ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dead Body Found: ಬೆಂಗಳೂರಿನಲ್ಲಿ ಸೂಟ್​ಕೇಸ್​ನಲ್ಲಿ ಯುವತಿಯ ಶವ ಪತ್ತೆ!

Dead Body Found: ಬೆಂಗಳೂರು ಹೊರವಲಯದ ಚಂದಾಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ರೈಲ್ವೆ ಬ್ರಿಡ್ಜ್ ಸಮೀಪ ಅಪರಿಚಿತ ಯುವತಿಯ ಶವ ಪತ್ತೆಯಾಗಿದೆ. ಬೇರೆಲ್ಲೋ ಕೊಲೆಗೈದು ರೈಲಿನಲ್ಲಿ ಸಾಗುವ ವೇಳೆ ಮೃತದೇಹವನ್ನು ಹೊರಗೆ ಎಸೆದಿರುವ ಶಂಕೆ ಇದೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸೂಟ್​ಕೇಸ್​ನಲ್ಲಿ ಯುವತಿಯ ಶವ ಪತ್ತೆ!

Profile Prabhakara R May 21, 2025 7:56 PM

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ರೈಲ್ವೆ ಬ್ರಿಡ್ಜ್ ಸಮೀಪ ಅಪರಿಚಿತ ಯುವತಿಯ ಶವ (Dead Body Found) ಸೂಟ್ ಕೇಸ್‌ನಲ್ಲಿ ಪತ್ತೆಯಾಗಿದೆ. ನೀಲಿ ಬಣ್ಣದ ಸೂಟ್ ಕೇಸ್ ಕಂಡಿದ್ದು, ಅದನ್ನು ಪರಿಶೀಲಿಸಿದಾಗ ಸಾರ್ವಜನಿಕರು ಶಾಕ್ ಆಗಿದ್ದಾರೆ. ಸುಮಾರು 18 ವರ್ಷ ವಯಸ್ಸಿನ ಯುವತಿ ಶವ ಸೂಟ್ ಕೇಸ್‌ನಲ್ಲಿ ಪತ್ತೆಯಾಗಿದೆ.

ಯುವತಿ ಗುಲಾಬಿ ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದು, ಕೈ ಕಾಲುಗಳನ್ನು ಮಡಚಿ ಇಡೀ ದೇಹವನ್ನು ಸೂಟ್ ಕೇಸ್‌ನಲ್ಲಿ ತುಂಬಲಾಗಿದೆ. ಕಿವಿ ಮತ್ತು ಮೂಗಿನಲ್ಲಿ ರಕ್ತಸ್ರಾವ ಆಗಿರುವ ಕುರುಹು ಇದ್ದು, ಉಳಿದಂತೆ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ. ಬೇರೆಲ್ಲೋ ಕೊಲೆಗೈದು ರೈಲಿನಲ್ಲಿ ಸಾಗುವ ವೇಳೆ ಮೃತದೇಹವನ್ನು ಹೊರಗೆ ಎಸೆದಿರುವ ಶಂಕೆ ಇದೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

ಆರಂಭದಲ್ಲಿ ಸ್ಥಳೀಯರಿಗೆ ಸೂಟ್ ಕೇಸ್‌ನಲ್ಲಿ ಯುವತಿ ಮುಖ ಮಾತ್ರ ಕಾಣಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸೂರ್ಯನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರೈಲ್ವೆ ಹಳಿ ಸಮೀಪ ಯುವತಿ ಶವ ಪತ್ತೆ ಹಿನ್ನೆಲೆ ರೈಲ್ವೆ ಕೇಸ್ ದಾಖಲಿಸಿಕೊಳ್ಳಲಿದ್ದಾರೆ ಎಂದು ಪೊಲೀಸರು ಕಾದು ಕುಳಿತಿದ್ದರು. ಆದರೆ ರೈಲ್ವೆ ಪೊಲೀಸರು ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದ ಬಳಿಕ ಸೂರ್ಯನಗರ ಠಾಣೆ ಪೊಲೀಸರು ‌ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Actor Darshan: ರೇಣುಕಾಸ್ವಾಮಿ ಕೊಲೆ ಕೇಸ್‌; ನಟ ದರ್ಶನ್‌ ವಿರುದ್ಧ 132 ಪುಟಗಳ ಹೆಚ್ಚುವರಿ ಚಾರ್ಜ್‌ಶೀಟ್‌ ಸಲ್ಲಿಕೆ

