ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ಗೆಳೆಯನ ಜೊತೆ ಚಕ್ಕಂದ; ಅಡ್ಡ ಬಂದ ಗಂಡನನ್ನೇ ಮುಗಿಸಿ ಹಾರ್ಟ್‌ ಅಟ್ಯಾಕ್‌ ಎಂದು ಕಥೆ ಕಟ್ಟಿದ್ಲು!

ಅಕ್ರಮ ಸಂಬಂಧಕ್ಕಾಗಿ ತನ್ನ ಪ್ರಿಯಕರನ ಜೊತೆಗೂಡಿ ಪತಿಯನ್ನು ಕೊಂದ ಘಟನೆ ಉತ್ತರ ಪ್ರದೇಶದ (Uttara Pradesh) ಬುಲಂದ್‌ಶಹರ್‌ನ ಪಾರ್ತಾಪುರ ಗ್ರಾಮದಲ್ಲಿ ನಡೆದಿದೆ. ಪ್ರೀತಿ ಎಂದು ಗುರುತಿಸಲಾದ ಮಹಿಳೆ ತನ್ನ ಪ್ರಿಯಕರ ಅಭಯ್ ಜೊತೆ ಸೇರಿ ತನ್ನ 37 ವರ್ಷದ ಪತಿ ಓಂಪಾಲ್‌ನನ್ನು ಕೊಲೆ ಮಾಡಲು ಸಂಚು ರೂಪಿಸಿ ಕೊಲೆ ಮಾಡಿದ್ದಾರೆ

ಲಖನೌ: ಅಕ್ರಮ ಸಂಬಂಧಕ್ಕಾಗಿ ತನ್ನ ಪ್ರಿಯಕರನ ಜೊತೆಗೂಡಿ ಪತಿಯನ್ನು ಕೊಂದ ಘಟನೆ ಉತ್ತರ ಪ್ರದೇಶದ (Uttar Pradesh) ಬುಲಂದ್‌ಶಹರ್‌ನ ಪಾರ್ತಾಪುರ ಗ್ರಾಮದಲ್ಲಿ ನಡೆದಿದೆ. ಪ್ರೀತಿ ಎಂದು ಗುರುತಿಸಲಾದ ಮಹಿಳೆ ತನ್ನ ಪ್ರಿಯಕರ ಅಭಯ್ ಜೊತೆ ಸೇರಿ ತನ್ನ 37 ವರ್ಷದ ಪತಿ ಓಂಪಾಲ್‌ನನ್ನು ಕೊಲೆ ಮಾಡಲು ಸಂಚು ರೂಪಿಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪರಾಧ ಬೆಳಕಿಗೆ ಬಂದ ಕೂಡಲೇ ಇಬ್ಬರನ್ನೂ ಬಂಧಿಸಲಾಗಿದೆ. ಪ್ರೀತಿ ಮತ್ತು ಅಭಯ್ ಕಳೆದ ಎರಡು ವರ್ಷಗಳಿಂದ ಅಕ್ರಮ ಸಂಬಂಧದಲ್ಲಿದ್ದರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ.

ಪ್ರೀತಿ ಮತ್ತು ಅಭಯ್ ಒಟ್ಟಿಗೆ ಜೀವನ ನಡೆಸಲು ನಿರ್ಧಾರ ಮಾಡಿದ್ದರು. ಆದರೆ ಓಂಪಾಲ್‌ ಅದಕ್ಕೆ ಅಡ್ಡಿಯಾಗಿದ್ದ. ಹೀಗಾಗಿ ಆಕೆ ಗಂಡನ ಕೊಲೆಗೆ ಸಂಚು ರೂಪಿಸಿದ್ದಳು. ಸೋಮವಾರ ರಾತ್ರಿ, ಪ್ರೀತಿ ಮತ್ತು ಅಭಯ್ ದುಪಟ್ಟಾದಿಂದ ಓಂಪಾಲ್ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಬಳಿಕ ಆತನ ಹತ್ಯೆಯನ್ನು ಮುಚ್ಚಿ ಹಾಕಲು ಆರೋಪಿಗಳು ಓಂಪಾಲ್ ಅವರಿಗೆ ಹೃದಯಾಘಾತವಾಗಿದೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ. ಗ್ರಾಮಸ್ಥರು ಮತ್ತು ಕುಟುಂಬವನ್ನು ದಾರಿ ತಪ್ಪಿಸಲು ಆತನ ಸಾವು ನೈಸರ್ಗಿಕ ಎಂದು ಪ್ರೀತಿ ನಾಟಕವಾಡಿದ್ದಳು.

