ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ಆಸ್ಪತ್ರೆಯಲ್ಲೇ ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆ

Self Harming: ಆತ್ಮಹತ್ಯೆಗೆ ಶರಣಾದ ವೈದ್ಯ ಡಾ. ರಾಜಶೇಖರ್ ಎಂದು ತಿಳಿದುಬಂದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಡಾ. ರಾಜಶೇಖರ್ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ವೈದ್ಯ ಡಾ. ರಾಜಶೇಖರ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಆಸ್ಪತ್ರೆಯಲ್ಲೇ ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆ

ಮೃತ ಡಾ.ರಾಜಶೇಖರ್

ಹರೀಶ್‌ ಕೇರ ಹರೀಶ್‌ ಕೇರ Apr 7, 2025 9:55 AM

ವಿಜಯಪುರ : ವಿಜಯಪುರ (Vijayapura news) ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಒಬ್ಬರು ವೈದ್ಯರು (Doctor) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Self harming) ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವೈದ್ಯ ಡಾ. ರಾಜಶೇಖರ್ ಎಂದು ತಿಳಿದುಬಂದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಡಾ. ರಾಜಶೇಖರ್ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ವೈದ್ಯ ಡಾ. ರಾಜಶೇಖರ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡು ಪರಿಶೀಲಿಸಲಾಗುತ್ತಿದೆ. ಸಿಬ್ಬಂದಿಯನ್ನು ಕೂಡ ಪ್ರಶ್ನಿಸಲಾಗುತ್ತಿದೆ. ಸದ್ಯ ಯಾವುದೇ ಡೆತ್‌ನೋಟ್‌ ಕಂಡುಬಂದಿಲ್ಲವಾದ್ದರಿಂದ ಆತ್ಮಹತ್ಯೆಯ ಕಾರಣ ತಿಳಿಯಲು ಪೊಲೀಸರು ಶೋಧಕ್ಕಿಳಿದಿದ್ದಾರೆ.

ಟ್ರಾಕ್ಟರ್‌ ಮಗುಚಿ ಬಾಲಕಿ ಸಾವು, ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, 9 ವರ್ಷದ ಬಾಲಕಿಯ ಮೇಲೆ ಟ್ರಾಕ್ಟರ್ ಹರಿದು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಕೆರೆ ಏರಿ ಮೇಲೆ ಚಲಿಸುತ್ತಿದ್ದ ಟ್ರ್ಯಾಕ್ಟರ್‌ ಉರುಳಿ ಬಿದ್ದ ಪರಿಣಾಮ 9 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ವೈಟ್‌ಫೀಲ್ಡ್‌ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಇಸಿನಾಕಾ ಭಟ್‌ (9) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಚಾಲಕ ಹಾಗೂ ಆರು ವರ್ಷದ ಬಾಲಕಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಚಾಲಕ ತನ್ನ ಆರು ಮತ್ತು ಒಂಬತ್ತು ವರ್ಷದ ಮಕ್ಕಳನ್ನು ಟ್ರ್ಯಾಕ್ಟರ್‌ನಲ್ಲಿ ಕೂರಿಸಿಕೊಂಡು ತನ್ನ ಶೆಡ್‌ಗೆ ಹೋಗುತ್ತಿದ್ದರು. ಪಟ್ಟಂದೂರು ಅಗ್ರಹಾರ ಕೆರೆ ಏರಿ ಮೇಲೆ ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಉರುಳಿದ ಟ್ರ್ಯಾಕ್ಟರ್‌ ಕೆರೆಗೆ ಬಿದ್ದಿದೆ. ಆಗ ಟ್ರ್ಯಾಕ್ಟರ್ ಕೆಳಗೆ ಸಿಲುಕಿಕೊಂಡ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಚಾಲಕ ಮತ್ತು ಆರು ವರ್ಷದ ಬಾಲಕಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದರು. ವೈಟ್‌ಫೀಲ್ಡ್‌ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: Vinay Somaiah death: ಆತ್ಮಹತ್ಯೆಗೆ ಮುನ್ನ ಪತ್ನಿಗೆ ಪತ್ರ ಬರೆದಿದ್ದ ವಿನಯ್, ಲೆಟರ್​ನಲ್ಲಿ ಏನಿದೆ?