ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕಲ್ಲಂಗಡಿ ಹಣ್ಣುಗಳಡಿಯಲ್ಲಿ ಸ್ಫೋಟಕಗಳ ಸಾಗಾಟ; ತನಿಖೆಯಲ್ಲಿ ಬಯಲಾಯ್ತು ಶಾಕಿಂಗ್‌ ಸಂಗತಿ

ಪಾಲಕ್ಕಾಡ್‌ನ ವಲಯಾರ್–ವಡಕ್ಕೆಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಿನಿ ಲಾರಿಯೊಂದರಲ್ಲಿ ಕಲ್ಲಂಗಡಿ ಹಣ್ಣುಗಳ ನಡುವೆ ಗುಪ್ತವಾಗಿ ಸಾಗಿಸಲಾಗುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಕೇರಳ ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಲಾರಿ ಚಾಲಕ ಸೆಂಥಿಲ್ ಕುಮಾರ್ ಅನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ವಶಪಡಿಸಿಕೊಂಡ ಸ್ಪೋಟಕ

ತಿರುವನಂತಪುರಂ: ಪಾಲಕ್ಕಾಡ್‌ (Palakkad)ನ ವಲಯಾರ್-ವಡಕ್ಕೆಂಚೇರಿ (Walayar-Vadakkenchery) ರಾಷ್ಟ್ರೀಯ ಹೆದ್ದಾರಿಯಲ್ಲಿ ಮಿನಿ ಲಾರಿಯಲ್ಲಿ ಕಲ್ಲಂಗಡಿ ಹಣ್ಣುಗಳ ಮಧ್ಯೆ ಗುಪ್ತವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ವಸ್ತುಗಳನ್ನು (explosive materials) ಕೇರಳ (Kerala) ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಸಂಬಂಧ ತಮಿಳುನಾಡಿ (Tamil Nadu) ಧರ್ಮಪುರಿ (Dharmapuri) ಜಿಲ್ಲೆಯ ನಿವಾಸಿ, ಲಾರಿ ಚಾಲಕ ಸೆಂಥಿಲ್ ಕುಮಾರ್ (Senthil Kumar) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲಕ್ಷಾಂತರ ರೂಪಾಯಿ ಮೌಲ್ಯದ ಸ್ಫೋಟಕ ಜಪ್ತಿ ವರದಿಗಳ ಪ್ರಕಾರ ಲಾರಿಯಲ್ಲಿದ್ದ 100ಕ್ಕೂ ಹೆಚ್ಚು ಪೆಟ್ಟಿಗೆಗಳಿಂದ ಸುಮಾರು 4,000 ಜಿಲೆಟಿನ್ ಕಡ್ಡಿಗಳು ಮತ್ತು 17 ಡಿಟೋನೇಟರ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಈ ಸ್ಫೋಟಕಗಳನ್ನು ಸಾಗಾಟದ ವೇಳೆ ತಪಾಸಣೆಯಿಂದ ತಪ್ಪಿಸಿಕೊಳ್ಳಲು ಕಲ್ಲಂಗಡಿ ಹಣ್ಣುಗಳ ರಾಶಿಯ ಅಡಿಯಲ್ಲಿ ಅಡಗಿಸಿಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಿಯಕರನೊಂದಿಗೆ ಸೇರಿ ಮಾವನ ಕತ್ತು ಸೀಳಿ ಕೊಲೆಗೈದ ಸೊಸೆ; ಭೀಕರ ದೃಶ್ಯವನ್ನು ರೆಕಾರ್ಡ್ ಮಾಡಿದ ಪಾಪಿಗಳು

ಪೊಲೀಸ್ ಕಾರ್ಯಾಚರಣೆ


ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಪಾಲಕ್ಕಾಡ್ ಸರ್ಕಾರಿ ವೈದ್ಯಕೀಯ ಕಾಲೇಜು ಸಮೀಪದ ಸರ್ವಿಸ್ ರಸ್ತೆಯಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದೆ. ಖಚಿತ ಮಾಹಿತಿಯ ಮೇರೆಗೆ ದಕ್ಷಿಣ ಇನ್ಸ್‌ಪೆಕ್ಟರ್ ವಿಪಿನ್ ಕುಮಾರ್ ನೇತೃತ್ವದ ತಂಡವು ವಾಹನವನ್ನು ತಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ ಮೇಲೆ ಹರಡಿದ್ದ ಕಲ್ಲಂಗಡಿ ಹಣ್ಣುಗಳನ್ನು ತೆಗೆದಾಗ ಅವುಗಳ ಅಡಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸ್ಫೋಟಕದ ಪೆಟ್ಟಿಗೆಗಳು ಪತ್ತೆಯಾಗಿವೆ.

ಪ್ರಾಥಮಿಕ ವಿಚಾರಣೆಯ ವೇಳೆ, ಸ್ಫೋಟಕಗಳನ್ನು ತಮಿಳುನಾಡಿನ ಸೇಲಂನಿಂದ ಕೇರಳದ ತ್ರಿಶೂರ್‌ಗೆ ಕೊಂಡೊಯ್ಯಲಾಗುತ್ತಿತ್ತು ಎಂದು ಚಾಲಕ ಪೊಲೀಸರಿಗೆ ತಿಳಿಸಿದ್ದಾನೆ. ಈ ಸ್ಫೋಟಕಗಳು ಯಾರಿಗೆ ತಲುಪಬೇಕಿತ್ತು ಮತ್ತು ಇದಕ್ಕೆ ಅಧಿಕೃತ ಪರವಾನಗಿ ಇತ್ತೇ ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಅಲ್ಲದೇ ಸ್ಫೋಟಕಗಳನ್ನು ಪರಿಶೀಲಿಸಿ ಸುರಕ್ಷಿತವಾಗಿ ವಶಪಡಿಸಿಕೊಳ್ಳಲು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳವನ್ನು ಕೂಡ ಕರೆಸಲಾಗಿತ್ತು.

ಕೇರಳ-ತಮಿಳುನಾಡು ಗಡಿಯಲ್ಲಿ ಸ್ಫೋಟಕಗಳ ಅಕ್ರಮ ಸಾಗಾಟ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಕಳೆದ ವರ್ಷವೊಂದರಲ್ಲೇ ಪಾಲಕ್ಕಾಡ್ ಮತ್ತು ಕೊಯಮತ್ತೂರು ಪೊಲೀಸರು 40,000ಕ್ಕೂ ಹೆಚ್ಚು ಜೆಲಟಿನ್ ಕಡ್ಡಿಗಳು ಮತ್ತು 5,000ಕ್ಕೂ ಹೆಚ್ಚು ಡಿಟೊನೇಟರ್‌ಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ವಶಪಡಿಸಿಕೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.