ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಟ್ರಾನ್ಸ್‌ಫಾರ್ಮರ್ ವಿದ್ಯುತ್ ಸ್ಪರ್ಶ: ಹಸು ಸಾವು, ಗೌರಮ್ಮ ಅಪಾಯದಿಂದ ಪಾರು

ತಾಲ್ಲೂಕಿನ ಮಳ್ಳೂರು ಗ್ರಾಮದಲ್ಲಿ ಟ್ರಾನ್ಸ್‌ಫಾರ್ಮರ್‌ನ ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಹಸು ಸಾವಿ ಗೀಡಾದ ದುರ್ಘಟನೆ ನಡೆದಿದೆ. ಗ್ರಾಮದ ಗೌರಮ್ಮ ಹಾಗೂ ಮುನಿರಾಜು ಅವರಿಗೆ ಸೇರಿದ ಹಸುವನ್ನು ಬೆಳಗಿನ ಜಾವ ಎಂದಿನಂತೆ ಡೇರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ಶಿಡ್ಲಘಟ್ಟ: ತಾಲ್ಲೂಕಿನ ಮಳ್ಳೂರು ಗ್ರಾಮದಲ್ಲಿ ಟ್ರಾನ್ಸ್‌ಫಾರ್ಮರ್‌ನ ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಹಸು ಸಾವಿಗೀಡಾದ ದುರ್ಘಟನೆ ನಡೆದಿದೆ. ಗ್ರಾಮದ ಗೌರಮ್ಮ ಹಾಗೂ ಮುನಿರಾಜು ಅವರಿಗೆ ಸೇರಿದ ಹಸುವನ್ನು ಬೆಳಗಿನ ಜಾವ ಎಂದಿನಂತೆ ಡೇರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ರಸ್ತೆ ಪಕ್ಕದಲ್ಲಿದ್ದ ಟ್ರಾನ್ಸ್‌ಫಾರ್ಮರ್‌ಗೆ ಅಳವಡಿಸಿದ್ದ ಅರ್ಥಿಂಗ್ ಕಂಬಿ ಕತ್ತರಿಸಿಕೊಂಡು ನೆಲಕ್ಕೆ ಬಿದ್ದಿದ್ದು, ಅದರಲ್ಲಿ ವಿದ್ಯುತ್ ಪ್ರವಹಿಸುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ಅರಿವಿಲ್ಲದೆ ಹಸು ಅತ್ತ ಸಾಗಿ ದಾಗ ವಿದ್ಯುತ್ ಶಾಕ್‌ಗೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿದೆ. ಹಸು ಜೊತೆಗಿದ್ದ ಗೌರಮ್ಮ ಅದೃಷ್ಟವ ಶಾತ್ ಯಾವುದೇ ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: Chinthamani Crime: ಗುರುಭವನದ ಬಳಿ ಯುವಕನ ಮೇಲೆ ಹಲ್ಲೆ: ಹಣಕ್ಕಾಗಿ ಬೆದರಿಕೆ, ಇಬ್ಬರು ವಶಕ್ಕೆ

ಗ್ರಾಮಸ್ಥರ ಆರೋಪದ ಪ್ರಕಾರ, ಹಲವು ತಿಂಗಳುಗಳಿಂದ ಅರ್ಥಿಂಗ್ ಕಂಬಿ ಹಾನಿಗೊಂಡ ಸ್ಥಿತಿಯಲ್ಲಿದ್ದರೂ ಸಂಬಂಧಿತ ಬೆಸ್ಕಾಂ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಂಡಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯವೇ ದುರ್ಘಟನೆಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೃತ ಹಸುವಿನ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಟ್ರಾನ್ಸ್‌ಫಾರ್ಮರ್ ದುರಸ್ತಿ ಕಾರ್ಯವನ್ನು ತಕ್ಷಣ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.