ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Acid Attack: ಅಕ್ರಮ ಸಂಬಂಧದ ಶಂಕೆ; ಪತ್ನಿ, ಪುತ್ರಿಯರ ಮೇಲೆ ಆಸಿಡ್ ದಾಳಿ ನಡೆಸಿದ ವ್ಯಕ್ತಿ

Uttar Pradesh: ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳ ಮೇಲೆ ಆಸಿಡ್ ಎರಚಿದ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಭಾನುವಾರ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ನಿಗೋಹಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಅಕ್ರಮ ಸಂಬಂಧದ ಶಂಕೆ; ಪತ್ನಿ ಮೇಲೆ ಆಸಿಡ್‌ ದಾಳಿ ಮಾಡಿದ ವ್ಯಕ್ತಿ

Profile Vishakha Bhat Apr 21, 2025 2:26 PM

ಲಖನೌ: ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳ ಮೇಲೆ ಆಸಿಡ್ ಎರಚಿದ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಭಾನುವಾರ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ನಿಗೋಹಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ರಾಮ್ ಗೋಪಾಲ್ ತನ್ನ ಪತ್ನಿಯ ವಿವಾಹೇತರ ಸಂಬಂಧದ ಬಗ್ಗೆ ಅನುಮಾನಗೊಂಡು ತನ್ನ ಕುಟುಂಬ ಸದಸ್ಯರ ಮೇಲೆ ಆಸಿಡ್‌ ಎರಚಿದ್ದಾನೆ. ಘಟನೆಯಲ್ಲಿ ಪತ್ನಿ ಹಾಗೂ ಒಬ್ಬ ಮಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮತ್ತೊಬ್ಬ ಮಗಳಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ದ್ವಿವೇದಿ, ನಿಗೋಹಿ ಪೊಲೀಸ್ ಠಾಣೆ ಪ್ರದೇಶದಲ್ಲಿ, ರಾಮ್ ಗೋಪಾಲ್ ಎಂಬ ವ್ಯಕ್ತಿ ತನ್ನ ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂದು ಶಂಕಿಸಿ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳ ಮೇಲೆ ಆಸಿಡ್ ಎರಚಿದ್ದಾನೆ" ಎಂದು ತಿಳಿಸಿದ್ದಾರೆ. ಅವರ ಪತ್ನಿ ಮತ್ತು ಒಬ್ಬ ಮಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮತ್ತೊಬ್ಬ ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಅವರ ಚಿಕಿತ್ಸೆ ಮುಂದುವರೆದಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ನಂತರ, ರಾಮ್ ಗೋಪಾಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗೆ ಆಸಿಡ್‌ ಮಾರಾಟ ಮಾಡಿದ ವ್ಯಕ್ತಿಯನ್ನೂ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: UP Horror: ಮದುವೆಯಾದ ಎರಡೇ ವಾರಕ್ಕೆ ಪ್ರಿಯಕರನ ಜೊತೆ ಸೇರಿ ಪತಿ ಹತ್ಯೆಗೆ ಸುಪಾರಿ; ಖತರ್ನಾಕ್‌ ಜೋಡಿ ಖಾಕಿ ಬಲೆಗೆ

ಪ್ರತ್ಯೇಕ ಘಟನೆಯಲ್ಲಿ ಪತ್ನಿಯನ್ನು ಬೆನ್ನಟ್ಟಿ ಹೋಗಿ ಆಸಿಡ್‌ ಎರೆಚಿದ ಘಟನೆ ಕೇರಳದ ಕೋಯಿಕ್ಕೋಡ್‌ನಲ್ಲಿ ನಡೆದಿದೆ. ಆರೋಪಿಯನ್ನು ಪ್ರಶಾಂತ್‌ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಪತ್ನಿಗೆ ಮೂರು ವರ್ಷಗಳ ಹಿಂದೆಯೇ ವಿಚ್ಛೇದನ ನೀಡಿದ್ದ. ಹೀಗಾಗಿ ಆಕೆ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದಳು. ಆಕೆ ಆಯುರ್ವೇದ ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ಬಂದಿದ್ದಳು. ಆಗ ಪ್ರಶಾಂತ್‌ ಆಕೆಯ ಮೇಲೆ ಆಸಿಡ್‌ ದಾಳಿ ಮಾಡಿದ್ದಾನೆ. ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಆತ ಬೆನ್ನಟ್ಟಿ ಹೋಗಿ ಆಸಿಡ್‌ ಹಾಕಕಿದ್ದಾನೆ. ಮಹಿಳೆಯ ಮುಖ ಹಾಗೂ ಎದೆಯ ಭಾಗಕ್ಕೆ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.