ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ranya Rao: ರನ್ಯಾ ರಾವ್ ನಂಟಿನ ಕಂಪನಿಗೆ 12 ಎಕರೆ ಮಂಜೂರಾಗಿದ್ದು ಬಿಜೆಪಿ ಸರ್ಕಾರದಲ್ಲಿ

ಈ ಹಿಂದಿನ ಸರ್ಕಾರ ಅಧಿಕಾರದಲ್ಲಿ 2023ರ ಜನವರಿ 2ರಂದು ನಡೆದ 137ನೇ ರಾಜ್ಯ ಮಟ್ಟದ ಸಿಂಗಲ್ ವಿಂಡೋ ಕ್ಲಿಯರೆನ್ಸ್ ಕಮಿಟಿ (ಎಸ್‌ಎಲ್‌ಎಸ್‌ಡಬ್ಲ್ಯುಸಿಸಿ) ಸಭೆಯಲ್ಲಿ ತುಮಕೂರು ಜಿಲ್ಲೆ ಶಿರಾ ಕೈಗಾರಿಕಾ ಪ್ರದೇಶದಲ್ಲಿ ಸದರಿ ಭೂಮಿ ಮಂಜೂರಾತಿಗೆ ಈ ಅನುಮೋದನೆ ನೀಡಲಾಗಿದೆ ಎಂದು ಕೆಐಎಡಿಬಿ ಸಿಇಒ ಡಾ. ಮಹೇಶ್ ತಿಳಿಸಿದ್ದಾರೆ.

ರನ್ಯಾ ರಾವ್ ನಂಟಿನ ಕಂಪನಿಗೆ 12 ಎಕರೆ ಮಂಜೂರಾಗಿದ್ದು ಬಿಜೆಪಿ ಸರ್ಕಾರದಲ್ಲಿ

Profile Prabhakara R Mar 9, 2025 9:39 PM

ಬೆಂಗಳೂರು: ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಕನ್ನಡ ಚಿತ್ರನಟಿ ರನ್ಯಾ ರಾವ್ (Ranya Rao) ಅವರ ಮೆಸರ್ಸ್ ಕ್ಸಿರೋದ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಗೆ 12 ಎಕರೆ ಭೂಮಿ 2023ರ ಜನವರಿ 2ರಂದು ಮಂಜೂರಾಗಿದೆ ಎಂದು ಕೆಐಎಡಿಬಿ ಸಿಇಒ ಡಾ. ಮಹೇಶ್ ಭಾನುವಾರ ಹೇಳಿದ್ದಾರೆ. ಈ ಹಿಂದಿನ ಸರ್ಕಾರ ಅಧಿಕಾರದಲ್ಲಿ 2023ರ ಜನವರಿ 2ರಂದು ನಡೆದ 137ನೇ ರಾಜ್ಯ ಮಟ್ಟದ ಸಿಂಗಲ್ ವಿಂಡೋ ಕ್ಲಿಯರೆನ್ಸ್ ಕಮಿಟಿ (ಎಸ್‌ಎಲ್‌ಎಸ್‌ಡಬ್ಲ್ಯುಸಿಸಿ) ಸಭೆಯಲ್ಲಿ ತುಮಕೂರು ಜಿಲ್ಲೆ ಶಿರಾ ಕೈಗಾರಿಕಾ ಪ್ರದೇಶದಲ್ಲಿ ಸದರಿ ಭೂಮಿ ಮಂಜೂರಾತಿಗೆ ಈ ಅನುಮೋದನೆ ನೀಡಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಉಕ್ಕಿನಿಂದ ತಯಾರಿಸಲಾಗುವ ಟಿಎಂಟಿ ಪಟ್ಟಿ, ಸರಳು ಹಾಗೂ ಸಹ-ಉತ್ಪನ್ನಗಳ ಘಟಕವನ್ನು 138 ಕೋಟಿ ಹೂಡಿಕೆಯಲ್ಲಿ ಸ್ಥಾಪಿಸಲಾಗುವುದು. ಇದರಿಂದ, ಸುಮಾರು 160 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಕಂಪನಿ ಪ್ರಸ್ತಾವ ಸಲ್ಲಿಸಿತ್ತು‌ ಎಂದೂ ಅವರು ವಿವರಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Student Arrest: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಬಂಧನ

ನನಗೂ ಈ ಪಕ್ರರಣಕ್ಕೂ ಸಂಬಂಧವಿಲ್ಲ, ಇಲ್ಲಿ ಸಿಲುಕಿಸಲಾಗಿದೆ; ವಕೀಲರ ಬಳಿ ಕಣ್ಣೀರಿಟ್ಟ ರನ್ಯಾ

Ranya Roa (1)

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿರುವಾಗ ನಟಿ ರನ್ಯಾ ರಾವ್‌ (Ranya Roa) ಸಿಕ್ಕಿಬಿದ್ದಿದ್ದು, ಆಕೆಯನ್ನು ಅಧಿಕಾರಿಗಳು ತೀವೃ ವಿಚಾರಣೆಗೆ ಒಳಪಡಸಿದ್ದಾರೆ. ಡಿಆರ್​ಐ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಈ ವೇಳೆ ಬಗೆದಷ್ಟು ಹಲವು ಕುತೂಹಲಕಾರಿ ಮಾಹಿತಿ ಹೊರಬರುತ್ತಿವೆ. ತನಿಖೆಯಲ್ಲಿ ಆಕೆ ಹೇಳಿಕೆ ನೀಡಿದ್ದು, ನಾನು ಚಿನ್ನದ ಕಳ್ಳಸಾಗಣೆ ದಂಧೆಯ ಭಾಗವಾಗಿರಲಿಲ್ಲ. ತಾನು ಮುಗ್ದೆ ಎಂದು ಹೇಳಿದ್ದಾಳೆ. ನನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ರನ್ಯಾ ಕಣ್ಣೀರಿಟ್ಟಿದ್ದಾಳೆ ಎಂಬುದಾಗಿ ತಿಳಿದು ಬಂದಿದೆ.

