ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವಿದ್ಯುತ್ ದೀಪಗಳ ಅಲಂಕಾರ ವೇಳೆ ದುರಂತ: ದೇವಸ್ಥಾನದ ಗೋಪುರದಿಂದ ಬಿದ್ದು ಕೂಲಿ ಕಾರ್ಮಿಕ ಸಾವು

ಮೃತರನ್ನು ಪಟ್ಟಣದ ಮೂರನೇ ವಾರ್ಡ್‌ನ ಬೆಟ್ಟದ ಕೆಳಗಿನ ಪೇಟೆ ನಿವಾಸಿ ರಹಮತ್ (30) ಎಂದು ಗುರುತಿಸಲಾಗಿದೆ. ಸಂತೆ ಬೀದಿಯ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಶನಿವಾರದ ವಿಶೇಷ ಪೂಜೆ ಯ ಹಿನ್ನೆಲೆಯಲ್ಲಿ ದೀಪಾಲಂಕಾರ ಕಾರ್ಯವನ್ನು ರಹಮತ್ ನಿರ್ವಹಿಸುತ್ತಿದ್ದರು. ಶುಕ್ರವಾರ ರಾತ್ರಿ ಸುಮಾರು 7.50ರ ವೇಳೆಗೆ ಗೋಪುರದ ಮೇಲೆ ದೀಪಗಳನ್ನು ಅಳವಡಿಸುತ್ತಿದ್ದಾಗ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ.

ಗುಡಿಬಂಡೆ: ನಾಲ್ಕನೇ ಶ್ರಾವಣ ಶನಿವಾರದ ಅಂಗವಾಗಿ ದೇವಸ್ಥಾನದಲ್ಲಿ ವಿದ್ಯುತ್ ದೀಪಗಳ ಅಲಂಕಾರ ಕಾರ್ಯದಲ್ಲಿ ತೊಡಗಿದ್ದ ಕೂಲಿ ಕಾರ್ಮಿಕರೊಬ್ಬರು ಗೋಪುರದಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಪಟ್ಟಣದಲ್ಲಿ ನಡೆದಿದೆ.

ಮೃತರನ್ನು ಪಟ್ಟಣದ ಮೂರನೇ ವಾರ್ಡ್‌ನ ಬೆಟ್ಟದ ಕೆಳಗಿನ ಪೇಟೆ ನಿವಾಸಿ ರಹಮತ್ (30) ಎಂದು ಗುರುತಿಸಲಾಗಿದೆ. ಸಂತೆ ಬೀದಿಯ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಶನಿವಾರದ ವಿಶೇಷ ಪೂಜೆಯ ಹಿನ್ನೆಲೆಯಲ್ಲಿ ದೀಪಾಲಂಕಾರ ಕಾರ್ಯವನ್ನು ರಹಮತ್ ನಿರ್ವಹಿಸುತ್ತಿದ್ದರು. ಶುಕ್ರವಾರ ರಾತ್ರಿ ಸುಮಾರು 7.50ರ ವೇಳೆಗೆ ಗೋಪುರದ ಮೇಲೆ ದೀಪಗಳನ್ನು ಅಳವಡಿಸುತ್ತಿದ್ದಾಗ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ.

ಇದನ್ನೂ ಓದಿ: Gudibande News: ಕ್ರೀಡೆಯಿಂದ ಶಿಸ್ತು, ಆತ್ಮವಿಶ್ವಾಸ ವೃದ್ಧಿ: ಮುನಿಕೃಷ್ಣಪ್ಪ

ಗಂಭೀರವಾಗಿ ಗಾಯಗೊಂಡ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದರೂ, ಮಾರ್ಗ ಮಧ್ಯೆ ಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ದಿನಗೂಲಿ ಕೆಲಸ ಮಾಡುತ್ತಿದ್ದ ಅವರು ಕುಟುಂಬಕ್ಕೆ ಪ್ರಮುಖ ಆಧಾರವಾಗಿದ್ದರು.

ಘಟನೆಯ ಕುರಿತು ಗುಡಿಬಂಡೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.