ಜಮ್ಮು ಕಾಶ್ಮೀರದಲ್ಲಿ ಮುಂದುವರಿದ ಕಾರ್ಯಾಚರಣೆ; ಉಧಮ್‌ಪುರದಲ್ಲಿ ಸಿಲುಕಿಕೊಂಡ ಇಬ್ಬರು ಜೈಶ್ ಭಯೋತ್ಪಾದಕರು
ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಇತರ ಭದ್ರತಾ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿರುವ ಇಬ್ಬರು ಸಿಲುಕಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಂಗ್ರಹ ಚಿತ್ರ -
ಕಾಶ್ಮೀರ: ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಉಗ್ರರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆ ವೇಳೆ ಇಬ್ಬರು ಭಯೋತ್ಪಾದಕರು (Jaish-e-Mohammed terrorists) ಸಿಕ್ಕಿ ಬಿದ್ದಿರುವ ಸಾಧ್ಯತೆ ಇದೆ. ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯಲ್ಲಿ (Udhampur district) ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಇತರ ಭದ್ರತಾ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿರುವ ಇಬ್ಬರು ಸಿಲುಕಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯ ಸಂದರ್ಭದಲ್ಲಿ ಇಬ್ಬರು ಜೈಶ್ ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ಉಧಮ್‌ಪುರ ಜಿಲ್ಲೆಯಲ್ಲಿ ಭಾರತೀಯ ಸೇನೆಯು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಇತರ ಭದ್ರತಾ ಸಂಸ್ಥೆಗಳು ಸಹಯೋಗದೊಂದಿಗೆ ಈ ಕಾರ್ಯಾಚರಣೆಯನ್ನು ನಡೆಸಿದೆ.
ಕೋಣೆಗೆ ಕರೆದು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಚಿತ್ರದುರ್ಗದಲ್ಲಿ ಖಾಸಗಿ ಶಾಲೆ ಶಿಕ್ಷಕನ ಬಂಧನ
ಉಧಮ್‌ಪುರ ಜಿಲ್ಲೆಯ ರಾಮನಗರದ ಜೋಫರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿರುವವರೊಂದಿಗೆ ಗುಂಡಿನ ಚಕಮಕಿ ನಡೆಸಿದೆ. ಈ ಪ್ರದೇಶದಲ್ಲಿ ಕನಿಷ್ಠ ಇಬ್ಬರು ಜೈಶ್ ಭಯೋತ್ಪಾದಕರು ಅಡಗಿದ್ದಾರೆ ಎನ್ನಲಾಗಿದ್ದು, ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ.
ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕರೆಸಲಾಗಿದ್ದು, ಸ್ಥಳದಿಂದ ಯಾರೂ ತಪ್ಪಿಸಿಕೊಳ್ಳದಂತೆ ತಡೆಯಲು ಎಲ್ಲಾ ಪ್ರವೇಶ ಮತ್ತು ನಿರ್ಗಮನ ಮಾರ್ಗಗಳನ್ನು ಮುಚ್ಚಲಾಗಿದೆ ಎಂದು ಉನ್ನತ ಭದ್ರತಾ ಮೂಲಗಳು ತಿಳಿಸಿವೆ.