#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Murder Case: ಪ್ರೇಯಸಿ ಕೊಂದ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

Tumkur News: ಪ್ರೇಯಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಆರೋಪಿಗೆ ತುಮಕೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಸಂತೆಮಾವತ್ತೂರು-ಅಮೃತೂರು ರಸ್ತೆಯಲ್ಲಿ 2019 ರ ಫೆಬ್ರವರಿ 2ರಂದು ನಡೆದಿದ್ದ ಭೀಕರ ಕೊಲೆ ಪ್ರಕರಣಕ್ಕೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.‌

ಪ್ರೇಯಸಿ ಕೊಂದ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ಪ್ರೇಯಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಲೋಹಿತ್.

Profile Siddalinga Swamy Feb 11, 2025 9:34 PM

ತುಮಕೂರು: ಪ್ರೇಯಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಆರೋಪಿಗೆ ತುಮಕೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದೆ. ಜಿಲ್ಲೆಯ (Tumkur News) ಕುಣಿಗಲ್ ತಾಲೂಕಿನ ಸಂತೆಮಾವತ್ತೂರು ಅಮೃತೂರು ರಸ್ತೆಯಲ್ಲಿ 2019 ರ ಫೆಬ್ರವರಿ 2ರಂದು ನಡೆದಿದ್ದ ಭೀಕರ ಕೊಲೆ ಪ್ರಕರಣದಲಲಿ (Murder case) ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.‌ ಬೆಂಗಳೂರಿನ ಕಮಲಾ ನಗರದ ಲೋಹಿತ್ ಮತ್ತು ಅರ್ಪಿತಾ ಪರಸ್ಪರ ಪ್ರೀತಿಸುತ್ತಿದ್ದರು. ಅಲ್ಲದೇ ಒಟ್ಟಿಗೆ ವಾಸವಿದ್ದರು. ಆದರೆ, ಕೆಲ ದಿನಗಳ ನಂತರ ಸಮಯ ಕಳೆದಂತೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಬೇರೆಯಾಗಿದ್ದರು. ಈ ಸಂದರ್ಭದಲ್ಲಿ ಅರ್ಪಿತಾ ಸಹೋದರ ಸಾಗರ ಮತ್ತು ಇತರರು ಲೋಹಿತ್ ಮೇಲೆ ಹಲ್ಲೆ ನಡೆಸಿದ್ದರು. ನಂತರ ಆರೋಪಿಯು ಕುತ್ತಿಗೆ ಪ್ರೇಯಸಿಯ ಹಿಸುಕಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ, ಹತ್ಯೆ ಮಾಡಿದ್ದ ಎಂದು ತನಿಖೆ ಬಯಲಾಗಿತ್ತು.

ಈ ಸುದ್ದಿಯನ್ನೂ ಓದಿ | Road Accident: ಎತ್ತಿನಬಂಡಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರ ಸಾವು

