ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಥಾಣೆ ಕಚೇರಿ ಬಳಿಯೇ ಶಿವಸೇನೆ ನಾಯಕ ಪ್ರದೀಪ್ ಪುರ್ನೆಕರ್ ಹತ್ಯೆ

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಶಿವಸೇನೆ (ಯುಬಿಟಿ) ನಾಯಕ ಪ್ರದೀಪ್ ಪುರ್ನೆಕರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮಹಾರಾಷ್ಟ್ರದ ಥಾಣೆಯ ಮನ್ಪಾಡಾ- ಗಣೇಶ್ ನಗರ ಪ್ರದೇಶದಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಸಂಗ್ರಹ ಚಿತ್ರ

ಮಹಾರಾಷ್ಟ್ರ: ಶಿವಸೇನೆ ನಾಯಕನನ್ನು (Shiv Sena leader) ಗುಂಡಿಕ್ಕಿ ಹತ್ಯೆ (Murder case) ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ಶಿವಸೇನೆ (ಯುಬಿಟಿ) (Shiv Sena UBT leader) ನಾಯಕ ಪ್ರದೀಪ್ ಪುರ್ನೆಕರ್ (Pradeep Purnekar) ಹತ್ಯೆಯಾದವರು. ರಾತ್ರಿ 9:30ರ ಸುಮಾರಿಗೆ ಕಚೇರಿಯ ಮುಂದೆ ನಿಂತಿದ್ದ ಪ್ರದೀಪ್ ಪುರ್ನೆಕರ್ ಅವರ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಗುಂಡಿನ ದಾಳಿ (attack) ನಡೆಸಿ ಪರಾರಿಯಾಗಿದ್ದಾರೆ. ಈ ಕುರಿತು ಕಪುರ್ಬಾವ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಥಾಣೆಯ ಮನ್ಪಾಡಾ- ಗಣೇಶ್ ನಗರ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಶಿವಸೇನೆ (ಯುಬಿಟಿ) ನಾಯಕ ಪ್ರದೀಪ್ ಪುರ್ನೆಕರ್ ಅವರ ಮೇಲೆ ಗುಂಡಿನ ದಾಳಿ ನಡೆಸಿದರು. ಪುರ್ನೆಕರ್ ಅವರ ಕಚೇರಿಯ ಮುಂದೆಯೇ ಹತ್ಯೆಯಾಗಿದ್ದಾರೆ. ಈ ಘಟನೆಯು ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲಿ ತೀವ್ರ ಆತಂಕವನ್ನು ಉಂಟು ಮಾಡಿದೆ.

LPG in EMI: ಗೃಹ ಬಳಕೆ ಗ್ರಾಹಕರಿಗೆ ಗುಡ್‌ ನ್ಯೂಸ್:‌ ‌ಇನ್ನು ಮುಂದೆ ಇಎಂಐನಲ್ಲಿ ಪಡೆಯಿರಿ ಸಿಲಿಂಡರ್

ಪ್ರದೀಪ್ ಪುರ್ನೆಕರ್ ಅವರ ಮೇಲೆ ದಾಳಿ ನಡೆದ ತಕ್ಷಣವೇ ಅವರನ್ನು ಘೋಡ್‌ಬಂದರ್ ರಸ್ತೆಯಲ್ಲಿರುವ 'ಆರ್ ಮಾಲ್' ಸಮೀಪದ ಇನ್ಫಿನಿಟಿ ಆಸ್ಪತ್ರೆಗೆಕರೆದೊಯ್ಯಲಾಯಿತು. ಅಲ್ಲಿ ತಕ್ಷಣವೇ ತುರ್ತು ಚಿಕಿತ್ಸೆ ನೀಡಿದರೂ ಗಂಭೀರ ಗಾಯಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಮಾಹಿತಿ ತಿಳಿದ ತಕ್ಷಣವೇ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಪ್ರದೇಶವನ್ನು ವಶಕ್ಕೆ ಪಡೆದು ವಿಧಿವಿಜ್ಞಾನಕ್ಕೆ ಬೇಕಾದ ಸಾಕ್ಷ್ಯಗಳನ್ನು ಸಂಗ್ರಹಿಸಿತು.

ಆರೋಪಿಗಳ ಪತ್ತೆಗೆ ಸುತ್ತಮುತ್ತಲಿನ ಪ್ರಮುಖ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಥಾಣೆಯ ಪ್ರಮುಖ ನಿರ್ಗಮನ ದ್ವಾರಗಳಲ್ಲಿ ನಕಾಬಂಧಿ ಮಾಡಲಾಗಿದೆ.

ಉದ್ಧವ್ ಠಾಕ್ರೆ ನೇತೃತ್ವದ ಸೇನಾ (ಯುಬಿಟಿ) ಪಕ್ಷದ ಥಾಣೆ ವಿಭಾಗದ ಮುಖ್ಯಸ್ಥರಾಗಿದ್ದ ಪುರ್ನೆಕರ್ ಅವರ ಎದೆಗೆ ಎರಡು ಗುಂಡುಗಳು ತಗಲಿವೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮುಂಬೈನ ಜೆಜೆ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ತನಿಖೆಯನ್ನು ಆರಂಭಿಸಲಾಗಿದೆ. ದಾಳಿಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ದುಬಾರಿ ಮೊಬೈಲ್‌ ಫೋನ್‌ ಕೊಳ್ಳಲು ತನ್ನ ಒಂದು ತಿಂಗಳ ಮಗುವನ್ನು ಮಾರಾಟ ಮಾಡಿದ ʼಮಹಾತಾಯಿʼ

ರಾಜಕೀಯ ವೈಷಮ್ಯ ಮತ್ತು ವೈಯಕ್ತಿಕ ದ್ವೇಷ ಸೇರಿದಿಂದ ಈ ದಾಳಿ ನಡೆದಿರುವ ಸಾಧ್ಯತೆ ಇರುವುದರಿಂದ ಈ ನಿಟ್ಟಿನಲ್ಲಿ ಕೂಡ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ವಿದ್ಯಾ ಇರ್ವತ್ತೂರು

View all posts by this author