ರನ್ಯಾ ತನ್ನ ವಕೀಲರ ಬಳಿ ಕೇಸ್‌ ಬಗ್ಗೆ ಮಾತನಾಡಿದ್ದು, ನನಗೆ ನಿದ್ದೆ ಬರುತ್ತಿಲ್ಲ. ನಾನು ಯಾಕೆ ಅದರಲ್ಲಿ ಸಿಲುಕಿದೆ' ಎಂದು ಯೋಚಿಸುತ್ತಲೇ ಇದ್ದೇನೆ ಎಂದು ಹೇಳಿದ್ದಾಳೆ. ನನ್ನ ಮನಸ್ಸು ವಿಮಾನ ನಿಲ್ದಾಣದಲ್ಲಿ ಆ ಘಟನೆಯನ್ನೇ ನೆನಪಿಸುತ್ತಿದೆ. ನನಗೆ ಮಾನಸಿಕ ಆಘಾತವಾಗುತ್ತಿದೆ ಎಂದು ವಕೀಲರ ಬಳಿ ಕಣ್ಣೀರಿಟ್ಟಿದ್ದಾಳೆ ಎಂದು ಮೂಲಗಳು ತಿಳಿಸಿವೆ. ನಟಿ ಡಿಆರ್‌ಐಗೆ ನೀಡಿದ ಅಧಿಕೃತವಾಗಿ ಹೇಳಿಕೆ ನೀಡಿದ್ದು, 17 ಚಿನ್ನದ ಗಟ್ಟಿಗಳನ್ನು ದುಬೈನಿಂದ ತಂದಿದ್ದೆ ಎಂದು ಒಪ್ಪಿಕೊಂಡಿದ್ದಳು. ಅಷ್ಟೇ ಅಲ್ಲದೆ ದುಬೈಗೆ ಮಾತ್ರವಲ್ಲದೆ ಯುರೋಪ್, ಅಮೆರಿಕ ಮತ್ತು ಮಧ್ಯಪ್ರಾಚ್ಯಕ್ಕೂ ಪ್ರಯಾಣಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಪ್ರಭಾವಿ ವ್ಯಕ್ತಿಯ ನಂಟು?

ಈ ನಡುವೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಈ ಕೃತ್ಯದ ಹಿಂದೆ ಹಲವು ಪ್ರಭಾವಿ ವ್ಯಕ್ತಿಗಳು ಇರುವ ಸುಳಿವು ಪತ್ತೆಯಾಗಿದೆ. ಆರೋಪಿತೆ ನಟಿ ರನ್ಯಾ ರಾವ್‌ಗೆ ಹಲವು ರಾಜಕೀಯ ನಾಯಕರ ಜೊತೆ ಸಂಪರ್ಕ ಇದೆ ಎನ್ನಲಾಗಿದೆ. ಸದ್ಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ: Ranya Rao: ಆಕೆ ನಮ್ಮ ಜೊತೆಗಿಲ್ಲ, ನನ್ನ ಕೆರಿಯರ್‌ನಲ್ಲಿ ಕಪ್ಪು ಚುಕ್ಕಿ ಇಲ್ಲ: ರನ್ಯಾ ರಾವ್‌ ತಂದೆ

ಏನಿದು ಪ್ರಕರಣ?

ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮಾ.3ರ ಸೋಮವಾರ ರಾತ್ರಿ 7ಗಂಟೆ ಸುಮಾರಿಗೆ ಬಂದಿಳಿದ ರನ್ಯಾರವರನ್ನು ಡಿಆರ್‌ಇ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ತಪಾಸಣೆಗೊಳಪಡಿಸಿದಾಗ 12 ಕೋಟಿ ರು. ಮೌಲ್ಯದ 14.8 ಕೆ.ಜಿ. ತೂಕದ ಚಿನ್ನದ ಬಿಸ್ಕತ್ತುಗಳು ಪತ್ತೆಯಾಗಿದ್ದವು. ತರುವಾಯ ರನ್ಯಾ ಮನೆ ಮೇಲೆ ದಾಳಿ ನಡೆಸಿ ಡಿಆರ್‌ಐ ಪರಿಶೀಲಿಸಿದಾಗ 2.06 ಕೋಟಿ ಮೌಲ್ಯದ ಚಿನ್ನ ಹಾಗೂ 2.16 ಕೋಟಿ ನಗದು ಪತ್ತೆಯಾಗಿತ್ತು. ಒಟ್ಟಾರೆ ನಟಿ ರನ್ಯಾ ಅವರಿಂದ 17.16 ಕೋಟಿ ಮೌಲ್ಯದ ವಸ್ತುಗಳು ಪತ್ತೆಯಾಗಿದ್ದವು. ಪ್ರಕರಣದ ತನಿಖೆಯನ್ನು ಡಿಆರ್‌ಐ ಅಧಿಕಾರಿಗಳು ಮುಂದುವರೆಸಿದ್ದಾರೆ.