ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಶಿಕ್ಷಕರಿಂದ ಅವಮಾನ ಸಿಸಿಟಿವಿಯಲ್ಲಿ ದಾಖಲು

ಕೇಂದ್ರ ದೆಹಲಿಯ ಸೇಂಟ್ ಕೊಲಂಬಾ ಶಾಲೆಯ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಐವರು ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದಾರೆ. ಸಿಸಿಟಿವಿ ದಾಖಲೆಗಳನ್ನು ಪರಿಶೀಲಿಸಿರುವ ಪೊಲೀಸರು ವಿದ್ಯಾರ್ಥಿಗೆ ಶಿಕ್ಷಕರು ಅವಮಾನ ಮಾಡಿರುವುದನ್ನು ಪತ್ತೆ ಹಚ್ಚಿದ್ದಾರೆ. ಶೀಘ್ರದಲ್ಲೇ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಂಗ್ರಹ ಚಿತ್ರ

ನವದೆಹಲಿ: ಕೇಂದ್ರ ದೆಹಲಿಯ (central delhi) ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ (student self harming) ಸಂಬಂಧಿಸಿ ಐವರು ವಿದ್ಯಾರ್ಥಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಶಾಲೆಯ ಸಿಸಿಟಿವಿ (CCTv) ದಾಖಲೆಗಳನ್ನು ಪರಿಶೀಲಿಸಿದ್ದಾರೆ. ನವೆಂಬರ್ 18ರಂದು ಸೇಂಟ್ ಕೊಲಂಬಸ್‌ ಶಾಲೆಯ (St Columba’s School) ವಿದ್ಯಾರ್ಥಿ ಶೌರ್ಯ ಪಾಟೀಲ್ ರಾಜೇಂದ್ರ ಪ್ಲೇಸ್ ಮೆಟ್ರೋ ನಿಲ್ದಾಣದಿಂದ (Rajendra Place metro station ) ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿ ಆತನ ಐವರು ಸಹಪಾಠಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕೆಲವು ಶಿಕ್ಷಕರು ವಿದ್ಯಾರ್ಥಿಗೆ ಅವಮಾನ ಮಾಡಿದ್ದಾರೆ ಎನ್ನುವುದು ಬೆಳಕಿಗೆ ಬಂದಿದೆ.

ಕೊಲಂಬಾ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶೌರ್ಯ ಪಾಟೀಲ್ ನವೆಂಬರ್ 18ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಆತನ ತಂದೆ ಪ್ರದೀಪ್ ಪಾಟೀಲ್ ಪೊಲೀಸರಿಗೆ ದೂರು ನೀಡಿದ್ದಾರೆ. ಇದರ ಪ್ರಕಾರ ಶಿಕ್ಷಕರು ತನ್ನ ಮಗನಿಗೆ ಬೆದರಿಕೆ ಹಾಕಿದ್ದಾರೆ. ಪೋಷಕರಿಗೆ ಕರೆ ಮಾಡಿ ವರ್ಗಾವಣೆ ಪ್ರಮಾಣಪತ್ರ ನೀಡುವುದಾಗಿ ಹೇಳಿದ್ದಾರೆ ಎಂದು ಸಹಪಾಠಿಗಳು ಹೇಳಿದ್ದರು. ಶಿಕ್ಷಕರಲ್ಲಿ ಒಬ್ಬರು ಹುಡುಗನನ್ನು ತಳ್ಳಿದ್ದಾರೆ ಎಂದು ಕೂಡ ಎಫ್‌ಐಆರ್ ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಶಿಕ್ಷಕರಿಂದ ಮಾನಸಿಕ ಕಿರುಕುಳ ಆರೋಪ; ಶಾಲಾ ಕಟ್ಟಡದಿಂದ ಜಿಗಿದು 8 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ನವೆಂಬರ್ 18 ರಂದು ಬೆಳಗ್ಗೆ 7.15 ಕ್ಕೆ ಗೋಲ್ ಮಾರ್ಕೆಟ್‌ನಲ್ಲಿರುವ ಶಾಲೆಗೆ ಹೊರಟಿದ್ದ ಶೌರ್ಯ ಸಾವನ್ನಪ್ಪಿರುವುದು ಮಧ್ಯಾಹ್ನ 2.45ಕ್ಕೆ ತಿಳಿದು ಬಂದಿದೆ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿದ್ದ ಅವರ ತಂದೆ ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಆತನನ್ನು ಬಿಎಲ್‌ಕೆ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ವಿದ್ಯಾರ್ಥಿಯು ಪ್ಲಾಟ್‌ಫಾರ್ಮ್ ಸಂಖ್ಯೆ 2 ರಿಂದ ಹಾರಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿಯ ಶಾಲೆಯ ಬ್ಯಾಗ್ ನಲ್ಲಿ ಆತ್ಮಹತ್ಯೆ ಪತ್ರ ಸಿಕ್ಕಿದ್ದು, ಇದರಲ್ಲಿ ವಿದ್ಯಾರ್ಥಿಯು ನಾಲ್ವರು ಶಿಕ್ಷಕರು ತನಗೆ ಬೆದರಿಕೆ ಹಾಕಿದ್ದಾರೆ ಮತ್ತು ಸಾರ್ವಜನಿಕವಾಗಿ ನನ್ನನ್ನು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದರಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆತ ಹೇಳಿಕೊಂಡಿದ್ದಾನೆ. ಶಾಲೆಗೆ ಭೇಟಿ ನೀಡಿರುವ ಪೊಲೀಸ್ ತಂಡವು ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡಿದೆ. ಎಫ್‌ಐಆರ್‌ನಲ್ಲಿ ಹೆಸರಿಸಲಾದ ಶಿಕ್ಷಕರ ವಿವರಗಳನ್ನು ಸಂಗ್ರಹಿಸಿದ್ದು, ಕೂಡಲೇ ಅವರಿಗೆ ಸಮನ್ಸ್ ಜಾರಿ ಮಾಡುವುದಾಗಿ ಪೊಲೀಸರು ತಿಳಿಸಿದ್ದಾರೆ.

