Chirag Paswan: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊಲೆ ಬೆದರಿಕೆ: ದೂರು ದಾಖಲು
ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್‌ಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಪಕ್ಷದ ವಕ್ತಾರ ರಾಜೇಶ್ ಭಟ್ ಶುಕ್ರವಾರ ತಿಳಿಸಿದ್ದಾರೆ. ಈ ಸಂಬಂಧ ಪಾಟ್ನಾದ ಸೈಬರ್ ಪೊಲೀಸ್ ಠಾಣೆಯಲ್ಲಿ ರಾಜೇಶ್ ಭಟ್ ದೂರು ದಾಖಲಿಸಿದ್ದು, ತಕ್ಷಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಚಿರಾಗ್ ಪಾಸ್ವಾನ್

ಪಾಟ್ನಾ: ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷ (Lok Janshakti Party) (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರಿಗೆ (Chirag Paswan ) ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ (Death Threat) ಹಾಕಲಾಗಿದೆ ಎಂದು ಪಕ್ಷದ ವಕ್ತಾರ ರಾಜೇಶ್ ಭಟ್ ಶುಕ್ರವಾರ ತಿಳಿಸಿದ್ದಾರೆ. ಈ ಸಂಬಂಧ ಪಾಟ್ನಾದ ಸೈಬರ್ ಪೊಲೀಸ್ ಠಾಣೆಯಲ್ಲಿ ರಾಜೇಶ್ ಭಟ್ ದೂರು ದಾಖಲಿಸಿದ್ದು, ತಕ್ಷಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ದೂರಿನ ಪ್ರಕಾರ, ‘ಟೈಗರ್ ಮೆರಾಜ್ ಇಡಿಸಿ’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಿಂದ ಬೆದರಿಕೆ ಬಂದಿದೆ. ಬಿಹಾರ ವಿಧಾನಸಭಾ ಚುನಾವಣೆ ಸಮಯದಲ್ಲಿ ಪಾಸ್ವಾನ್‌ರ ಜನಪ್ರಿಯತೆ ಹೆಚ್ಚುತ್ತಿರುವುದೇ ಈ ಬೆದರಿಕೆಗೆ ಕಾರಣ ಎಂದು ರಾಜೇಶ್ ಭಟ್ ಆರೋಪಿಸಿದ್ದಾರೆ. “ಈ ಕೃತ್ಯ ಕ್ರಿಮಿನಲ್ ಉದ್ದೇಶ ಮತ್ತು ಕಾನೂನುಬಾಹಿರ ಚಟುವಟಿಕೆಗಳ ಸ್ಪಷ್ಟ ಸೂಚನೆ” ಎಂದು ಅವರು ಹೇಳಿದ್ದಾರೆ.
“ಈ ವಿಷಯದ ಗಂಭೀರತೆಯನ್ನು ಗಮನಿಸಿ ತಕ್ಷಣ ಕ್ರಮ ಕೈಗೊಳ್ಳಿ. ಆರೋಪಿಯನ್ನು ಶೀಘ್ರ ಬಂಧಿಸಿ, ಕಠಿಣ ಶಿಕ್ಷೆಯನ್ನು ನೀಡಬೇಕು” ಎಂದು ದೂರಿನಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಉಸ್ತುವಾರಿಗೆ ರಾಜೇಶ್ ಭಟ್ ಮನವಿ ಮಾಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಂಡಿರುವ ಸೈಬರ್ ಡಿಸಿಪಿ ನಿತೀಶ್ ಚಂದ್ರ ಧಾರಿಯಾ, ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಬೆದರಿಕೆ ಬಂದಿತ್ತು ಎಂದು ತಿಳಿಸಿದ್ದಾರೆ. “ಪಾಟ್ನಾದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾನೂನು ಕ್ರಮ ಜಾರಿಯಲ್ಲಿದೆ,” ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನು ಓದಿ: Viral News: ಮೃಗಾಲಯಕ್ಕೆ ಭೇಟಿ ನೀಡಿದ ಶಿಕ್ಷಕಿಯ ಮೇಲೆ ಸಿಂಹ ದಾಳಿ
ಈ ಘಟನೆ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ನಡೆದಿದೆ. ಪಾಸ್ವಾನ್ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಕಳೆದ ವಾರ ಸಾರನ್‌ನಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ಅವರು, “ಸಾರನ್‌ನ ಪವಿತ್ರ ಭೂಮಿಯಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸುತ್ತಿದ್ದೇನೆ. ಬಿಹಾರದ ಜನರಿಗಾಗಿ, ಸಹೋದರರು, ತಾಯಂದಿರು, ಸಹೋದರಿಯರಿಗಾಗಿ ಸ್ಪರ್ಧಿಸುತ್ತೇನೆ. ಬಿಹಾರವನ್ನು ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಸುವ ವ್ಯವಸ್ಥೆಯನ್ನು ರೂಪಿಸುತ್ತೇವೆ” ಎಂದು ಹೇಳಿದ್ದರು.