Theft Case: ನ್ಯಾಯಾಧೀಶರ ಮನೆಯಲ್ಲಿಯೇ ಚಿನ್ನಾಭರಣ ಕಳವು!
ಕುಟುಂಬದ ಸದಸ್ಯರೆಲ್ಲರು ಸೇರಿ ಕೊಪ್ಪಳಕ್ಕೆ ಹೋಗಿದ್ದಾಗ ಒಳನುಗ್ಗಿದ ಕಳ್ಳರು ಗುಂಪು ಬರೋಬ್ಬರಿ 7,61,800 ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದು, ಪರಾರಿಯಾಗಿದ್ದಾರೆ. ನ್ಯಾಯಾಧೀಶರ ಮನೆಯಲ್ಲಿ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನ್ಯಾಯಾಧೀಶರು ಈ ಕುರಿತು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನ್ಯಾಯಾಧೀಶರ ಮನೆಯಲ್ಲಿ ಕಳವು

ಬೀದರ್: ನ್ಯಾಯಾಧೀಶರ (Judge) ಮನೆಯಿಂದಲೇ ಸುಮಾರು 7 ಲಕ್ಷ ರೂ.ಗಿಂತಲೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿದ್ದಾರೆ. ಈ ಕಳವು (Theft Case) ಘಟನೆ ಬೀದರ್ (Bidar news) ನಗರದ ಜನವಾಡ ರಸ್ತೆಯಲ್ಲಿರುವ ನ್ಯಾಯಾಧೀಶರ ವಸತಿ ಗೃಹದಲ್ಲಿ ನಡೆದಿದೆ. ಬೀದರ್‌ನ 2ನೇ ಹೆಚ್ಚುವರಿ ಸಿವಿಲ್ ಮತ್ತು 2ನೇ ಜೆಎಂಎಫ್‌ಸಿ (JMFC) ನ್ಯಾಯಾಧೀಶರಾದ ಎಂ.ಡಿ.ಶೇಜ್ ಚೌಟಾಯಿ ವಸತಿ ಗೃಹದಲ್ಲಿ ಕಳ್ಳತನವಾಗಿದೆ.
ಕುಟುಂಬದ ಸದಸ್ಯರೆಲ್ಲರು ಸೇರಿ ಕೊಪ್ಪಳಕ್ಕೆ ಹೋಗಿದ್ದಾಗ ಒಳನುಗ್ಗಿದ ಕಳ್ಳರು ಗುಂಪು ಬರೋಬ್ಬರಿ 7,61,800 ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದು, ಪರಾರಿಯಾಗಿದ್ದಾರೆ. ನ್ಯಾಯಾಧೀಶರ ಮನೆಯಲ್ಲಿ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನ್ಯಾಯಾಧೀಶರು ಈ ಕುರಿತು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಂಗವಿಕಲ ಮಕ್ಕಳ ಜೊತೆಗೆ ತಾಯಿ ಆತ್ಮಹತ್ಯೆ
ತುಮಕೂರು: ತುಮಕೂರಿನಲ್ಲಿ (Tumakuru) ಮಹಿಳೆಯೊಬ್ಬರು (Woman) ತನ್ನಿಬ್ಬರು ಮಕ್ಕಳ ಜತೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾಯಿ ವಿಜಯಲಕ್ಷ್ಮೀ (45), ಮಗಳು ಚೂಡಾಮಣಿ (23), ಪುತ್ರ ನರಸಿಂಹರಾಜು (14) ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ಈ ದುರಂತ ನಡೆದಿದೆ. ಪತಿ ಮಹದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಮೂವರೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಮಕ್ಕಳ ಅಂಗವಿಕಲರಾಗಿರುವ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಬೇಕಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಚೇಳೂರು ಠಾಣೆ ಪೊಲೀಸರ ಭೇಟಿ ತನಿಖೆ ಕೈಗೊಂಡಿದ್ದಾರೆ. ಇದೇ ರೀತಿಯ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಮೊನ್ನೆ ಕಲಬುರಗಿಯಲ್ಲಿ ಸರಕಾರಿ ಅಧಿಕಾರಿಯೊಬ್ಬ ಇದೇ ರೀತಿ ಕುಟುಂಬದವರನ್ನೆಲ್ಲ ಕೊಂದು ತಾನೂ ಪ್ರಾಣ ತೆಗೆದುಕೊಂಡಿದ್ದ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ, ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ಸಂತೋಷ್ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದ. ಕೆಲ ದಿನಗಳ ಹಿಂದೆ ಚಿಕ್ಕಮಗಳೂರಿನಲ್ಲಿ ಕ್ಯಾಬ್ ಡ್ರೈವರ್ ಒಬ್ಬಾತ ಹೆಂಡತಿ ಮೇಲಿನ ಸಿಟ್ಟಿಗೆ ಅತ್ತೆ, ನಾದಿನಿ ಮತ್ತು ಮಗಳನ್ನು ಗುಂಡು ಹಾರಿಸಿ ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಾರದ ಹಿಂದೆ ಕೊಡಗಿನಲ್ಲಿ ಪತ್ನಿ ದೂರಾದ ಸಿಟ್ಟಿಗೆ ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬ ಇಡೀ ಕುಟುಂಬವನ್ನು ಬಲಿ ಪಡೆದು ಕೇರಳಕ್ಕೆ ಪರಾರಿಯಾಗಿದ್ದ.
ಇದನ್ನೂ ಓದಿ: Murder conspiracy: ಎಂಎಲ್‌ಸಿ ರಾಜೇಂದ್ರ ಕೊಲೆಗೆ ಸಂಚು; ಪ್ರಮುಖ ಆರೋಪಿ ಸೋಮ ಪೊಲೀಸರಿಗೆ ಶರಣು