲ್ಲಿ ಗುಡ್ ಟಚ್ ಮತ್ತು ಬ್ಯಾಡ್ ಟಚ್ (ಒಳ್ಳೆಯ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶ) ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿತ್ತು.
ಈ ಕಿರುಕುಳ ಪ್ರಕರಣವು ಬಹಳ ದಿನಗಳಿಂದ ನಡೆಯುತ್ತಿದ್ದರೂ, ಮಿಷನ್ ಸ್ಮೈಲ್ ಮೂಲಕ ನಡೆಸಿದ ಜಾಗೃತಿ ಕಾರ್ಯಕ್ರಮಗಳು ಬಾಲಕಿಯರಿಗೆ ಧೈರ್ಯ ತುಂಬಿದವು. ವಿಶೇಷವಾಗಿ, ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿಗೆ ಮನೆಯಲ್ಲಿದ್ದ ತನ್ನ ಪೋಷಕರು ಅಥವಾ ಪಾಲಕರಿಗೆ ಈ ವಿಷಯ ತಿಳಿಸುವ ಧೈರ್ಯ ಬಂತು ಎಂದು ಅವರು ಹೇಳಿದರು.
ಯೂಟ್ಯೂಬ್ ನೋಡಿ ಗರ್ಭಪಾತಕ್ಕೆ ಯತ್ನಿಸಿದ ಯುವಕ, ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಬಾಲಕಿಯ ಪೋಷಕರು, ವಿಷಯ ತಿಳಿದ ತಕ್ಷಣ ಪೊಲೀಸರನ್ನು ಸಂಪರ್ಕಿಸಿದರು. ಬಳಿಕ ಠಾಣಾಧಿಕಾರಿ ಸೇರಿ ಪೊಲೀಸ್ ತಂಡವು ಶಾಲೆಗೆ ತೆರಳಿ ವಿಚಾರಣೆ ಆರಂಭಿಸಿತು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.
ಪ್ರಾಥಮಿಕ ವಿಚಾರಣೆ ಮತ್ತು ತನಿಖೆಯ ವೇಳೆ ಹಲವು ವಿಷಯಗಳು ಬೆಳಕಿಗೆ ಬಂದಿವೆ. ಆರೋಪಿ ಚಹಾ ಮಾಡಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರನ್ನು ಸಿಬ್ಬಂದಿ ಕೊಠಡಿಗೆ ಕರೆಸಿಕೊಳ್ಳುತ್ತಿದ್ದ. ಅಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅಲ್ಲದೆ, ಒಬ್ಬ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಗೋರಾಡಿಯಾ ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
18 ವರ್ಷದ ಹದಿಹರೆಯದ ಯುವಕನೊಬ್ಬನನ್ನು ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ಘಟನೆ ನಡೆದಿದೆ. ಆತನ 16 ವರ್ಷದ ಶಾಲಾ ಸಹಪಾಠಿ ಗರ್ಭಿಣಿಯಾಗಿದ್ದಳು. ಗರ್ಭಪಾತ ಮಾಡಿಸಿಕೊಳ್ಳಲು ಆಕೆ ಯುಟ್ಯೂಬ್ ವಿಡಿಯೊಗಳನ್ನು ನೋಡಿ, ಅವುಗಳಲ್ಲಿ ತಿಳಿಸಿದಂತೆ ಗಿಡಮೂಲಿಕೆಗಳ ಮಿಶ್ರಣವನ್ನು ತಯಾರಿಸಿ ಬಳಸಿದ್ದಾಳೆ. ಆದರೆ, ಇದರಿಂದ ಆಕೆಗೆ ಗರ್ಭಪಾತವಾಗಲಿಲ್ಲ. ಬಳಿಕ ಆಕೆ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ.