ರಾಂಚಿ, ಜ. 27: ಇಬ್ಬರು ಅಪ್ರಾಪ್ತ ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ (Physical assaulted) ನಡೆದಿರುವ ಘಟನೆ ಜಾರ್ಖಂಡ್‌ನ (Jharkhand) ಗಿರಿಧಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಭಾನುವಾರ (ಜನವರಿ 25) ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಇಬ್ಬರು ಅಪ್ರಾಪ್ತ ಬಾಲಕಿಯರು ಗ್ರಾಮದ ಕೆಲವು ಪರಿಚಯಸ್ಥರೊಂದಿಗೆ ಜಾತ್ರೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ತಡರಾತ್ರಿ, ಅವರು ಗುಂಪಿನಿಂದ ಬೇರ್ಪಟ್ಟು ತಮಗೆ ಪರಿಚಿತವಾಗಿರುವ ವ್ಯಕ್ತಿಯೊಂದಿಗೆ ಮನೆಗೆ ಹಿಂತಿರುಗುತ್ತಿದ್ದರು.
ನಿರ್ಜನ ಪ್ರದೇಶದಲ್ಲಿ ಐದರಿಂದ ಆರು ಪುರುಷರು ಬಂದು ಅವರನ್ನು ಸುತ್ತುವರಿದಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಹುಡುಗಿಯರ ಜತೆಗಿದ್ದ ವ್ಯಕ್ತಿ (ಬಾಲಕ ಅಥವಾ ಪುರುಷನೋ ಎಂಬುದು ತಿಳಿದುಬಂದಿಲ್ಲ) ಮೇಲೆ ಹಲ್ಲೆ ನಡೆಸಿ, ಅವನನ್ನು ಓಡಿಸಿ, ನಂತರ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ರಾಧಾ ರಮಣ ಖ್ಯಾತಿಯ ನಟಿ ಕಾವ್ಯಾ ಗೌಡಗೆ ಸಂಬಂಧಿಯಿಂದಲೇ ರೇ*ಪ್ ಬೆದರಿಕೆ, ಪತಿಯ ಮೇಲೂ ಹಲ್ಲೆ
ಸೋಮವಾರ ಈ ವಿಷಯ ಬೆಳಕಿಗೆ ಬಂದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಮಲ್ ಕುಮಾರ್ ಅವರ ನಿರ್ದೇಶನದ ಮೇರೆಗೆ, ಸ್ಥಳೀಯ ಪೊಲೀಸ್ ತಂಡಗಳು ಆರೋಪಿಗಳನ್ನು ಪತ್ತೆಹಚ್ಚಲು ಕಾರ್ಯಾಚರಿಸುತ್ತಿವೆ. ಹಿರಿಯ ಪೊಲೀಸ್ ಅಧಿಕಾರಿ ಸುಮಿತ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದು, ಮಹಿಳಾ ಪೊಲೀಸ್ ಸಿಬ್ಬಂದಿ ಸಂತ್ರಸ್ತೆಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.
ಸಮೀಪದ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಗಳನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ದೆಹಲಿಯ 5 ಸ್ಟಾರ್ ಹೋಟೆಲ್‌ನಲ್ಲಿ ವಿಷಪೂರಿತ ಆಹಾರ ಪ್ರಕರಣ
ದೆಹಲಿಯ ಬರಾಖಂಬಾ ರಸ್ತೆಯಲ್ಲಿರುವ ಪಂಚತಾರಾ ಐಷಾರಾಮಿ ಹೋಟೆಲ್ ವಿರುದ್ಧ ಪೊಲೀಸರು ಆಹಾರ ವಿಷದ ಪ್ರಕರಣ ದಾಖಲಿಸಿದ್ದಾರೆ. ಹೋಟೆಲ್‌ನಲ್ಲಿ ಬಡಿಸಿದ ಆಹಾರವನ್ನು ಸೇವಿಸಿದ ನಂತರ ಮಹಿಳೆಯೊಬ್ಬರು ತಮ್ಮ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಾಗಬೇಕಾಯಿತು ಎಂದು ಆರೋಪಿಸಿದ್ದಾರೆ. 33 ವರ್ಷದ ಮಹಿಳೆಯಿಂದ ಪಿಸಿಆರ್ ಕರೆ ಬಂದ ನಂತರ ಕ್ರಮ ಕೈಗೊಳ್ಳಲಾಗಿದೆ.
ಪೊಲೀಸರ ಪ್ರಕಾರ, ಮಹಿಳೆಯ ಹೇಳಿಕೆಯ ಆಧಾರದ ಮೇಲೆ, ಹೋಟೆಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 286ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವಿಷಕಾರಿ ವಸ್ತುಗಳನ್ನು ಒಳಗೊಂಡ ನಿರ್ಲಕ್ಷ್ಯದ ಪ್ರಕರಣಗಳಲ್ಲಿ ಈ ಸೆಕ್ಷನ್ ಅನ್ವಯಿಸುತ್ತದೆ. ಜನವರಿ 20ರಂದು ಹೋಟೆಲ್‌ಗೆ ಭೇಟಿ ನೀಡಿದ್ದಾಗಿ ಮಹಿಳೆ ಹೇಳಿದ್ದಾರೆ. ಅವರ ಬುಕಿಂಗ್ ಜನವರಿ 31ರವರೆಗೆ ಇತ್ತು. ಜನವರಿ 24 ರಂದು ಅವರು ಹೋಟೆಲ್‌ನಿಂದ ಆಹಾರವನ್ನು ಆರ್ಡರ್ ಮಾಡಿದ್ದರು.
ಊಟ ಮಾಡಿದ ಸ್ವಲ್ಪ ಸಮಯದ ನಂತರ ಅವರು ಅಸ್ವಸ್ಥಗೊಂಡರು. ತನ್ನನ್ನು ತನ್ನ ಹೋಟೆಲ್ ಕೋಣೆಯಲ್ಲಿ ಬಂಧಿಸಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ನಂತರ ಮಹಿಳಾ ಸಬ್-ಇನ್ಸ್‌ಪೆಕ್ಟರ್ ಸೇರಿದಂತೆ ಪೊಲೀಸ್ ತಂಡವು ಹೋಟೆಲ್‌ನ 12ನೇ ಮಹಡಿಯಲ್ಲಿರುವ ಆಕೆಯ ರೂಮ್‌ಗೆ ಆಗಮಿಸಿತು.
ಪದೇ ಪದೆ ಬಾಗಿಲು ಬಡಿದರೂ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ಹೋಟೆಲ್ ಸಿಬ್ಬಂದಿಯ ಸಮ್ಮುಖದಲ್ಲಿ ಮಾಸ್ಟರ್ ಕೀ ಬಳಸಿ ಬಾಗಿಲು ತೆರೆಯಲಾಯಿತು. ಮಹಿಳೆಯನ್ನು ತಕ್ಷಣ ಚಿಕಿತ್ಸೆಗಾಗಿ ಲೇಡಿ ಹಾರ್ಡಿಂಜ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಆಕೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯಕೀಯ ತಂಡವು ಆಕೆಯ ಆರೋಗ್ಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.