ಶಾಲೆಯು ಈಗಾಗಲೇ ನಾಲ್ವರು ಶಿಕ್ಷಕರನ್ನು ಪೂರ್ಣಗೊಳ್ಳುವವರೆಗೆ ಅಮಾನತುಗೊಳಿಸಿರುವುದಾಗಿ ತಿಳಿಸಿದೆ. ಪೊಲೀಸ್ ವಿಚಾರಣೆಯ ವೇಳೆ ಐವರು ವಿದ್ಯಾರ್ಥಿಗಳು ಒಂದೇ ರೀತಿಯ ಹೇಳಿಕೆಯನ್ನು ನೀಡಿದ್ದಾರೆ. ವಿದ್ಯಾರ್ಥಿಗಳ ಹೇಳಿಕೆಗಳಿಗೂ ಸಿಸಿಟಿವಿ ದೃಶ್ಯಗಳಿಗೂ ಹೋಲಿಕೆ ಇದೆ. ಒಬ್ಬ ಶಿಕ್ಷಕ ಇತರ ಮಕ್ಕಳ ಮುಂದೆ ಶೌರ್ಯನನ್ನು ಅವಮಾನಿಸಿರುವುದನ್ನು ಕಾಣಬಹುದು. ವಿದ್ಯಾರ್ಥಿಯ ಕುಟುಂಬವನ್ನೂ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Bengaluru Robbery Case: ಬೆಂಗಳೂರು ದರೋಡೆ ಪ್ರಕರಣದ ಬಹುತೇಕ ಎಲ್ಲ ಆರೋಪಿಗಳು ಸೆರೆ, 6.70 ಕೋಟಿ ರೂ. ಹಣ ವಶ

ಶಾಲೆಯ ಶಿಕ್ಷಕರ ಮೇಲೆ ಬಿಎನ್ ಎಸ್ ಸೆಕ್ಷನ್ 107 ಆತ್ಮಹತ್ಯೆಗೆ ಪ್ರಚೋದನೆ ಮತ್ತು 3(5) ಸಾಮಾನ್ಯ ಉದ್ದೇಶದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಮಧ್ಯ ದೆಹಲಿಯ ಉಪ ಪೊಲೀಸ್ ಆಯುಕ್ತರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಪತ್ರ ಬರೆದು 10 ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.

ವಿದ್ಯಾ ಇರ್ವತ್ತೂರು

View all posts by this author