ಮಹಿಳೆಗೆ ಇಂಜೆಕ್ಷನ್‌ ನೀಡಿ ಸಾಮೂಹಿಕ ಅತ್ಯಾಚಾರ ಆರೋಪ; ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್‌

ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕೇಸ್‌ ದಾಖಲಾಗಿದೆ. ತನ್ನ ಮೇಲೆ ಸಾಮೈಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತೆಯೊಬ್ಬರು ನೀಡಿದ ದೂರಿನ ಮೇರೆಗೆ ಶಾಸಕ ಮುನಿರತ್ನ ಮತ್ತು ಬೆಂಬಲಿಗರ ವಿರುದ್ಧ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶಾಸಕ ಮುನಿರತ್ನ, ಬೆಂಬಲಿಗರಾದ ವಸಂತ, ಚನ್ನಕೇಶವ, ಕಮಲ್ ಹಾಗೂ ಒಬ್ಬ ಅಪರಿಚಿತನ ವಿರುದ್ಧ ಕೇಸ್​ ದಾಖಲಾಗಿದೆ.

2013ರಲ್ಲಿ ಜೆಪಿ ಪಾರ್ಕ್‌ನ ಶಾಸಕರ ಕಚೇರಿಯಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಅಪರಿಚಿತ ವ್ಯಕ್ತಿಯಿಂದ ಇಂಜೆಕ್ಷನ್ ತರಿಸಿ ಇಂಜೆಕ್ಟ್ ಮಾಡಿಸಿದ್ದರೆಂದು ದೂರಿನಲ್ಲಿ ಆರೋಪಿಸಲಾಗಿದೆ.

ಅತ್ಯಾಚಾರಕ್ಕೂ ಮುನ್ನ ನೀಡಿದ ಇಂಜೆಕ್ಷನ್​ನಿಂದ ಈಗ ನನಗೆ ಇಡಿಆರ್ ಎಂಬ ಕಾಯಿಲೆ ಬಂದಿದೆ. ಇದರಿಂದ ಮನನೊಂದು ನಾನು ಆತ್ಮಹತ್ಯೆಗೆ ಯತ್ನಿಸಿದ್ದೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಬಿಜೆಪಿ ಕಾರ್ಯಕರ್ತೆ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 376D, 270, 323, 354, 504, 506, 509, 34 ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದೂರಿನಲ್ಲಿ ಏನಿದೆ?

'ಈ ಹಿಂದೆ ಬಿಜೆಪಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದೆ. ನನ್ನ ಗಂಡ ಬಿಟ್ಟು ಹೋದ ಬಳಿಕ 2ನೇ ಮದುವೆ ಆಗಿ ಜೀವನ ನಡೆಸುತ್ತಿದ್ದೆ. ವೇಶ್ಯಾವಾಟಿಕೆ ಆರೋಪ ಹೊರಿಸಿ ನನ್ನನ್ನು ಜೈಲಿಗೆ ಕಳಿಸಿದ್ದರು. ಬಳಿಕ ಜಾಮೀನು ಪಡೆದು ಹೊರಗೆ ಬಂದಿದ್ದೆ. ಕೆಲವರು ನನ್ನ ಕೇಸ್​ ಇತ್ಯರ್ಥ ಮಾಡಿಕೊಡುವುದಾಗಿ ಆಮಿಷವೊಡ್ಡಿ ನನ್ನನ್ನು ಕಚೇರಿಗೆ ಕರೆಸಿ ಸಾಮೂಹಿಕ ಅತ್ಯಾಚಾರವೆಸಗಿದರು ಎಂದು ಮಹಿಳೆ ಆರೋಪ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ | Namma Metro: ನಮ್ಮ ಮೆಟ್ರೋದಲ್ಲಿ ಮಹಿಳೆಯರ ಗುಪ್ತ ಚಿತ್ರೀಕರಣ, ಇನ್‌ಸ್ಟಗ್ರಾಂನಲ್ಲಿ ಅಪ್‌ಲೋಡ್!‌