Self Harming: ವಿರಾಜಪೇಟೆ ಕಾಂಗ್ರೆಸ್ ಶಾಸಕ ಪೊನ್ನಣ್ಣ ಆಪ್ತ ಸಹಾಯಕನ ಪತ್ನಿ ಆತ್ಮಹತ್ಯೆ
ಕಾಂಗ್ರೆಸ್ ಶಾಸಕ ಪೊನ್ನಣ್ಣ ಅವರ ಆಪ್ತ ಸಹಾಯಕ ಮಹೇಂದ್ರ ಅವರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ 35 ವರ್ಷದ ಶೃತಿ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಪಿಡಬ್ಲ್ಯೂಡಿ ಕ್ವಾಟರ್ಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.


ವಿರಾಜಪೇಟೆ: ಕಾಂಗ್ರೆಸ್ ಶಾಸಕ ಪೊನ್ನಣ್ಣ ಅವರ ಆಪ್ತ ಸಹಾಯಕ ಮಹೇಂದ್ರ ಅವರ ಪತ್ನಿ ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ 35 ವರ್ಷದ ಶೃತಿ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಪಿಡಬ್ಲ್ಯೂಡಿ ಕ್ವಾಟರ್ಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಕೆಲ ತಿಂಗಳುಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಶೃತಿ ಮನೆಯಲ್ಲಿಯೇ ವಿಷ ಸೇವಿಸಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದರು.
ಹೀಗಾಗಿ ಅವರನ್ನು ಹಾಸನದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಊಹಿಸಲಾಹಿದೆ. ಕಲ್ಗನೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶೃತಿ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಪಿಡಬ್ಲ್ಯೂಡಿ ಕ್ವಾಟರ್ಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.
ಹೆಬ್ಬಾಳ ಫ್ಲೈ ಓವರ್ ಮೇಲೆ ಸರಣಿ ಅಪಘಾತ
ಹೆಬ್ಬಾಳದ ಕೊಡಿಗೇಹಳ್ಳಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಲಾರಿ ಚಾಲಕರೊಬ್ಬರು ಮೃತಪಟ್ಟಿದ್ದಾರೆ. ಕಸ ತುಂಬಿದ್ದ ಲಾರಿಯ ಮೇಲೆ ಕಲ್ಲು ತುಂಬಿದ್ದ ಟ್ರಕ್ ಪಲ್ಟಿಯಾಗಿದ್ದು, ಲಾರಿ ಚಾಲಕ ಮೃತಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಕಾರು ಡಿಕ್ಕಿಯಾಗಿದೆ. ಮೂರು ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಬರುವ ಮಾರ್ಗದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಈ ಸುದ್ದಿಯನ್ನೂ ಓದಿ: Self Harming Case: ಅಮ್ಮಾ ನಾನು ಕಳ್ಳ ಅಲ್ಲ... ಚಿಪ್ಸ್ ಕದ್ದನೆಂದು ಬೈದ ಅಂಗಡಿ ಮಾಲೀಕ- ಮನನೊಂದು ಬಾಲಕ ಆತ್ಮಹತ್ಯೆ
ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಹೆಬ್ಬಾಳ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿದೆ. 10 ವ್ಹೀಲರ್ ಓಪನ್ ಬಾಡಿ ವಾಹನ, ಕಸದ ಲಾರಿ ಮತ್ತು ಎರ್ಟಿಗಾ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಈ ಪರಿಣಾಮ ರಸ್ತೆ ಮೇಲೆಯೇ ಕಲ್ಲು ತುಂಬಿದ್ದ ಟ್ರಕ್ ಪಲ್ಟಿ ಹೊಡೆದಿದೆ. ಅಪಘಾತದಲ್ಲಿ ಇಬ್ಬರಿಗೆ ಗಾಯವಾಗಿದ್ದು, ಮೃತಪಟ್ಟ ಟ್ರಕ್ ಚಾಲಕನನ್ನು ಫಯಾಜ್ ಅಹಮ್ಮದ್ ಎಂದು ಗುರುತಿಸಲಾಗಿದೆ.