ಆದರೆ ಓಂಪಾಲ್‌ ಸಾವಿನ ಬಗ್ಗೆ ಕುಟುಂಬಸ್ಥರಿಗೆ ಅನುಮಾನ ಮೂಡಿ, ಸಹೋದರ ಕರಣ್ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ವಿಚಾರಣೆಯ ಸಮಯದಲ್ಲಿ, ಪ್ರೀತಿ ಮತ್ತು ಅಭಯ್ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ವಿಚಾರಣೆಯ ಸಮಯದಲ್ಲಿ, ಓಂಪಾಲ್ ತಮ್ಮ ಪ್ರೇಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದನೆಂದು ಇಬ್ಬರೂ ಒಪ್ಪಿಕೊಂಡರು, ಎಂದು ಬುಲಂದ್‌ಶಹರ್ ನಗರ ಎಸ್‌ಪಿ ಶಂಕರ್ ಪ್ರಸಾದ್ ಹೇಳಿದ್ದಾರೆ. ಕೊಲೆಗೆ ಬಳಸಿದ ದುಪಟ್ಟಾವನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಕೊಲೆಗೆ ಸಂಬಂಧಿಸಿದ ಇತರ ಅಂಶಗಳನ್ನು ಬಹಿರಂಗಪಡಿಸಲು ಹೆಚ್ಚಿನ ತನಿಖೆ ಮುಂದುವರೆದಿದೆ.

ಈ ಸುದ್ದಿಯನ್ನೂ ಓದಿ: Murder Case: ಹೆಂಡತಿಯನ್ನು ತವರಿಗೆ ಕರೆದೊಯ್ದ ಅತ್ತೆಯನ್ನೇ ಕೊಲೆಗೈದ ಅಳಿಯ

ಪ್ರತ್ಯೇಕ ಘಟನೆಯಲ್ಲಿ, ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕಣ್ಣಿಗೆ ಖಾರದ ಪುಡಿ ಎರಚಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ತುಮಕೂರಿನ ತಿಪಟೂರಿನಲ್ಲಿ ಈ ಘಟನೆ ವರದಿಯಾಗಿದ್ದು, ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿದ್ದಾಳೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕಾಡುಶೆಟ್ಟಿ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, 50 ವರ್ಷದ ಶಂಕರಮೂರ್ತಿ ಎಂಬುವವರನ್ನು ಅವರ ಪತ್ನಿ ಸುಮಂಗಳಾ ಮತ್ತು ಆಕೆಯ ಪ್ರಿಯಕರ ನಾಗರಾಜು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಕೊಲೆಯ ನಂತರ ಶವವನ್ನು ಗೋಣಿಚೀಲದಲ್ಲಿ ತುಂಬಿ ಸುಮಾರು 30 ಕಿಮೀ ಸಾಗಿಸಿ, ತುರುವೇಕೆರೆ ತಾಲೂಕಿನ ದಂಡನಶಿವರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಬಾವಿಯೊಂದಕ್ಕೆ ಎಸೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳಾದ ಸುಮಂಗಳಾ ಮತ್ತು ನಾಗರಾಜು ಪೊಲೀಸ್ ವಶದಲ್ಲಿದ್ದಾರೆ.