ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಉನ್ನಾವೋ ಅತ್ಯಾಚಾರ ಆರೋಪಿ ಸೆಂಗಾರ್‌ಗೆ ಜಾಮೀನು; ಪ್ರತಿಭಟಿಸಿದ್ದ ಸಂತ್ರಸ್ತೆ ತಾಯಿ ಮೇಲೆ ಹಲ್ಲೆ

2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಹಾಗೂ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡಿದ ದಿಲ್ಲಿ ಹೈಕೋರ್ಟ್ ಆದೇಶವನ್ನು ವಿರೋಧಿಸಿ, ಸಂತ್ರಸ್ತೆ, ಆಕೆಯ ತಾಯಿ ಮತ್ತು ಮಹಿಳಾ ಕಾರ್ಯಕರ್ತೆ ಯೋಗಿತಾ ಭಯನಾ ಮಂಗಳವಾರ ಇಂಡಿಯಾ ಗೇಟ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಸಾಂದರ್ಭಿಕ ಚಿತ್ರ

ನವದೆಹಲಿ: 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಹಾಗೂ ಮಾಜಿ ಶಾಸಕ ಕುಲದೀಪ್ ಸಿಂಗ್ (Unnao Physical Abuse case) ಸೆಂಗಾರ್ ಗೆ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡಿದ ದಿಲ್ಲಿ ಹೈಕೋರ್ಟ್ ಆದೇಶವನ್ನು ವಿರೋಧಿಸಿ, ಸಂತ್ರಸ್ತೆ, ಆಕೆಯ ತಾಯಿ ಮತ್ತು ಮಹಿಳಾ ಕಾರ್ಯಕರ್ತೆ ಯೋಗಿತಾ ಭಯನಾ ಮಂಗಳವಾರ ಇಂಡಿಯಾ ಗೇಟ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ದಿಲ್ಲಿ ಪೊಲೀಸರು ಪ್ರತಿಭಟನಾಕಾರರ ಮೇಲೆ ಬಲ ಪ್ರಯೋಗಿಸಿದ್ದಾರೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೇ ಸಂತ್ರಸ್ತೆಯ ತಾಯಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ದಿಲ್ಲಿ ಪೊಲೀಸರ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರತಿಭಟನೆ ವೇಳೆ ಮಾತನಾಡಿದ ಸಂತ್ರಸ್ತೆ, ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿಯೇ ಸೆಂಗಾರ್‌ ಗೆ ಜಾಮೀನು ನೀಡಲಾಗಿದೆ ಎಂದು ಆರೋಪಿಸಿದರು. ಅತ್ಯಾಚಾರ ಆರೋಪಿ ಹೊರಗಿರುವುದು ತಮ್ಮ ಹಾಗೂ ಕುಟುಂಬದ ಸುರಕ್ಷತೆಗೆ ಅಪಾಯಕಾರಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಜಾಮೀನು ಆದೇಶ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ ಅವರು, ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದರು.

ಅಷ್ಟೇ ಅಲ್ಲದೇ, "ನಮಗೆ ನ್ಯಾಯ ಸಿಗಲಿಲ್ಲ. ಅವರು ನನ್ನ ಮಗಳನ್ನು ಸೆರೆಯಾಳುಗಳಂತೆ ಕರೆದುಕೊಂಡು ಹೋಗುತ್ತಿದ್ದಾರೆ. ಈ ಭದ್ರತಾ ಸಿಬ್ಬಂದಿ ನಮ್ಮೆಲ್ಲರನ್ನೂ ಕೊಲ್ಲಲು ಬಯಸುತ್ತಾರೆ. ಕುಲದೀಪ್ ಸೆಂಗಾರ್ ಅವರ ಜಾಮೀನು ರದ್ದುಗೊಳಿಸಬೇಕು; ಇಲ್ಲದಿದ್ದರೆ, ನಾವು ನಮ್ಮ ಪ್ರಾಣವನ್ನೇ ತ್ಯಜಿಸುತ್ತೇವೆ. ನಾವು ಸುರಕ್ಷಿತವಾಗಿಲ್ಲ ಎಂದು ಹೇಳಿದ್ದಾರೆ. ಅಧಿಕಾರಿಗಳ ಪ್ರಕಾರ, ಮಂಡಿ ಹೌಸ್ ಅಥವಾ ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗಿರಲಿಲ್ಲ. ಹೀಗಾಗಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.

2017ರ ಉನ್ನಾವ್ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್‌ಗೆ ಜಾಮೀನು ಮಂಜೂರು, ಕಠಿಣ ಷರತ್ತು ಅನ್ವಯ

2017 ರ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸೆಂಗಾರ್ ಅವರ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತುಗೊಳಿಸಿದೆ, ಅವರು ಈಗಾಗಲೇ ಏಳು ವರ್ಷ ಐದು ತಿಂಗಳು ಜೈಲು ಶಿಕ್ಷೆಯನ್ನು ಅನುಭವಿಸಿದ್ದಾರೆ ಎಂದು ಕೋರ್ಟ್‌ ಹೇಳಿದೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಮತ್ತು ನ್ಯಾಯಮೂರ್ತಿ ಹರೀಶ್ ವೈದ್ಯನಾಥನ್ ಶಂಕರ್ ಅವರ ಪೀಠವು ಸೆಂಗಾರ್ ಅವರಿಗೆ ಹಲವಾರು ಷರತ್ತುಗಳನ್ನು ವಿಧಿಸಿ, 15 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅದೇ ಮೊತ್ತದ ಮೂವರು ಶ್ಯೂರಿಟಿಗಳನ್ನು ಸಲ್ಲಿಸುವಂತೆ ನಿರ್ದೇಶಿಸಿತು.