2019 ರ ಫೆಬ್ರವರಿ 2 ರಂದು ಸಂಜೆ ಲೋಹಿತ್ ಯಶವಂತಪುರದಿಂದ ಅರ್ಪಿತಾರನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗಿ, ರಾತ್ರಿ 9 ಗಂಟೆ ಸುಮಾರಿಗೆ ಸಂತೆಮಾವತ್ತೂರು ಬಳಿ ಬೈಕ್‌ನಿಂದ ಅರ್ಪಿತಾರನ್ನು ಕೆಳಗೆ ಬೀಳಿಸಿ‌, ಹಲ್ಲೆ ನಡೆಸಿದ್ದ. ಆನಂತರ, ಆಕೆಯ ಕುತ್ತಿಗೆ ಹಿಸುಕಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ, ಹತ್ಯೆ ಮಾಡಿದ್ದ. ನಂತರ ತಿಪಟೂರಿನ ಬೊಮ್ಮನಹಳ್ಳಿ ರಾಮ-ಲಕ್ಷ್ಮಣ ದೇವರ ಬೆಟ್ಟದಲ್ಲಿ ಅವಳ ಪ್ಯಾಂಟ್ ಮತ್ತು ಶರ್ಟ್ ಸುಟ್ಟು ಹಾಕಿದ್ದ. ಈ ಕುರಿತು ಹುಲಿಯೂರುದುರ್ಗ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಎಂ.ಜೆ. ಬಾಲಾಜಿ ಸಿಂಗ್ ನೇತೃತ್ವದ ತನಿಖಾ ತಂಡವು ಪ್ರಕರಣವನ್ನು ಪತ್ತೆ ಹಚ್ಚಿ, ದೋಷಾರೋಪ ಪಟ್ಟಿ ಸಲ್ಲಿಸಿತ್ತು. ನ್ಯಾಯಾಧೀಶ ಎಚ್. ಅನಂತ್ ಅವರು ಶಿಕ್ಷೆ ಪ್ರಕಟಿಸಿದ್ದಾರೆ. ನ್ಯಾಯಾಲಯದಲ್ಲಿ ಸರ್ಕಾರಿ ಅಭಿಯೋಜಕಿ ವಿ.ಎ. ಕವಿತ ವಾದ ಮಂಡಿಸಿದ್ದರು.

ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ; ಹಸು ಸಜೀವ ದಹನ, ರೈತನಿಗೆ ಗಾಯ

Fire Accident

ಪಾವಗಡ: ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ (Fire Accident) ಪರಿಣಾಮ ಹಸುವೊಂದು ಸಜೀವ ದಹನವಾಗಿರುವ ಘಟನೆ ಪಾವಗಡ ತಾಲೂಕಿನ ಕಾರನಾಗನಹಟ್ಟಿ ಗ್ರಾಮದಲ್ಲಿ ಮಂಗಳವಾರ ಸಂಜೆ ಜರುಗಿದೆ. ಪಾವಗಡ ತಾಲೂಕಿನ ಕಾರನಾಗನಹಟ್ಟಿ ಗ್ರಾಮದ ಬಡನಾಗಪ್ಪ ಎನ್ನುವವರ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ಆವರಿಸಿಕೊಂಡಿದೆ, ಪರಿಣಾಮ ಹುಲ್ಲಿನ ಬಣವೆ ಸಮೀಪದಲ್ಲಿ ಕಟ್ಟಿ ಹಾಕಿದ್ದ ಐದು ಹಸುಗಳ ಪೈಕಿ ಬೆಂಕಿಯ ತೀವ್ರತೆಗೆ ಒಂದು ಹಸು ಸಜೀವ ದಹನವಾಗಿದ್ದು, ಮತ್ತೊಂದು ಹಸು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಹಸುಗಳನ್ನು ರಕ್ಷಿಸಲು ಮುಂದಾದ ರೈತ ಬಡನಾಗಪ್ಪ ಅವರಿಗೆ ಸುಟ್ಟ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ಆಕಸ್ಮಿಕ ಅಗ್ನಿ ಅವಘಡದಿಂದ ರಾಸುಗಳ ಮೇವಿಗಾಗಿ ಸಂಗ್ರಹಿಸಿದ್ದ ಎರಡು ದೊಡ್ಡ ಹುಲ್ಲಿನ ಬಣವೆಗಳು ಸುಟ್ಟು ಹೋಗಿದ್ದು, ಪಕ್ಕದ ತೋಟದ ಮನೆಯಲ್ಲಿ ಶೇಖರಿಸಿದ್ದ ಶೇಂಗಾ, ಭತ್ತ ಹಾಗೂ ಇತರ ದವಸ ಧಾನ್ಯಗಳು ಸಹ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿದ್ದು, ಲಕ್ಷಾಂತರ ರೂ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನೂ ಓದಿ | Road Accident: ಎತ್ತಿನಬಂಡಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರ ಸಾವು

ಘಟನಾ ಸ್ಥಳಕ್ಕೆ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಹೊರಕೆರಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.